Homeಅಂತರಾಷ್ಟ್ರೀಯಪಾಕ್: ಉದ್ರೇಕಿತರಿಂದ ಹಿಂದೂಗಳ ಮೇಲೆ ದಾಳಿ; ದೊಡ್ಡ ಅಪಾಯ ತಡೆದ ಮುಸ್ಲಿಂ ಕುಟುಂಬಗಳು!

ಪಾಕ್: ಉದ್ರೇಕಿತರಿಂದ ಹಿಂದೂಗಳ ಮೇಲೆ ದಾಳಿ; ದೊಡ್ಡ ಅಪಾಯ ತಡೆದ ಮುಸ್ಲಿಂ ಕುಟುಂಬಗಳು!

ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆದ ಉದ್ರೇಕಿತ ಜನಸಮೂಹದ ದಾಳಿಯನ್ನು ತಡೆದಿದ್ದು ಈ ಪ್ರದೇಶದ ಮುಸ್ಲಿಂ ಕುಟುಂಬಗಳು. ಮುಸ್ಲಿಂ ಕುಟುಂಬಗಳಿಗಲ್ಲದೇ ಮತ್ತೊಬ್ಬರಿಗೆ ಈ ದಾಳಿಯನ್ನು ತಡೆಯುವು ಅಸಾಧ್ಯವಾಗಿತ್ತು

- Advertisement -
- Advertisement -

ಉದ್ರೇಕಿತ ಜನಸಮೂಹವೊಂದು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹಿಂದೂ ದೇವಾಲಯವೊಂದನ್ನು ಧ್ವಂಸಗೊಳಿಸಿದೆ. ಅದು 300 ಕ್ಕೂ ಹೆಚ್ಚು ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದು, ಆದರೆ ಮುಸ್ಲಿಮರು ತಮ್ಮ ನೆರೆಹೊರೆಗೆ ಪ್ರವೇಶಿಸದಂತೆ ಆ ಗುಂಪನ್ನು ತಡೆದರು ಎಂದು ಮಾಧ್ಯಮ ವರದಿ ತಿಳಿಸಿದೆ.

ಶೀತಲ್ ದಾಸ್ ಕಾಂಪೌಂಡ್‌ನಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಇಲ್ಲಿ 300 ಹಿಂದೂ ಮತ್ತು 30 ಮುಸ್ಲಿಂ ಕುಟುಂಬಗಳು ವಾಸಿಸುತ್ತಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಹಲವಾರು ಪುರುಷರು ಕಾಂಪೌಂಡ್‌ನ ಏಕೈಕ ಗೇಟ್‌ನ ಹೊರಗೆ ಒಟ್ಟುಗೂಡಿದ್ದರು ಮತ್ತು ಅವರಲ್ಲಿ ಅನೇಕರು ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡಲು ಉದ್ದೇಶಿಸಿದ್ದರು” ಎಂದು ನೆರೆಹೊರೆಯ ನಿವಾಸಿಗಳು ಹೇಳಿದರು.

“ಆದಾಗ್ಯೂ, ಕಾಂಪೌಂಡ್ ಮತ್ತು ಅದರ ಸುತ್ತಮುತ್ತ ವಾಸಿಸುವ ಮುಸ್ಲಿಂ ಕುಟುಂಬಗಳು ಉದ್ರೇಕಿತ ಜನಸಮೂಹವನ್ನು ಆ ಪ್ರದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಮುಂದಾಗಿದ್ದರು. ಪೊಲೀಸರು ಸಹ ಅವರಿಗೆ ಮಾಹಿತಿ ನೀಡಿದ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ತಲುಪಿದರು” ಎಂದು ಅನಾಮಧೇಯ ಹಿಂದೂ ವ್ಯಕ್ತಿಯೊಬ್ಬರು ಹೇಳಿದರು.

ಇದನ್ನೂ ಓದಿ: ವಿಜಯವಾಡದಲ್ಲಿ ತಲೆಯೆತ್ತಲಿದೆ 125 ಅಡಿಯ ಅಂಬೇಡ್ಕರ್ ಕಂಚಿನ ಪ್ರತಿಮೆ!

ಅವರು ಕಾಂಪೌಂಡ್‌ನ ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡಲು ಬಯಸಿದ್ದರು. ಆದರೆ ಪೊಲೀಸರು ಅವರ ಪ್ರಯತ್ನವನ್ನು ವಿಫಲಗೊಳಿಸಿದರು. ಆದಾಗ್ಯೂ, ಇತರ ಪ್ರತ್ಯಕ್ಷದರ್ಶಿಗಳ ಪ್ರಕಾರ, ಈ ಸಮಯದಲ್ಲಿ ಮೂರು ವಿಗ್ರಹಗಳನ್ನು ನಾಶಪಡಿಸಲಾಗಿದೆ ಎಂದು ಹೇಳಿದರು.

“ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆದ ಉದ್ರೇಕಿತ ಜನಸಮೂಹದ ದಾಳಿಯನ್ನು ತಡೆದಿದ್ದು ಈ ಪ್ರದೇಶದ ಮುಸ್ಲಿಂ ಕುಟುಂಬಗಳು. ಮುಸ್ಲಿಂ ಕುಟುಂಬಗಳಿಗಲ್ಲದೇ ಮತ್ತೊಬ್ಬರಿಗೆ ಈ ದಾಳಿಯನ್ನು ತಡೆಯುವು ಅಸಾಧ್ಯವಾಗಿತ್ತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಈ ಘಟನೆಯ ನಂತರ 60 ಕ್ಕೂ ಹೆಚ್ಚು ಹಿಂದೂ ಕುಟುಂಬಗಳು ಮಂಗಳವಾರದ ವೇಳೆಗೆ ನಗರದ ಇತರ ಪ್ರದೇಶಗಳಿಗೆ ಸ್ಥಳಾಂತರಗೊಂಡಿವೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

“ಭಯ ಇನ್ನೂ ಇದೆ. ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಮಹಿಳೆಯರು ಮತ್ತು ಮಕ್ಕಳನ್ನು ಸುರಕ್ಷಿತವೆಂದು ಭಾವಿಸುವ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ” ಎಂದು ನಿವಾಸಿಯೊಬ್ಬರು ಹೇಳಿದರು.

ಹಿಂದೂ ಸಮುದಾಯದ ಹಿರಿಯರೊಬ್ಬರು, “ನನ್ನ ಜೀವನದುದ್ದಕ್ಕೂ ಆ ಕಾಂಪೌಂಡ್‌ನಲ್ಲಿ ಬದುಕಿದ್ದೇನೆ. ಆದರೆ ಇದುವರೆಗೂ ಈ ರೀತಿಯ ದಾಳಿಯನ್ನು ನೋಡಿಲ್ಲ” ಎಂದು ಹೇಳಿದರು.

ಮುಸ್ಲಿಂ ಬಹುಸಂಖ್ಯಾತ ಪಾಕಿಸ್ತಾನದ 220 ದಶಲಕ್ಷ ಜನಸಂಖ್ಯೆಯಲ್ಲಿ ಹಿಂದೂಗಳು ಶೇಕಡಾ 2 ರಷ್ಟಿದ್ದಾರೆ. ಹೆಚ್ಚಿನ ಹಿಂದೂಗಳು ಸಿಂಧ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದಾರೆ.


ಇದನ್ನೂ ಓದಿ: ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರತಿಯೊಂದು ದೇಶದಲ್ಲಿಯೂ ಅಲ್ಪಸಂಖ್ಯಾತರು ನಿರ್ಬೀತಿಯಿಂದ ಬದುಕುವಂತಾಗಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...