Homeಅಂತರಾಷ್ಟ್ರೀಯರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ: ಅಮೆರಿಕ...

ರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ: ಅಮೆರಿಕ ಖಂಡನೆ

- Advertisement -
- Advertisement -

ಉಕ್ರೇನ್ NATOಗೆ ಸದಸ್ಯ ರಾಷ್ಟ್ರವಾಗಲು ಮುಂದಾಗಿರುವುದನ್ನು ವಿರೋಧಿಸಿ ಮತ್ತು ಉಕ್ರೇನ್‌ ದೇಶದ ಪೂರ್ವದಲ್ಲಿನ ಡಾನ್‌ಬಾಸ್ ಎಂದು ಕರೆಯಲ್ಪಡುವ ಪ್ರದೇಶದಲ್ಲಿನ ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳನ್ನು ರಕ್ಷಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ್ದಾರೆ. ಕೈವ್ ಮತ್ತು ಇತರ ನಗರಗಳಿಂದ ಸ್ಫೋಟಗಳು ಕೇಳಿಬಂದಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ರಷ್ಯಾ ರಾಜಧಾನಿ ಮಾಸ್ಕೋಗೆ ಭೇಟಿ ನೀಡಿದ್ದಾರೆ.

ಉಕ್ರೇನ್‌ನಲ್ಲಿ ರಷ್ಯಾದ ಕ್ರಮಗಳಿಗೆ ಆಕ್ಷೇಪಣೆಯನ್ನು ವ್ಯಕ್ತಪಡಿಸುವುದು ಪ್ರತಿ “ಜವಾಬ್ದಾರಿ” ದೇಶದ ಕರ್ತವ್ಯವಾಗಿದೆ. ಉಕ್ರೇನ್‌ನಲ್ಲಿನ ಪರಿಸ್ಥಿತಿಯ ಬಗ್ಗೆ ತನ್ನ ನಿಲುವಿನ ಬಗ್ಗೆ ಅಮೆರಿಕವು ಪಾಕಿಸ್ತಾನಕ್ಕೆ ತಿಳಿಸಿದೆ ಎಂದು ಅಮೆರಿಕದ ವಕ್ತಾರ ನೆಡ್ ಪ್ರೈಸ್ ತಿಳಿಸಿದ್ದಾರೆ.

ಉಕ್ರೇನ್ ಮೇಲೆ ದಾಳಿ ಮುನ್ಸೂಚನೆಯಾಗಿ ರಷ್ಯಾದ ಮೇಲೆ ಅಮೆರಿಕ ಸೇರಿದಂತೆ ಹಲವು ಯೂರೋಪ್ ದೇಶಗಳು ನಿರ್ಭಂದ ಹೇರಿದ ಬೆನ್ನಲ್ಲೆ ಅರ್ಥಿಕ ಸಹಕಾರ, ತಾಲಿಬಾನ್ ನಿಯಂತ್ರಿತ ಆಫ್ಘಾನಿಸ್ಥಾನ ಸೇರಿದಂತೆ ವಿಷಯಗಳ ಕುರಿತು ಚರ್ಚಿಸಲು ಇಮ್ರಾನ್ ಖಾನ್ ರಷ್ಯಾಗೆ ಭೇಟಿ ನೀಡಿದ್ದಾರೆ. ಆ ಮೂಲಕ ಬಿಕ್ಕಟ್ಟಿನ ಬಳಿಕ ರಷ್ಯಾಗೆ ಭೇಟಿ ನೀಡಿದ ಮೊದಲ ಪ್ರಧಾನಿಯಾಗಿದ್ದಾರೆ. ಇದು ರಷ್ಯಾದ ದಾಳಿಗೆ ಬೆಂಬಲ ಎನ್ನುವ ಅರ್ಥದಲ್ಲಿ ಬಿಂಬಿಸಲ್ಪಡುತ್ತಿದೆ.

ಉಕ್ರೇನ್‌ನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರು “ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪೂರ್ಣ ಪ್ರಮಾಣದ ಆಕ್ರಮಣವನ್ನು ಪ್ರಾರಂಭಿಸಿದ್ದಾರೆ ಎಂದು ಆರೋಪಿಸಿದ್ದಾರೆ. ದೇಶದಾದ್ಯಂತದ ನಗರಗಳಲ್ಲಿ ಸ್ಫೋಟಗಳು ಕೇಳಿಬಂದವು. ಶಾಂತಿಯುತ ಉಕ್ರೇನಿಯನ್ ನಗರಗಳ ಮೇಲೆ ದಾಳಿಯಾಗುತ್ತಿದೆ” ಎಂದು ಕುಲೆಬಾ ಟ್ವೀಟ್ ಮಾಡಿದ್ದಾರೆ.

ಇಂದು ಬೆಳಿಗ್ಗೆ 6 ಗಂಟೆಗೆ ದೂರದರ್ಶನದಲ್ಲಿ ಮಾತನಾಡಿದ ಪುಟಿನ್ “ನಾನು ಮಿಲಿಟರಿ ಕಾರ್ಯಾಚರಣೆಯ ನಿರ್ಧಾರವನ್ನು ಮಾಡಿದ್ದೇನೆ” ಎಂದು ತಿಳಿಸಿದ್ದಾರೆ. ಉಕ್ರೇನ್‌ನ ಗಡಿಯಲ್ಲಿ 1,50,000 ದಿಂದ 2,00,000 ಸೈನಿಕರನ್ನು ಜಮಾವಣೆ ಮಾಡಲಾಗಿದೆ ಎನ್ನಲಾಗಿದೆ.


ಇದನ್ನು ಓದಿ: ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ: ಭಾರತೀಯರನ್ನು ಕರೆತರಲು ಹೋಗಿದ್ದ ವಿಮಾನ ಖಾಲಿ ಕೈಲಿ ವಾಪಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಯುದ್ಧದಿಂದ ಯಾರೂ, ಏನನ್ನೂ ಗೆಲ್ಲುವುದು ಸಾದ್ಯವಿಲ್ಲ, ಆದರೂ ಮನಶ್ಯನ ಅವಿವೇಕದಿಂದ, ಅಹಂಕಾರದಿಂದ ಯುದ್ದಗಳು ನಡೆಯುತ್ತಲೇ ಇವೆ.
    ರಷ್ಯಾದಲ್ಲಿ, ಪುಟಿನ್ ಜನಪ್ರಿಯತೆ ಕುಗ್ಗುತ್ತಿದೆ. ಅಧಿಕಾರದಲ್ಲಿ ಮುಂದುವರಿಯಲು ಪುಟಿನ್ ಈ ಯುದ್ಧ ಹೂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿಯಲ್ಲಿ ‘ಅಬ್ ಕಿ ಬಾರ್ ರಾಬರ್ಟ್ ವಾದ್ರಾ’ ಪೋಸ್ಟರ್; ಪ್ರಿಯಾಂಕಾ ಪತಿ ಸ್ಪರ್ಧೆಗೆ ಹೆಚ್ಚಿದ...

0
2019ರ ಲೋಕಸಭಾ ಚುನಾವಣೆ ಸೋಲಿನ ನಂತರ ರಾಹುಲ್ ಗಾಂಧಿ ತಮ್ಮ ಕ್ಷೇತ್ರವನ್ನು ಅಮೇಥಿಯಿಂದ ಕೇರಳದ ವಯನಾಡಿಗೆ ಸ್ಥಳಾಂತರಿಸಿದ್ದಾರೆ. ಆದರೆ, ಬಿಜೆಪಿ ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿ ಯಾರು...