ಆಪರೇಷನ್ ಸಿಂಧೂರ ದಾಳಿಯ ನಂತರ ಪಾಕಿಸ್ತಾನವು ಬುಧವಾರ ರಾತ್ರಿ 15 ಪಟ್ಟಣಗಳು ಮತ್ತು ನಗರಗಳಲ್ಲಿನ ಭಾರತೀಯ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ದಾಳಿ ನಡೆಸುವ ಪ್ರಯತ್ನ ಮಾಡಿದ್ದು, ಅವುಗಳನ್ನು ಪಡೆಗಳು ವಿಫಲಗೊಳಿಸಿವೆ ಎಂದು ಭಾರತದ ರಕ್ಷಣಾ ಸಚಿವಾಲಯ ಗುರುವಾರ ತಿಳಿಸಿದೆ. ಪಾಕಿಸ್ತಾನದಿಂದ
ಜಮ್ಮು ಕಾಶ್ಮೀರದ ಅವಂತಿಪೋರಾ, ಜಮ್ಮು ಮತ್ತು ಶ್ರೀನಗರ, ಪಂಜಾಬ್‌ನ ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಅದಮ್‌ಪುರ ಮತ್ತು ಬಟಿಂಡಾ, ರಾಜಸ್ಥಾನದ ಚಂಡೀಗಢ, ನಲ್, ಫಲೋಡಿ ಮತ್ತು ಉತ್ತರಲೈ ಮತ್ತು ಗುಜರಾತ್‌ನ ಭುಜ್ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಸಚಿವಾಲಯ ಹೇಳಿದೆ.
ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಮಾನವರಹಿತ ವಿಮಾನಗಳ ಮೂಲಕ ಮತ್ತು ರಕ್ಷಣಾ ವ್ಯವಸ್ಥೆಗಳಿಂದ ನಾಶಪಡಿಸಲಾಗಿದೆ. ಜೊತೆಗೆ ಅವುಗಳ ಅವಶೇಷಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳೆಂದು ಹೇಳಲಾದ ಸ್ಥಳಗಳ ಮೇಲೆ ಬುಧವಾರ ಭಾರತೀಯ ಸೇನೆ ದಾಳಿ ನಡೆಸಿತ್ತು. ಇದರ ನಂತರ ಪಾಕಿಸ್ತಾನ ಈ ದಾಳಿ ನಡೆಸಿದೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ ಒಂಬತ್ತು ಸ್ಥಳಗಳನ್ನು ಗುರಿಯಾಗಿಸಲಾಗಿತ್ತು.
ಜಮ್ಮು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತೀಯ ಹಳ್ಳಿಗಳ ಮೇಲೆ ಶೆಲ್ ದಾಳಿ ಮಾಡುವ ಮೂಲಕ ಪಾಕಿಸ್ತಾನ ಸೇನೆಯು ಪ್ರತಿದಾಳಿ ನಡೆಸಿದೆ. ಗುಂಡಿನ ದಾಳಿಯಲ್ಲಿ ಹದಿನಾರು ಜನರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಗುರುವಾರ ಬೆಳಿಗ್ಗೆ ಭಾರತೀಯ ಸೇನೆಯು ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಅದು ಹೇಳಿದೆ. “ಲಾಹೋರ್‌ನಲ್ಲಿರುವ ವಾಯು ರಕ್ಷಣಾ ವ್ಯವಸ್ಥೆಯನ್ನು ತಟಸ್ಥಗೊಳಿಸಲಾಗಿದೆ ಎಂದು ವಿಶ್ವಾಸಾರ್ಹವಾಗಿ ತಿಳಿದುಬಂದಿದೆ.” ಎಂದು ಅದು ಹೇಳಿದೆ.
ಬುಧವಾರ ರಾತ್ರಿಯಿಂದ ತನ್ನ ವಾಯುಪ್ರದೇಶವನ್ನು ಪ್ರವೇಶಿಸಿದ 25 ಭಾರತೀಯ ಡ್ರೋನ್‌ಗಳನ್ನು ಹೊಡೆದುರುಳಿಸಿರುವುದಾಗಿ ಪಾಕಿಸ್ತಾನ ಸೇನೆ ಹೇಳಿಕೊಂಡಿದೆ ಎಂದು ಅಲ್-ಜಜೀರಾ ವರದಿ ಮಾಡಿದೆ. ಕರಾಚಿ ಮತ್ತು ಲಾಹೋರ್ ನಗರಗಳು ಸೇರಿದಂತೆ ಇತರ ಸ್ಥಳಗಳಲ್ಲಿ ಭಾರತೀಯ ನಿರ್ಮಿತ ಇಸ್ರೇಲಿ ಹರೋಪ್ ಡ್ರೋನ್‌ಗಳನ್ನು ಬಳಸಲಾಗಿದೆ ಎಂದು ಪಾಕಿಸ್ತಾನ ಮಿಲಿಟರಿ ವಕ್ತಾರ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿ ಹೇಳಿದ್ದಾರೆ.
ಡ್ರೋನ್ ದಾಳಿಯಲ್ಲಿ ಒಬ್ಬ ನಾಗರಿಕ ಸಾವನ್ನಪ್ಪಿದ್ದು, ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ ಎಂದು ಅಲ್-ಜಜೀರಾ ವರದಿ ಮಾಡಿದೆ. “ಭಾರತದ ಡ್ರೋನ್‌ಗಳನ್ನು ಪಾಕಿಸ್ತಾನ ವಾಯುಪ್ರದೇಶಕ್ಕೆ ಕಳುಹಿಸಲಾಗುತ್ತಿದೆ… [ಭಾರತ] ಈ ಆಕ್ರಮಣಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ.” ಎಂದು ಚೌಧರಿ ಹೇಳಿದ್ದಾರೆ.
ಬುಧವಾರ ಭಾರತದ ದಾಳಿಯಲ್ಲಿ ಪಾಕಿಸ್ತಾನದಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ ಎಂದು ಎಎಫ್‌ಪಿ ವರದಿ ಮಾಡಿದೆ. ಈ ದಾಳಿಯಿಂದ ಹಲವಾರು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅದು ಪಾಕಿಸ್ತಾನ ಹೇಳಿದ್ದು, ಕಾರ್ಯಾಚರಣೆಯನ್ನು ತನ್ನ ಸಾರ್ವಭೌಮತ್ವದ ಉಲ್ಲಂಘನೆ ಎಂದು ಹೇಳಿಕೊಂಡಿದೆ.
ಅದಾಗ್ಯೂ, ಭಾರತವು ಅಪರೇಷನ್ ಸಿಂಧೂರವನ್ನು “ನಮ್ಮ ಮುಗ್ಧ ವ್ಯಕ್ತಿಗಳನ್ನು ಕೊಂದವರನ್ನು ಮಾತ್ರ ಗುರಿಯಾಗಿಸಿಕೊಂಡಿವೆ” ಎಂದು ಹೇಳಿದೆ. ಇದನ್ನು ಪುನರುಚ್ಚರಿಸಿರುವ ರಕ್ಷಣಾ ಸಚಿವಾಲಯ, “ಭಾರತದಲ್ಲಿನ ಮಿಲಿಟರಿ ಗುರಿಗಳ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು” ಎಂದು ಗುರುವಾರ ಹೇಳಿದೆ.
ಕದನ ವಿರಾಮ ಉಲ್ಲಂಘನೆ
ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಉರಿ, ಪೂಂಚ್, ಮೆಂಧರ್ ಮತ್ತು ರಾಜೌರಿ ವಲಯಗಳಲ್ಲಿನ ಪ್ರದೇಶಗಳಲ್ಲಿ ನಿಯಂತ್ರಣ ರೇಖೆಯಾದ್ಯಂತ ಮೋರ್ಟಾರ್‌ಗಳು ಮತ್ತು ಭಾರೀ ಕ್ಯಾಲಿಬರ್ ಫಿರಂಗಿಗಳನ್ನು ಬಳಸಿ ಅಪ್ರಚೋದಿತ ಗುಂಡಿನ ದಾಳಿಯ ತೀವ್ರತೆಯನ್ನು ಹೆಚ್ಚಿಸಿದೆ ಎಂದು ಭಾರತ ಆರೋಪಿಸಿದೆ. ಪಾಕಿಸ್ತಾನದಿಂದ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಕಳ್ಳತನ ದೂರು ನೀಡಲು ಠಾಣೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಪೊಲೀಸರ ವಿರುದ್ಧ ಗಂಭೀರ ಆರೋಪ
ಕಳ್ಳತನ ದೂರು ನೀಡಲು ಠಾಣೆಗೆ ತೆರಳಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ಪೊಲೀಸರ ವಿರುದ್ಧ ಗಂಭೀರ ಆರೋಪ

