Homeಮುಖಪುಟಪಹಲ್ಗಾಮ್ | ಪ್ರವಾಸಿಗರ ರಕ್ಷಣೆಗಾಗಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಲೆ ಮೃತಪಟ್ಟ ಆದಿಲ್ ಹುಸೇನ್

ಪಹಲ್ಗಾಮ್ | ಪ್ರವಾಸಿಗರ ರಕ್ಷಣೆಗಾಗಿ ಭಯೋತ್ಪಾದಕರ ವಿರುದ್ಧ ಹೋರಾಡುತ್ತಲೆ ಮೃತಪಟ್ಟ ಆದಿಲ್ ಹುಸೇನ್

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ಸ್ಥಳೀಯ ನಿವಾಸಿ, ಕುದುರೆ ಸವಾರ ಸೈಯದ್ ಆದಿಲ್ ಹುಸೇನ್ ಶಾ ಅವರು ದಾಳಿಕೋರನಿಂದ ರೈಫಲ್ ಕಸಿದುಕೊಳ್ಳಲು ಪ್ರಯತ್ನಿಸಿ, ಭಯೋತ್ಪಾದನ ವಿರುದ್ಧ ಹೋರಾಡಿ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಪಹಲ್ಗಾಮ್

ಭಯೋತ್ಪಾದಕರು ಹಾರಿಸಿದ ಗುಂಡುಗಳಿಂದ ತಪ್ಪಿಸಿಕೊಳ್ಳಲು ಪ್ರವಾಸಿಗರು ಪರದಾಡುತ್ತಿದ್ದಾಗ, ಆದಿಲ್ ಅವರು ಭಯೋತ್ಪಾದಕನಿಂದ ರೈಫಲ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಾ, ಅವರ ವಿರುದ್ಧ ಹೋರಾಟ ಮಾಡುವ ಅಸಾಧಾರಣ ಧೈರ್ಯವನ್ನು ಪ್ರದರ್ಶಿಸಿದರು ಎಂದು ವರದಿ ಉಲ್ಲೇಖಿಸಿದೆ.

ಆದಿಲ್ ಅವರು ಪ್ರವಾಸಿಗರನ್ನು ಕಾರು ಪಾರ್ಕಿಂಗ್ ಸ್ಥಳದಿಂದ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿಗೆ ಕಾಲ್ನಡಿಗೆಯಲ್ಲಿ ಮಾತ್ರ ತೆರಳಬಹುದಾದ ಸ್ಥಳಕ್ಕೆ ತನ್ನ ಕುದುರೆಯ ಮೇಲೆ ಕರೆದೊಯ್ಯುವ ಕೆಲಸ ಮಾಡುವವರಾಗಿದ್ದಾರೆ. ಅವರು ಭಯೋತ್ಪಾದಕರಲ್ಲಿ ಒಬ್ಬನ ವಿರುದ್ಧ ಹೋರಾಡಲು ಪ್ರಯತ್ನಿಸುತ್ತಿದ್ದಾಗ ಗುಂಡು ಹಾರಿಸಿ ಕೊಲ್ಲಲ್ಪಟ್ಟಿದ್ದಾರೆ. ಈ ವೇಳೆ ಅವರು ಸ್ಥಳಕ್ಕೆ ಕರೆತಂದಿದ್ದ ಪ್ರವಾಸಿಗರನ್ನು ರಕ್ಷಿಸಲು ಪ್ರಯತ್ನಿಸಿದ್ದರು.

ಭಯೋತ್ಪಾದಕರು 28 ಜನರನ್ನು ಹತ್ಯೆ ಮಾಡಿದ್ದು, ದಾಳಿಯಲ್ಲಿ ಕೊಲ್ಲಲ್ಪಟ್ಟ ಏಕೈಕ ಸ್ಥಳೀಯ ವ್ಯಕ್ತಿ ಆದಿಲ್ ಆಗಿದ್ದಾರೆ. ಮೃತ ಆದಿಲ್ ಅವರು ತನ್ನ ವೃದ್ಧ ತಂದೆ-ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಒಳಗೊಂಡ ಕುಟುಂಬದ ಏಕೈಕ ಜೀವನಾಧಾರವಾಗಿದ್ದಾರೆ. ತನ್ನ ಮಗನನ್ನು ಕಳೆದುಕೊಂಡು ದುಃಖಿತರಾದ ಅವರ ತಾಯಿ ಕಣ್ಣೀರಿಡುತ್ತಾ, ಕುಟುಂಬದ ಭವಿಷ್ಯದ ಬಗ್ಗೆಯೂ ಚಿಂತಿತರಾಗಿದ್ದಾರೆ. ಕುಟುಂಬವು ನ್ಯಾಯಕ್ಕಾಗಿ ಮನವಿ ಮಾಡಿದೆ.

“ನನ್ನ ಮಗ ನಿನ್ನೆ ಕೆಲಸಕ್ಕೆಂದು ಪಹಲ್ಗಾಮ್‌ಗೆ ಹೋಗಿದ್ದ. ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಳಿಯ ಬಗ್ಗೆ ನಮಗೆ ತಿಳಿಯಿತು. ನಾವು ಅವನಿಗೆ ಕರೆ ಮಾಡಿದೆವು, ಆದರೆ ಅವನ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ, ಸಂಜೆ 4.40 ಕ್ಕೆ, ಅವನ ಫೋನ್ ಆನ್ ಆಯಿತು, ಆದರೆ ಯಾರೂ ಉತ್ತರಿಸಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಂತರ ನಾವು ಪೊಲೀಸ್ ಠಾಣೆಗೆ ಧಾವಿಸಿದೆವು. ದಾಳಿಯಲ್ಲಿ ಅವನ ಮೇಲೆ ಗುಂಡು ಹಾರಿಸಲಾಗಿದೆ ಎಂದು ಆಗ ನಮಗೆ ತಿಳಿದುಬಂತು. ಇದಕ್ಕೆ ಕಾರಣಕರ್ತರು ಯಾರೇ ಆಗಿರಲಿ ಅದರ ಪರಿಣಾಮಗಳನ್ನು ಎದುರಿಸಲೇಬೇಕು” ಎಂದು ಅವರ ತಂದೆ ಸೈಯದ್ ಹೈದರ್ ಶಾ ಹೇಳಿದ್ದಾರೆ.

ಈ ನಡುವೆ, ದಾಳಿಯನ್ನು ಖಂಡಿಸಿ ಜಮ್ಮು ಕಾಶ್ಮೀರದ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಬಂದ್ ಯಶಸ್ವಿಯಾಗಿದೆ. ರಾಜ್ಯ ರಾಜಧಾನಿ ಶ್ರೀನಗರ ಮತ್ತು ಕಣಿವೆಯ ಇತರ ಭಾಗಗಳಲ್ಲಿ ಅಂಗಡಿಗಳು, ವ್ಯಾಪಾರ ಸಂಸ್ಥೆಗಳು ಮತ್ತು ಇಂಧನ ಕೇಂದ್ರಗಳು ಮುಚ್ಚಲ್ಪಟ್ಟವು. ರಸ್ತೆಗಳಲ್ಲಿ ಖಾಸಗಿ ವಾಹನಗಳು ಕಂಡುಬಂದರೂ ಸಾರ್ವಜನಿಕ ಸಾರಿಗೆ ವಿರಳವಾಗಿತ್ತು. ಖಾಸಗಿ ಶಾಲೆಗಳು ಮುಚ್ಚಲ್ಪಟ್ಟಿದ್ದರೂ, ಸರ್ಕಾರಿ ಶಾಲೆಗಳು ತೆರೆದಿದ್ದವು.

ಕಾಶ್ಮೀರ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (ಕೆಸಿಸಿಐ), ಕಾಶ್ಮೀರ ವ್ಯಾಪಾರಿಗಳು ಮತ್ತು ತಯಾರಕರ ಒಕ್ಕೂಟ (ಕೆಟಿಎಂಎಫ್), ಮುಸ್ಲಿಂ ಧಾರ್ಮಿಕ ಗುಂಪು ಮುತ್ತಹಿದಾ ಮಜ್ಲಿಸ್ ಉಲೇಮಾ (ಎಂಎಂಯು) ಮತ್ತು ಜಮ್ಮು ಕಾಶ್ಮೀರದ ಗ್ರ್ಯಾಂಡ್ ಮುಫ್ತಿ ನಾಸಿರ್-ಉಲ್-ಇಸ್ಲಾಂ ಸೇರಿದಂತೆ ಹಲವಾರು ಗುಂಪುಗಳು ಜಂಟಿಯಾಗಿ ಈ ಬಂದ್‌ಗೆ ಕರೆ ನೀಡಿವೆ.

“ಇಂತಹ ಭಯೋತ್ಪಾದಕ ಮತ್ತು ಹಿಂಸಾಚಾರದ ಕೃತ್ಯಗಳು ಸ್ವೀಕಾರಾರ್ಹವಲ್ಲ. ಇದಕ್ಕೆ ನಮ್ಮ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಭಯೋತ್ಪಾದನೆಯ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ನಿಂತು ಶಾಂತಿಯುತ ಮತ್ತು ಸಾಮರಸ್ಯದ ಸಮುದಾಯವನ್ನು ಸೃಷ್ಟಿಸಲು ಶ್ರಮಿಸಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಕಾಶ್ಮೀರದ ಗ್ರಾಂಡ್ ಮುಫ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಮ್ಮುವಿನಲ್ಲಿಯೂ ಸಹ, ಬಂದ್‌ಗೆ ಬಲವಾದ ಬೆಂಬಲ ದೊರೆಯಿತು. ಜಮ್ಮು ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಅರುಣ್ ಗುಪ್ತಾ, ಜಮ್ಮು ಬಾರ್ ಅಸೋಸಿಯೇಷನ್ ​​ಜೊತೆಗೆ ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದಾರೆ. ಬಂದ್‌ನಲ್ಲಿ ಜಮ್ಮು ನಗರ ಮತ್ತು ಇತರ ಪ್ರಮುಖ ಪ್ರದೇಶಗಳಲ್ಲಿ ಇದೇ ರೀತಿಯ ದೃಶ್ಯಗಳು ಕಂಡುಬಂದವು.

ಹಲವಾರು ರಾಜಕೀಯ ನಾಯಕರು ಮತ್ತು ಪಕ್ಷಗಳು ಸಹ ಬಂದ್‌ಗೆ ತಮ್ಮ ಬೆಂಬಲವನ್ನು ನೀಡಿವೆ. ಅವರಲ್ಲಿ ಪೀಪಲ್ಸ್ ಕಾನ್ಫರೆನ್ಸ್ (ಪಿಸಿ) ಅಧ್ಯಕ್ಷ ಮತ್ತು ಶಾಸಕ ಹಂದ್ವಾರ, ಸಜಾದ್ ಗನಿ ಲೋನ್ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಸೇರಿದ್ದಾರೆ. ಅವರು ಸಂತ್ರಸ್ತರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಈ ಘೋರ ಕೃತ್ಯವನ್ನು ಖಂಡಿಸಿದ್ದಾರೆ.

ಕಣಿವೆಯಾದ್ಯಂತ, ವಿಶೇಷವಾಗಿ ಪ್ರಮುಖ ಪ್ರವಾಸಿ ತಾಣಗಳ ಸುತ್ತಲೂ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಮಾತ್ರ ತೆರೆದಿಡಲು ಅನುಮತಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅದಾಗ್ಯೂ, ಬಂದ್‌ನ ಪರಿಣಾಮ ಕಣಿವೆಯ ಬಹುತೇಕ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ ಎಂದು ವರದಿಯಾಗಿದೆ.

ಜನರು, ರಾಜಕೀಯ ಪಕ್ಷಗಳು, ಧಾರ್ಮಿಕ ಸಂಸ್ಥೆಗಳು ಮತ್ತು ನಾಗರಿಕ ಸಮಾಜ ಗುಂಪುಗಳ ಸಾಮೂಹಿಕ ಧ್ವನಿಯು ಭಯೋತ್ಪಾದನೆಯ ವಿರುದ್ಧ ಬಲವಾದ ಸಂದೇಶವನ್ನು ರವಾನಿಸಿದೆ ಎಂದು ವರದಿಗಳು ಉಲ್ಲೇಖಿಸಿವೆ. ಪಹಲ್ಗಾಮ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...