Homeಮುಖಪುಟಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು ಸರ್ಕಾರ ಸಿಎಎ ತಂದಿತು: ಎನ್‌ಸಿಸಿ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ

ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು ಸರ್ಕಾರ ಸಿಎಎ ತಂದಿತು: ಎನ್‌ಸಿಸಿ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ

- Advertisement -
- Advertisement -

ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು ಮತ್ತು ನೆರೆಯ ರಾಷ್ಟ್ರಗಳಲ್ಲಿ ವಾಸಿಸುವ ಧಾರ್ಮಿಕ ಅಲ್ಪಸಂಖ್ಯಾತರಿಗೆ ಬಿಜೆಪಿಯು ನೀಡಿದ್ದ ಹಳೆಯ ಭರವಸೆಯನ್ನು ಪೂರೈಸಲು ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ನ್ಯಾಷನಲ್ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ)ಯ ವಾರ್ಷಿಕ ರ್‍ಯಾಲಿಯಲ್ಲಿ ಮಾತನಾಡುತ್ತಾ, ಪ್ರಸ್ತುತ ಸರ್ಕಾರವು ದೇಶವನ್ನು ಬಾಧಿಸುತ್ತಿರುವ ದಶಕಗಳ ಹಳೆಯ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ. ಹಿಂದಿನ ಸರ್ಕಾರಗಳು ಈ ಸಮಸ್ಯೆಯನ್ನು ಕಾನೂನು ಸುವ್ಯವಸ್ಥೆ ಎಂದು ಪರಿಗಣಿಸಿದ್ದವು ಎಂದು  ಸಹ ಅವರು ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಸಮಸ್ಯೆ ಮುಂದುವರೆದಿದೆ. ಕೆಲವು ಕುಟುಂಬಗಳು ಮತ್ತು ರಾಜಕೀಯ ಪಕ್ಷಗಳು ಈ ಪ್ರದೇಶದ ಸಮಸ್ಯೆಗಳನ್ನು ಜೀವಂತವಾಗಿರಿಸಿಕೊಂಡಿವೆ, ಇದರ ಪರಿಣಾಮವಾಗಿ ಅಲ್ಲಿ ಭಯೋತ್ಪಾದನೆ ಪ್ರವರ್ಧಮಾನಕ್ಕೆ ಬಂದಿತು ಎಂದು ಮೋದಿ ಹೇಳಿದ್ದಾರೆ.

ನೆರೆಯ ದೇಶ ಪಾಕಿಸ್ತಾನವು ಮೂರು ಯುದ್ಧಗಳನ್ನು ಸೋತಿದೆ. ಆದರೂ ಭಾರತದ ವಿರುದ್ಧ ಪ್ರಾಕ್ಸಿ ಯುದ್ಧಗಳನ್ನು ಮುಂದುವರಿಸಿದೆ ಎಂದು ಪ್ರಧಾನಿ ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದಾರೆ.

ಪ್ರಸ್ತುತ ಜಮ್ಮು ಕಾಶ್ಮೀರ ಮಾತ್ರವಲ್ಲ, ದೇಶದ ಇತರ ಭಾಗಗಳೂ ಸಹ ಶಾಂತಿಯುತವಾಗಿವೆ ಮತ್ತು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟ ಈಶಾನ್ಯ ಪ್ರದೇಶದ ಆಕಾಂಕ್ಷೆಗಳನ್ನು ಪರಿಹರಿಸಲು ಸರ್ಕಾರ ಯಶಸ್ವಿಯಾಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕವೂ ಎರಡು ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಬಿಜೆಪಿ ಸದಸ್ಯನ ಹೆಸರು!

ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದೆ. ಈ ನಡುವೆ ಬಿಜೆಪಿ ಸದಸ್ಯ ಉದಯ್ ಕುಮಾರ್ ಹಾಗೂ ಅವರ ಪತ್ನಿ ಬಿಂದು...

ಔಷಧ ತಯಾರಕರ ಪರವಾಗಿ ಇಡೀ ವ್ಯವಸ್ಥೆ ಕೆಲಸ ಮಾಡುತ್ತಿರುವುದೇಕೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮತ್ತು ಚಿಲ್ಲರೆ ವ್ಯಾಪಾರಿಗಳು ಅವುಗಳನ್ನು ಖರೀದಿಸುವ ಬೆಲೆಯ ನಡುವಿನ ಭಾರಿ ವ್ಯತ್ಯಾಸದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಔಷಧ ತಯಾರಕರಿಗೆ...

ಚುನಾವಣಾ ಆಯೋಗದ ಅಫಿಡವಿಟ್ ಕುರಿತ ‘ಲೈವ್ ಲಾ’ ರೀಲ್ ತೆಗೆದುಹಾಕಿದ ಇನ್‌ಸ್ಟಾಗ್ರಾಮ್

ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ (ಅ.26) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಕುರಿತು ವಿವರಿಸುವ ತನ್ನ ರೀಲ್ ಅನ್ನು ಇನ್‌ಸ್ಟಾಗ್ರಾಂ ತೆಗೆದುಹಾಕಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ (Livelaw.in)...

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...