Homeಕ್ರೀಡೆಕ್ರಿಕೆಟ್2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

- Advertisement -
- Advertisement -

2023ರ ಏಷ್ಯಾಕಪ್‌ ಪಂದ್ಯಾವಳಿ ನಡೆಯುವ ಪಾಕಿಸ್ತಾನಕ್ಕೆ ಭಾರತೀಯ ಕ್ರಿಕೆಟ್ ತಂಡವು ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆ ಬೆನ್ನಲ್ಲೆ ಮುಂದಿನ ವರ್ಷ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ನಲ್ಲಿ ಭಾಗವಹಿಸುವುದಿಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಹೇಳಿದೆ. ಹಾಗಾಗಿ ಎರಡೂ ದೇಶದ ಕ್ರಿಕೆಟ್ ಮಂಡಳಿಗಳ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥರೂ ಆಗಿರುವ ಜಯ್ ಶಾ “ಪಾಕಿಸ್ತಾನಕ್ಕೆ ಭಾರತ ತಂಡ ಪ್ರಯಾಣಿಸಲು ಸಾಧ್ಯವಿಲ್ಲ. ಹಾಗಾಗಿ ತಟಸ್ಥ ಸ್ಥಳದಲ್ಲಿ ಪಂದ್ಯಾವಳಿ ಆಯೋಜಿಸಬೇಕು” ಎಂಬ ಹೇಳೀಕೆ ಬೆನ್ನಲ್ಲೆ ಪಾಕ್ ಕ್ರಿಕೆಟ್ ಮಂಡಳಿ ಸಹ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ನಿಂದ ದೂರವುಳಿಯುವುದಾಗಿ ಬೆದರಿಕೆ ಒಡ್ಡಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಜಯ್ ಶಾ ಹೇಳಿಕೆಯು ಏಕಪಕ್ಷೀಯವಾಗಿದ್ದು ಅಂತರಾಷ್ಟ್ರೀಯ ಕ್ರಿಕೆಟ್ ಸಮುದಾಯವನ್ನು ವಿಭಜಿಸಬಹುದು ಎಂದು ಹೇಳಿದೆ. ಏಷ್ಯಾ ಕಪ್ ಅನ್ನು ಪಾಕಿಸ್ತಾನದಿಂದ ಹೊರಕ್ಕೆ ಸ್ಥಳಾಂತರಿಸುವುದು ಭಾರತದಲ್ಲಿ ವಿಶ್ವಕಪ್‌ನಂತಹ ಭವಿಷ್ಯದ ಘಟನೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಅದು ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ಕ್ರೀಡಾ ಸಚಿವ ಅನುರಾಗ್ ಠಾಕೂರ್, “ಮುಂದಿನ ವರ್ಷ ಭಾರತದಲ್ಲಿ ODI ವಿಶ್ವಕಪ್ ನಡೆಯಲಿದ್ದು, ಜಗತ್ತಿನ ಎಲ್ಲಾ ದೊಡ್ಡ ತಂಡಗಳು ಇದರಲ್ಲಿ ಪಾಲ್ಗೊಳ್ಳಲಿವೆ. ಏಕೆಂದರೆ ಯಾವುದೇ ಕ್ರೀಡೆಯಲ್ಲಿ ಭಾರತವನ್ನು ಕಡೆಗಣಿಸಲು ಸಾಧ್ಯವಿಲ್ಲ. ಭಾರತ ಕ್ರೀಡೆಗೆ ಅದರಲ್ಲೂ ಕ್ರಿಕೆಟ್‌ಗೆ ಸಾಕಷ್ಟು ಕೊಡುಗೆ ನೀಡಿದೆ. ಭಾರತವಿಲ್ಲದೇ ಕ್ರಿಕೆಟ್ ಎಂದರೇನು?” ಎಂದು ಪ್ರಶ್ನಿಸಿದ್ದಾರೆ.

“ಪಾಕಿಸ್ತಾನಕ್ಕೆ ಏಷ್ಯಾಕಪ್‌ಗಾಗಿ ಭಾರತ ಕ್ರಿಕೆಟ್ ತಂಡದ ಪ್ರಯಾಣದ ಬಗ್ಗೆ ಗೃಹ ಸಚಿವಾಲಯ ನಿರ್ಧರಿಸುತ್ತದೆ. ಸಾಧ್ಯತೆಗಳು ಯಾವಾಗಲೂ ಇರುತ್ತವೆ. COVID-19 ಇರುತ್ತದೆ ಎಂದು ಯಾರು ಭಾವಿಸಿದ್ದರು? ಏನು ಬೇಕಾದರೂ ಆಗಬಹುದು ಆದರೆ ಈಗ ಸಾಧ್ಯತೆಗಳು ಹೆಚ್ಚಿಲ್ಲ. ಇದು ಗೃಹ ಸಚಿವಾಲಯವು ತೆಗೆದುಕೊಳ್ಳುವ ನಿರ್ಧಾರವಾಗಿದೆ. ಒಟ್ಟಾರೆ, ಆಟಗಾರರ ಸುರಕ್ಷತೆ ಮತ್ತು ಭದ್ರತೆಯು ಒಂದು ಪ್ರಮುಖ ವಿಷಯವಾಗಿದೆ” ಎಂದಿದ್ದಾರೆ.

ಕಳೆದ ವರ್ಷದಿಂದ ಪಾಕಿಸ್ತಾನ ತಂಡವು ಮಹತ್ವದ ತಂಡಗಳೊಂದಿಗೆ ದ್ವಿಪಕ್ಷೀಯ ಸರಣಿಗಳನ್ನು ಆಯೋಜಿಸುತ್ತಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಪಾಕ್‌ಗೆ ತೆರಳಿ ಪಂದ್ಯಗಳಾಡಿವೆ. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಿ ಆಡವಾಡಿದ್ದು 2005ರಲ್ಲಿಯೇ ಕೊನೆಯಾಗಿದೆ. ಆಗ ರಾಹುಲ್ ದ್ರಾವಿಡ್ ನೇತೃತ್ವದ ತಂಡ ಪಾಕ್‌ಗೆ ಪ್ರಯಾಣ ಬೆಳೆಸಿತ್ತು. ಪಾಕಿಸ್ತಾನ ತಂಡವು 2012-13ರಲ್ಲಿ ಮೂರು T20Iಗಳು ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ಭಾರತಕ್ಕೆ ಪ್ರವಾಸ ಮಾಡಿದ್ದೆ ಕೊನೆಯಾಗಿದೆ.

ಈ ಎಲ್ಲಾ ಗದ್ದಲಗಳ ನಡುವೆ ಇದೇ ಅಕ್ಟೋಬರ್ 23ರ ಭಾನುವಾರ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಭಾರತ-ಪಾಕ್ ತಂಡಗಳು ಪರಸ್ಪರ ಎದುರಾಗುತ್ತಿವೆ. ಅಭಿಮಾನಿಗಳು ಆ ಪಂದ್ಯಕ್ಕಾಗಿ ಕಾತುರರಾಗಿದ್ದಾರೆ.

ಇದನ್ನೂ ಓದಿ; 2023ರ ಏಷ್ಯಾ ಕಪ್‌‌ಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ: ಜಯ್ ಶಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...