Homeಅಂತರಾಷ್ಟ್ರೀಯಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

- Advertisement -
- Advertisement -

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ.

ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು ಪಾಕಿಸ್ತಾನ ತಳ್ಳಿ ಹಾಕಿದೆ. ಇದು ಸುಳ್ಳು ಮತ್ತು ಜನರನ್ನು ದಾರಿ ತಪ್ಪಿಸುವ ಹೇಳಿಕೆ ಎಂದಿದೆ. ಸೋಮವಾರ (ಮಾ.16) ಕೇವಲ ಕಾಬೂಲ್ ಮತ್ತು ನಂಗಹಾರ್ ಪ್ರಾಂತ್ಯದ ಮಿಲಿಟರಿ ನೆಲೆಗಳನ್ನು ಮಾತ್ರ ಗುರಿಯಾಗಿಸಿಕೊಂಡಿರುವುದಾಗಿ ಅದು ತಿಳಿಸಿದೆ.

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ಉಪ ವಕ್ತಾರ ಹಮ್ದುಲ್ಲಾ ಫಿತ್ರತ್ ಅವರ ಪ್ರಕಾರ, ಕಾಬೂಲ್‌ನ ‘ಉಮರ್ ವ್ಯಸನ ಮುಕ್ತಿ ಆಸ್ಪತ್ರೆ’ಯ (Omar Addiction Treatment Hospital) ಮೇಲೆ ಸ್ಥಳೀಯ ಕಾಲಮಾನ ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ಪಾಕಿಸ್ತಾನ ದಾಳಿ ನಡೆಸಿದೆ.

ಆಸ್ಪತ್ರೆಯು 2,000 ಹಾಸಿಗೆಗಳ ಸಾಮರ್ಥ್ಯದ ಬೃಹತ್ ಆರೋಗ್ಯ ಸೌಲಭ್ಯವಾಗಿದ್ದು, ದಾಳಿಯಿಂದ ಆಸ್ಪತ್ರೆ ಕಟ್ಟಡದ ದೊಡ್ಡ ಭಾಗ ಸಂಪೂರ್ಣವಾಗಿ ಧ್ವಂಸಗೊಂಡಿದೆ ಎಂದು ಫಿತ್ರತ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ದುರದೃಷ್ಟವಶಾತ್, ಸಾವಿನ ಸಂಖ್ಯೆ ಇದುವರೆಗೆ 400ಕ್ಕೆ ತಲುಪಿದೆ. ಸುಮಾರು 250 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ತಂಡಗಳು ಪ್ರಸ್ತುತ ಸ್ಥಳದಲ್ಲಿದ್ದು, ಬೆಂಕಿ ನಂದಿಸಲು ಮತ್ತು ಬಲಿಪಶುಗಳ ಉಳಿದ ಮೃತದೇಹಗಳನ್ನು ಹೊರತೆಗೆಯಲು ಕೆಲಸ ಮಾಡುತ್ತಿವೆ” ಎಂದು ಫಿತ್ರತ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಸ್ಥಳೀಯ ಸುದ್ದಿ ವಾಹಿನಿಗಳು ಹಂಚಿಕೊಂಡಿರುವ ವಿಡಿಯೋ ತುಣುಕುಗಳಲ್ಲಿ, ಅಗ್ನಿಶಾಮಕ ಸಿಬ್ಬಂದಿ ಧ್ವಂಸಗೊಂಡ ಕಟ್ಟಡದ ಅವಶೇಷಗಳ ನಡುವೆ ಹೊತ್ತಿ ಉರಿಯುತ್ತಿರುವ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿರುವುದು ಕಂಡುಬಂದಿದೆ ಎಂದು ಅಲ್‌-ಜಝೀರಾ ವರದಿ ಉಲ್ಲೇಖಿಸಿದೆ.

ಆಸ್ಪತ್ರೆಯ ಭದ್ರತಾ ಸಿಬ್ಬಂದಿಯಾದ 31 ವರ್ಷದ ಓಮಿದ್ ಸ್ಟಾನಿಕ್‌ಜಾಯ್ ಸುದ್ದಿ ಸಂಸ್ಥೆ ಎಎಫ್‌ಪಿಯೊಂದಿಗೆ ಮಾತನಾಡುತ್ತಾ, ದಾಳಿಗೂ ಮೊದಲು ಆಕಾಶದಲ್ಲಿ ಯುದ್ಧ ವಿಮಾನಗಳು ಗಸ್ತು ತಿರುಗುತ್ತಿದ್ದ ಶಬ್ದವನ್ನು ತಾನು ಕೇಳಿದ್ದಾಗಿ ತಿಳಿಸಿದ್ದಾರೆ.

“ನಮ್ಮ ಸುತ್ತಲೂ ಸೇನಾ ಘಟಕಗಳಿದ್ದವು. ಆ ಘಟಕಗಳು ಯುದ್ಧ ವಿಮಾನದ ಮೇಲೆ ಗುಂಡಿನ ದಾಳಿ ನಡೆಸಿದಾಗ, ವಿಮಾನವು ಬಾಂಬ್‌ಗಳನ್ನು ಹಾಕಿತು ಮತ್ತು ಬೆಂಕಿ ಕಾಣಿಸಿಕೊಂಡಿತು” ಎಂದು ಅವರು ವಿವರಿಸಿದ್ದಾರೆ.

“ಸತ್ತವರು ಮತ್ತು ಗಾಯಗೊಂಡವರೆಲ್ಲರೂ ನಾಗರಿಕರು” ಎಂದು ಅವರು ಹೇಳಿದ್ದಾರೆ.


 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...