Homeಅಂತರಾಷ್ಟ್ರೀಯಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗೆ ಮನಮೋಹನ್ ಸಿಂಗ್‌ಗೆ ಪಾಕ್ ಆಹ್ವಾನ

ಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗೆ ಮನಮೋಹನ್ ಸಿಂಗ್‌ಗೆ ಪಾಕ್ ಆಹ್ವಾನ

ಭಾರತದ ಪ್ರಧಾನಿ ಮೋದಿಗಿಲ್ಲ ಆಹ್ವಾನ...

- Advertisement -
- Advertisement -

ಕಾಶ್ಮೀರ ವಿಚಾರದಲ್ಲಿ ಕೆಂಡಕಾರುತ್ತಿರುವ ಪಾಕಿಸ್ತಾನ, ಕರ್ತಾರ್ಪುರ ಕಾರಿಡಾರ್ ಉದ್ಘಾಟನೆ ಸಮಾರಂಭಕ್ಕೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಆಮಂತ್ರಣ ನೀಡುವುದಾಗಿ ತಿಳಿಸಿದೆ. ಕರ್ತಾರ್ಪುರ ಕಾರಿಡಾರ್ ಜಂಟಿ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಆಮಂತ್ರಣ ನೀಡಿಲ್ಲ, ಬದಲಿಗೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಆಹ್ವಾನಿಸುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವ ಮೊಹಮ್ಮದ್ ಖುರೇಷಿ ತಿಳಿಸಿದ್ದಾರೆ.

ಮನಮೋಹನ್ ಸಿಂಗ್ ಅವರು ಸಿಖ್ ಸಮುದಾಯದವರು. ಹೀಗಾಗಿ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ಕಳುಹಿಸುತ್ತೇವೆ ಎಂದು ಹೇಳಿದರು. ಕಾಶ್ಮೀರದಲ್ಲಿ ಮೋದಿ ಸರ್ಕಾರ ವಿಶೇಷಾಧಿಕಾರ ರದ್ದುಗೊಳಿಸಿ, ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ್ದರಿಂದ ಮೋದಿ ಅವರಿಗೆ ಆಹ್ವಾನ ನೀಡಿಲ್ಲ.

ಇನ್ನು ನವೆಂಬರ್ 9 ರಂದು ಕಾರಿಡಾರ್ ಉದ್ಘಾಟನೆಯಾಗಲಿದೆ. ನವೆಂಬರ್ 9ಕ್ಕೂ ಮೂರು ದಿನಗಳ ಮೊದಲು ಸಿಖ್ ಧರ್ಮಗುರು ಗುರುನಾನಕ್ ದೇವ್ ಅವರ 550ನೇ ಹುಟ್ಟುಹಬ್ಬದ ವಾರ್ಷಿಕೋತ್ಸವ ನಡೆಯಲಿದೆ. ನಂಕನ್ ಸಾಹೀಬ್, ಗುರು ನಾನಕ್ ದೇವ್ ಅವರ ಜನ್ಮಸ್ಥಳ. ನಂಕನ್ ಸಾಹೀಬ್ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿದೆ. ಇಲ್ಲಿದಂಲೇ ಸಿಖ್ ಯಾತ್ರಾರ್ಥಿಗಳಿಗೆ ಪಿಎಂ ಮೋದಿ ಹಸಿರು ನಿಶಾನೆ ತೋರಲಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...