Homeಮುಖಪುಟಇಮ್ರಾನ್ ಖಾನ್ ನಾಮಪತ್ರ ತಿರಸ್ಕರಿಸಿದ ಪಾಕಿಸ್ತಾನದ ಚುನಾವಣಾ ಆಯೋಗ

ಇಮ್ರಾನ್ ಖಾನ್ ನಾಮಪತ್ರ ತಿರಸ್ಕರಿಸಿದ ಪಾಕಿಸ್ತಾನದ ಚುನಾವಣಾ ಆಯೋಗ

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಲ್ಲಿಸಿದ್ದ ನಾಮಪತ್ರವನ್ನು ಪಾಕಿಸ್ತಾನದ ಚುನಾವಣಾ ಆಯೋಗ ತಿರಸ್ಕರಿಸಿದೆ.

ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥರಾಗಿರುವ ಇಮ್ರಾನ್ ಖಾನ್ ಮಿಯಾನ್ವಾಲಿಯಿಂದ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು.

ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಇಮ್ರಾನ್ ಖಾನ್ ಅವರು ಮುಂದಿನ ಐದು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸಿದಂತೆ ನಿರ್ಬಂಧ ಹೇರಿ ಪಾಕಿಸ್ತಾನ ಚುನಾವಣಾ ಆಯೋಗ ಕಳೆದ ಆಗಸ್ಟ್‌ನಲ್ಲಿ ಆದೇಶಿಸಿತ್ತು.

ಆದರೂ ಇಮ್ರಾನ್ ಖಾನ್ ಪಿಟಿಐ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಅವರ ಧ್ವನಿಯನ್ನು ರೆಕಾರ್ಡ್‌ ಮಾಡಿ ಬಿತ್ತರಿಸುವ ಮೂಲಕ ಹಲವೆಡೆ ಚುನಾವಣೆ ಪ್ರಚಾರವನ್ನು ಪ್ರಾರಂಭಿಸಲಾಗಿತ್ತು.

ಪ್ರಧಾನಿಯಾಗಿದ್ದಾಗ ವಿದೇಶಿ ಗಣ್ಯರಿಂದ ಉಡುಗೊರೆಯಾಗಿ ಪಡೆದಿದ್ದ ದುಬಾರಿ ವಸ್ತುಗಳನ್ನು ಮಾರಾಟ ಮಾಡಿದ್ದ ಆರೋಪ (ತೊಶಖಾನ ಪ್ರಕರಣ) ಇಮ್ರಾಖ್‌ ಖಾನ್‌ ವಿರುದ್ಧ ಕೇಳಿ ಬಂದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಇಸ್ಲಾಮಾಬಾದ್‌ನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಇಮ್ರಾನ್ ಖಾನ್ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಖಾನ್ ಜೈಲು ಸೇರಿರುವ ಹಿನ್ನೆಲೆ, ನ್ಯಾಯಾಲಯದ ಆದೇಶ ಪರಿಗಣಿಸಿ ಸಂವಿಧಾನದ 63(1)(ಹೆಚ್‌) ವಿಧಿ ಹಾಗೂ 2017ರ ಚುನಾವಣಾ ಕಾಯ್ದೆಯ 232ನೇ ಸೆಕ್ಷನ್‌ ಅನ್ವಯ ಅವರು ಐದು ವರ್ಷಗಳವರೆಗೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಚುನಾವಣಾ ಆಯೋಗ ಈ ಹಿಂದೆ ಹೇಳಿಕೆ ಬಿಡುಗಡೆ ಮಾಡಿತ್ತು.

ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಇಮ್ರಾನ್ ಖಾನ್ ಇಸ್ಲಾಮಾಬಾದ್ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಫೆಬ್ರವರಿ 8ರಂದು ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಇದನ್ನೂ ಓದಿ : ಪ್ರಧಾನಿ ಮೋದಿಯನ್ನು ಅಯೋಧ್ಯೆಗೆ ಸ್ವಾಗತಿಸಿದ ಬಾಬರಿ ಮಸೀದಿ ಪರ ಅರ್ಜಿದಾರ ಇಕ್ಬಾಲ್​​​​ ಅನ್ಸಾರಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕದನ ವಿರಾಮ ಒಪ್ಪಿಗೆ ನಡುವೆಯೇ ರಫಾ ಮೇಲೆ ದಾಳಿ ನಡೆಸಿದ ಇಸ್ರೇಲ್: 12 ಪ್ಯಾಲೆಸ್ತೀನಿಯರು...

0
ಒತ್ತೆಯಾಳುಗಳ ಬಿಡುಗಡೆ ಮೂಲಕ ಕದನ ವಿರಾಮಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿದ ನಡುವೆಯೇ ಇಸ್ರೇಲ್ ತನ್ನ ಆಕ್ರಮಣವನ್ನು ಮುಂದುವರೆಸಿದೆ. ಗಾಝಾದ ದಕ್ಷಿಣ ನಗರವಾದ ರಫಾದ ಮೇಲೆ ಸೋಮವಾರ (ಮೇ 6) ರಾತ್ರಿ ವಾಯುದಾಳಿ ನಡೆಸುವ...