Homeಮುಖಪುಟಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷವನ್ನು ನಿಷೇಧಿಸಲು ಪಾಕಿಸ್ತಾನ ಸರ್ಕಾರ ನಿರ್ಧಾರ

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷವನ್ನು ನಿಷೇಧಿಸಲು ಪಾಕಿಸ್ತಾನ ಸರ್ಕಾರ ನಿರ್ಧಾರ

- Advertisement -
- Advertisement -

ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷವನ್ನು ನಿಷೇಧಿಸುವುದಾಗಿ ಪಾಕಿಸ್ತಾನ ಸರ್ಕಾರ ಸೋಮವಾರ ಘೋಷಿಸಿದೆ.

“ವಿದೇಶಿ ಧನಸಹಾಯ ಪ್ರಕರಣ, ಮೇ 9 ರ ಗಲಭೆ ಮತ್ತು ದೇಶದ ಗೌಪ್ಯತೆ ಸೋರಿಕೆ (ಸೈಫರ್) ಹಾಗೂ ಯುಎಸ್‌ನಲ್ಲಿ ಅಂಗೀಕರಿಸಿದ ನಿರ್ಣಯಗಳು ಖಾನ್ ಅವರ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ)ಯನ್ನು ನಿಷೇಧಿಸಲು ಪ್ರಮುಖ ಆಧಾರಗಳಾಗಿವೆ” ಎಂದು ಪಾಕಿಸ್ತಾನದ ವಾರ್ತಾ ಸಚಿವ ಅತ್ತಾವುಲ್ಲಾ ತರಾರ್ ಪತ್ರಿಕಾಗೋಷ್ಠಿಯಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

71 ವರ್ಷ ವಯಸ್ಸಿನ ಇಮ್ರಾನ್ ಖಾನ್, 2022ರ ಏಪ್ರಿಲ್‌ನಲ್ಲಿ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡಾಗಿನಿಂದ ಅನೇಕ ಪ್ರಕರಣಗಳ ಹಿನ್ನೆಲೆಯಲ್ಲಿ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಇದ್ದಾರೆ.

ಪಿಟಿಐ ಪಕ್ಷದ ಸಮರ ಸಾರಿರುವ ಫೆಡರಲ್ ಸರ್ಕಾರ, ಮಾಜಿ ಆಡಳಿತ ಪಕ್ಷವನ್ನು ನಿಷೇಧಿಸಲು ನಿರ್ಧರಿಸಿದೆ. ಪಿಟಿಐ ಸಂಸ್ಥಾಪಕ ಇಮ್ರಾನ್ ಖಾನ್ ಮತ್ತು ಪಾಕಿಸ್ತಾನದ ಮಾಜಿ ಅಧ್ಯಕ್ಷ ಆರಿಫ್ ಅಲ್ವಿ ವಿರುದ್ಧ ದೇಶದ್ರೋಹದ 6 ನೇ ವಿಧಿಯ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲು ನಿರ್ಧರಿಸಿದೆ ಎಂದು ಜಿಯೋ ನ್ಯೂಸ್ ಹೇಳಿದೆ.

ಪಿಟಿಐ ಪಕ್ಷ ಅಸ್ತಿತ್ವದಲ್ಲಿದ್ದರೆ ದೇಶ ಅಭಿವೃದ್ದಿಯ ದಿಕ್ಕಿನಲ್ಲಿ ಮುನ್ನಡೆಯಲು ಸಾಧ್ಯವಿಲ್ಲ ಎಂದು ಸಚಿವ ಅತ್ತಾವುಲ್ಲಾ ತರಾರ್ ಹೇಳಿದ್ದಾರೆ.

“ನಮ್ಮ ತಾಳ್ಮೆ ಮತ್ತು ಸಹನೆಯನ್ನು ದೌರ್ಬಲ್ಯಗಳೆಂದು ಪರಿಗಣಿಸಲಾಗುತ್ತಿದೆ. ನಮ್ಮ ಸರ್ಕಾರ ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದೇಶವನ್ನು ಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವುದರಿಂದ ಪಿಟಿಐ ಮತ್ತು ಪಾಕಿಸ್ತಾನ ಒಟ್ಟಿಗೆ ಮುನ್ನಡೆಯಲು ಸಾಧ್ಯವಿಲ್ಲ. ಪಿಟಿಐ ಪಕ್ಷವನ್ನು ನಿಷೇಧಿಸುವಂತೆ ಕೋರಿ ಫೆಡರಲ್ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ ಎಂದಿದ್ದಾರೆ.

ಇದನ್ನೂ ಓದಿ : ರಾಜ್ಯಸಭೆಯಲ್ಲಿ 86ಕ್ಕೆ ಕುಸಿದ ಬಿಜೆಪಿಯ ಸದಸ್ಯ ಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...