Homeಅಂತರಾಷ್ಟ್ರೀಯಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

- Advertisement -
- Advertisement -

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ ಎಂದು ವರದಿಗಳು ಹೇಳಿವೆ.

ಇತ್ತೀಚೆಗೆ ಇಸ್ಲಾಮಾಬಾದ್‌ನಲ್ಲಿ ನಡೆದ ಸರಣಿ ದಾಳಿಗಳ ಹಿಂದೆ ಇರುವ ಸಶಸ್ತ್ರ ಗುಂಪುಗಳ ‘ನೆಲೆಗಳು ಮತ್ತು ಅಡಗುತಾಣಗಳನ್ನು’ ಗುರಿಯಾಗಿಸಿಕೊಂಡು ಪಾಕಿಸ್ತಾನದ ಸೇನೆಯು ಅಫ್ಘಾನಿಸ್ತಾನದಲ್ಲಿ ವೈಮಾನಿಕ ದಾಳಿಗಳನ್ನು ನಡೆಸಿದೆ. ಇಸ್ಲಾಮಾಬಾದ್‌ನ ಶಿಯಾ ಮಸೀದಿಯೊಂದರಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯೂ ಈ ದಾಳಿಗಳಲ್ಲಿ ಸೇರಿದ್ದು, ಆ ಘಟನೆಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ಹಲವು ಜನರು ಸಾವನ್ನಪ್ಪಿದ್ದರು ಎಂದು ಅಲ್‌-ಜಝೀರಾ ವರದಿ ಮಾಡಿದೆ.

ತಾಲಿಬಾನ್ ಸರ್ಕಾರದ ವಕ್ತಾರ ಜಬೀವುಲ್ಲಾ ಮುಜಾಹಿದ್ ಪ್ರಕಾರ, ಈ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ನಾಗರಿಕರು ಸಾವನ್ನಪ್ಪಿದ್ದಾರೆ. ನಂಗರ್ಹಾರ್‌ನಲ್ಲಿ ಒಂದೇ ಕುಟುಂಬದ 17 ರಿಂದ 23 ಸದಸ್ಯರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಆದರೂ, ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯ ಕುರಿತು ಬೇರೆ ಬೇರೆ ವರದಿಗಳಿವೆ. ಈ ಕುರಿತು ಖಚಿತ ಮಾಹಿತಿ ದೊರೆತಿಲ್ಲ.

ಅಫ್ಘಾನಿಸ್ತಾನದ ಅಧಿಕಾರಿಗಳು ಮತ್ತು ಸ್ಥಳೀಯ ಮೂಲಗಳ ಪ್ರಕಾರ, ಕನಿಷ್ಠ 20ರಿಂದ 46 ನಾಗರಿಕರು ಸಾವನ್ನಪ್ಪಿದ್ದಾರೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

ಪಕ್ತಿಕಾ ಪ್ರಾಂತ್ಯದ ಬರ್ಮಲ್ ಜಿಲ್ಲೆಯಲ್ಲಿ ಒಂದು ಮನೆಯ ಮೇಲೆ ನಡೆದ ದಾಳಿಯಲ್ಲಿ ಒಂದೇ ಕುಟುಂಬದ 17 ಸದಸ್ಯರು (ಅದರಲ್ಲಿ 12 ಮಕ್ಕಳು ಮತ್ತು ಹದಿಹರೆಯದವರು) ಮೃತಪಟ್ಟಿದ್ದಾರೆ.

ಪಕ್ತಿಕಾ ಪ್ರಾಂತ್ಯದ ಮದರಸಾವೊಂದರ ಮೇಲೆ ನಡೆದ ದಾಳಿಯಲ್ಲಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಪಾಕಿಸ್ತಾನಿ ಮಾಧ್ಯಮಗಳ ಪ್ರಕಾರ, ಈ ದಾಳಿಯಲ್ಲಿ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಸಂಘಟನೆಗೆ ಸೇರಿದ ಕನಿಷ್ಠ 28 ಉಗ್ರರು ಹತರಾಗಿದ್ದಾರೆ.

ಅಫ್ಘಾನಿಸ್ತಾನದ ಸಾರ್ವಭೌಮತ್ವವನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ತಾಲಿಬಾನ್ ಖಂಡಿಸಿದೆ. ಅಲ್ಲದೆ, ಸೂಕ್ತ ಸಮಯದಲ್ಲಿ ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಇತ್ತೀಚೆಗೆ ಪಾಕಿಸ್ತಾನದ ಇಸ್ಲಾಮಾಬಾದ್‌ನ ಬಜೌರ್ ಮತ್ತು ಬನ್ನು ಪ್ರದೇಶಗಳಲ್ಲಿ ನಡೆದ ಸರಣಿ ಆತ್ಮಾಹುತಿ ಬಾಂಬ್ ದಾಳಿಗಳು ನಡೆದಿತ್ತು. ಈ ದಾಳಿಗಳನ್ನು ಅಫ್ಘಾನಿಸ್ತಾನ ಮೂಲದ ಟಿಟಿಪಿ ಮತ್ತು ಐಸಿಸ್ ಉಗ್ರರು ನಡೆಸಿದ್ದಾರೆ ಎಂದು ಪಾಕಿಸ್ತಾನ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...