Homeಅಂತರಾಷ್ಟ್ರೀಯಪಾಕಿಸ್ತಾನದಲ್ಲಿ ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 62ಕ್ಕೆ ಏರಿಕೆ, 100ಕ್ಕೂ ಹೆಚ್ಚು ಗಾಯಾಳುಗಳು

ಪಾಕಿಸ್ತಾನದಲ್ಲಿ ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 62ಕ್ಕೆ ಏರಿಕೆ, 100ಕ್ಕೂ ಹೆಚ್ಚು ಗಾಯಾಳುಗಳು

- Advertisement -
- Advertisement -

ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ 62 ಕ್ಕೆ ಏರಿಕೆಯಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ದೇಶದ ಅತ್ಯಂತ ಭೀಕರ ರೈಲು ಅಪಘಾತದ ಕಾರಣಗಳ ಬಗ್ಗೆ ತಕ್ಷಣ ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿವೆ.

ರೇತಿ ಮತ್ತು ದಹಾರ್ಕಿ ರೈಲ್ವೆ ನಿಲ್ದಾಣಗಳ ನಡುವೆ ಈ ಅಪಘಾತ ನಡೆದಿದ್ದು, 62 ಜನರು ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಾವಲ್ಪಿಂಡಿಯಿಂದ ಕರಾಚಿಗೆ ತೆರಳುತ್ತಿದ್ದ ಸರ್ ಸೈಯದ್ ಎಕ್ಸ್‌ಪ್ರೆಸ್ ಧಾರ್ಕಿ ಬಳಿ ಬರುತ್ತಿದ್ದಾಗ, ಕರಾಚಿಯಿಂದ ಹೋಗುತ್ತಿದ್ದ ಮಿಲಾಟ್ ಎಕ್ಸ್‌ಪ್ರೆಸ್‌ನ ಎಂಟು ಭೋಗಿಗಳು ಪಕ್ಕದ ಹಳಿ ಮೇಲೆ ಬಿದ್ದಿವೆ. ಈ ಭೋಗಿಗಳಿಗೆ ಸರ್ ಸೈಯದ್ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪಾಕಿಸ್ತಾನ ರೈಲ್ವೆಯ ವಕ್ತಾರರು ತಿಳಿಸಿದ್ದಾರೆ.

ಅಪಘಾತದಲ್ಲಿ ಹಾನಿಗೊಳಗಾದ ರೈಲಿನ ಎಂಜಿನ್‌ ಮತ್ತು 17 ಬೋಗಿಗಳನ್ನು ಹಳಿಗಳಿಂದ ತೆರವುಗೊಳಿಸುವ ಕಾರ್ಯಾಚರಣೆ ಪೂರ್ಣಗೊಂಡಿದ್ದು, ರೈಲು ಟ್ರ್ಯಾಕ್ ಅನ್ನು ತೆರವುಗೊಳಿಸಲಾಗಿದೆ ಎಂದು ರೈಲ್ವೆ ವಿಭಾಗೀಯ ಅಧೀಕ್ಷಕ ಸುಕ್ಕೂರ್ ತಾರಿಕ್ ಲತೀಫ್ ಹೇಳಿದ್ದಾರೆ.

ಇದನ್ನೂ ಓದಿ:ಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್

’ನನ್ನ ರಾಜೀನಾಮೆಯಿಂದ ಸತ್ತವರು ಮತ್ತೆ ಬದುಕಿ ಬರಬಹುದು ಎಂದಾದರೆ, ರಾಜೀನಾಮೆ ನೀಡಲು ಸಿದ್ದ ಎಂದು ರೈಲ್ವೆ ಸಚಿವ ಅಝಮ್ ಸ್ವಾತಿ ಹೇಳಿದ್ದಾರೆ. ಅಪಘಾತದ ಕುರಿತ ಸಮಗ್ರ ವಿಚಾರಣೆ ನಡೆಸುವ ಭರವಸೆ ನೀಡಿದ್ದಾರೆ.

ರೈಲು ದುರಂತದ ಬಗ್ಗೆ ತಕ್ಷಣ ತನಿಖೆ ನಡೆಸಬೇಕೆಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಾಲ್ ಭುಟ್ಟೋ ಜರ್ದಾರಿ ಒತ್ತಾಯಿಸಿದ್ದಾರೆ. 2018 ರಲ್ಲಿ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರೈಲು ದುರಂತಗಳು ಹೆಚ್ಚಾಗಿ ಸಂಭವಿಸುತ್ತಿವೆ. ಆದರೆ, ಆಡಳಿತ ಸರ್ಕಾರದ ಮಂತ್ರಿಗಳು  ಕೇವಲ ರಾಜಕೀಯ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಪಾಕಿಸ್ತಾನದಲ್ಲಿ ರೈಲು ಅಪಘಾತಗಳು ಸಾಮಾನ್ಯವಾಗಿದ್ದು, ಪ್ರತಿವರ್ಷ ನೂರಾರು ಜನರು ಪ್ರಾಣ ಕಳೆದುಕೊಳ್ಳುತ್ತಾರೆ. ಇಂತಹ ಅಪಘಾತಗಳಿಗೆ ಕಾರಣ, ಪಾಕಿಸ್ತಾನದಾದ್ಯಂತ ರೈಲು ಹಳಿಗಳು ತುಂಬಾ ಹಳೆಯದಾಗಿದೆ ಎಂದು ರೈಲ್ವೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...