Homeಮುಖಪುಟಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

- Advertisement -
- Advertisement -

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ. ಆದರೆ, ಅದರಲ್ಲಿ ತನ್ನ ವಿರುದ್ದ ಯಾವುದೇ ಪುರಾವೆಗಳು ಇಲ್ಲದ ಕಾರಣ ಬಹಿರಂಗಪಡಿಸುತ್ತಿಲ್ಲ ಎಂದಿದ್ದಾರೆ.

ಗುವಾಹಟಿಯಲ್ಲಿ ಸೋಮವಾರ (ಫೆ.9) ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೊಗೊಯ್, “ನನ್ನ ಪತ್ನಿ 2013ರಲ್ಲಿ ಕೆಲಸದ ನಿಮಿತ್ತ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ್ದರು. ಆ ವರ್ಷದ ಡಿಸೆಂಬರ್‌ನಲ್ಲಿ 10 ದಿನಗಳ ಭೇಟಿಯ ಸಮಯದಲ್ಲಿ ನಾನು ಅವರ ಜೊತೆಗಿದ್ದೆ. ಈ ವಿಷಯದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಈ ಬಗ್ಗೆ ತನ್ನನ್ನು ಎಂದಿಗೂ ಪ್ರಶ್ನಿಸಿಲ್ಲ” ಎಂದು ಹೇಳಿದ್ದಾರೆ.

“ಸಿಎಂ ಶರ್ಮಾ ಎಷ್ಟು ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದರೆ, ಅವರು ನನ್ನ ಮಕ್ಕಗಳ ಬಗ್ಗೆಯೂ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಅವರ ಮಕ್ಕಳ ಬಗ್ಗೆಯೂ ನಮಗೆ ಗೊತ್ತಿದೆ, ಎಲ್ಲರಿಗೂ ಗೊತ್ತಿದೆ. ಆದರೆ, ಅವರ ಮಾಹಿತಿಯನ್ನು ಬಹಿರಂಗಪಡಿಸಲು ಬಯಸುವುದಿಲ್ಲ. ಹಿಮಂತ ಬಿಸ್ವಾ ಶರ್ಮಾ ತಾನು ಸಿಎಂ ಕುರ್ಚಿಯಲ್ಲಿ ಕೂರಲು ಅರ್ಹವಾದ ವ್ಯಕ್ತಿಯಲ್ಲ ಎಂದು ಸಾಬೀತುಪಡಿಸಿದ್ದಾರೆ. ಅವರ ಹೇಳಿಕೆಗಳು ಅಸ್ಸಾಂಗೆ ನಾಚಿಕೆಗೇಡು, ಅವರು ಸುಳ್ಳು ಸುದ್ದಿಯನ್ನು ಏಕೆ ಹರಡುತ್ತಿದ್ದಾರೆ? ಸುಪ್ರೀಂ ಕೋರ್ಟ್‌ ಈ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಳ್ಳಬೇಕು” ಎಂದು ಗೊಗೊಯ್ ಹೇಳಿದ್ದಾರೆ. ತನ್ನ ಅಪ್ರಾಪ್ತ ಮಕ್ಕಳನ್ನು ವಿವಾದಕ್ಕೆ ಎಳೆದಿರುವ ಸಿಎಂ ಶರ್ಮಾ ವಿರುದ್ದ ಕ್ರಮಕ್ಕೆ ಕಾನೂನು ಆಯ್ಕೆಗಳನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ತಾನು ನಿರಪರಾಧಿ ಎಂದು ಸಾಬೀತುಪಡಿಸಲು ಎಸ್‌ಐಟಿ ವರದಿಯನ್ನು ಬಹಿರಂಗಗೊಳಿಸುವಂತೆ ಗೊಗೊಯ್ ಒತ್ತಾಯಿಸಿದ್ದಾರೆ. “ನಾನು ಆರಂಭದಿಂದಲೂ ಹೇಳುತ್ತಿದ್ದೇನೆ, ನಾನು ಎಸ್‌ಐಟಿ ತನಿಖೆಯ ವಿರುದ್ದ ಇಲ್ಲ. ಎಸ್‌ಐಟಿ ವರದಿಯನ್ನು ಬಿಡುಗಡೆ ಮಾಡಬೇಕೆಂದೇ ನಾನೂ ಬಯಸುತ್ತಿದ್ದೇನೆ” ಎಂದು ಹೇಳಿದ್ದಾರೆ.

ಶರ್ಮಾ ಅವರ ಪತ್ರಿಕಾಗೋಷ್ಠಿಯ ಸಮಯದ ಬಗ್ಗೆ ಪ್ರತಿಕ್ರಿಯಿಸಿದ ಗೊಗೊಯ್, “ನಿನ್ನೆಯ ಸುದೀರ್ಘ ಪತ್ರಿಕಾಗೋಷ್ಠಿಯ ಹಿಂದಿನ ಪ್ರಮುಖ ಅಂಶವೆಂದರೆ ಕಾಂಗ್ರೆಸ್ ಪಕ್ಷದ ಜನಪ್ರಿಯತೆ ಹೆಚ್ಚುತ್ತಿದೆ… ಅಲ್ಲದೆ ರಾಷ್ಟ್ರೀಯ ಭದ್ರತೆಯ ವಿಷಯವಾಗಿದ್ದರೆ, ಅವರು ಕಳೆದ ಆರು ತಿಂಗಳಿನಿಂದ ಏಕೆ ಸುಮ್ಮನಿದ್ದರು?.. ಕಾಂಗ್ರೆಸ್ ಪಕ್ಷವು 12,000 ಬಿಘಾ ಭೂಮಿ ಸಿಎಂ ಕುಟುಂಬದ ಒಡೆತನದಲ್ಲಿದೆ ಎಂದು ಬಹಿರಂಗಪಡಿಸಿದ ನಂತರ ಸಿಎಂ ಪತ್ರಿಕಾಗೋಷ್ಠಿ ನಡೆಸಬೇಕಾಯಿತು” ಎಂದು ಗೊಗೊಯ್ ತಿಳಿಸಿದ್ದಾರೆ.

“ಸಿಎಂ ಶರ್ಮಾ ತಮ್ಮ ಸಾಮಾಜಿಕ ಮಾಧ್ಯಮದ ವಿಡಿಯೋಗಳ ಮೂಲಕ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ” ಎಂದು ಗೊಗೊಯ್ ಆರೋಪಿಸಿದ್ದಾರೆ.

ಸಿಎಂ ಶರ್ಮಾ ಅವರು ಗೌರವ್ ಗೊಗೊಯ್ ಅವರ ಪತ್ನಿ ಎಲಿಜಬೆತ್ ಕೋಲ್ಬರ್ನ್ ಮತ್ತು ಪಾಕಿಸ್ತಾನಿ ಪ್ರಜೆ ಅಲಿ ತೌಕೀರ್ ಶೇಖ್ ನಡುವೆ ಆಳವಾದ ಸಂಬಂಧವಿದೆ ಎಂದು ಆರೋಪಿಸಿದ್ದಾರೆ. ಗುಪ್ತಚರ ಬ್ಯೂರೋದ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಲಾಗಿದೆ ಎಂದು ಶರ್ಮಾ ಹೇಳಿಕೊಂಡಿದ್ದಾರೆ ಮತ್ತು ಗೌರವ್ ಗೊಗೊಯ್ ಅವರು 2013ರಲ್ಲಿ ಪಾಕಿಸ್ತಾನಕ್ಕೆ ‘ಅತ್ಯಂತ ಗೌಪ್ಯ ಭೇಟಿ’ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪಗಳನ್ನು ಗೌರವ್ ಗೊಗೊಯ್ ಅವರು “ಸಿ-ಗ್ರೇಡ್ ಸಿನಿಮಾ” ಮತ್ತು “ಸಂಪೂರ್ಣ ಸುಳ್ಳು” ಎಂದು ತಳ್ಳಿಹಾಕಿದ್ದಾರೆ.

ಭಾರತಕ್ಕೆ ವರ್ಗಾವಣೆಯಾಗುವ ಮೊದಲು ಕೋಲ್ಬರ್ನ್ ಅವರು ತೌಕೀರ್ ಶೇಖ್ ನಡೆಸುತ್ತಿದ್ದ ‘ಲೀಡ್ ಪಾಕಿಸ್ತಾನ್’ ಸಂಸ್ಥೆಯೊಂದಿಗೆ ಕೆಲಸ ಮಾಡಿದ್ದರು. ಭಾರತಕ್ಕೆ ಬಂದ ಮೇಲೆ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ನಿಯಮಗಳನ್ನು ಉಲ್ಲಂಘಿಸಿ ಶೇಖ್ ಅವರಿಂದ ಸಂಬಳ ಪಡೆಯುವುದನ್ನು ಮುಂದುವರೆಸಿದ್ದರು ಎಂದು ಶರ್ಮಾ ಆರೋಪ ಮಾಡಿದ್ದಾರೆ.

ಭಾರತದಲ್ಲಿ ಕೆಲಸ ಮಾಡಿದ ನಂತರ, ಕೋಲ್ಬರ್ನ್ ಶೇಖ್ ಅವರಿಗೆ ಮಾಹಿತಿಯನ್ನು ಸಂಗ್ರಹಿಸಿ ವರದಿಗಳನ್ನು ನೀಡಿದ್ದಾರೆ. ಗೊಗೊಯ್ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಪಾಕಿಸ್ತಾನಿ ಬ್ಯಾಂಕ್ ಖಾತೆಯನ್ನು ಘೋಷಿಸಿಲ್ಲ ಎಂದು ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...