Homeಕ್ರೀಡೆಕ್ರಿಕೆಟ್ಜಿಂಬಾಬ್ವೆ ಎದುರು 1 ರನ್‌ನಿಂದ ಸೋತ ಪಾಕಿಸ್ತಾನ: ಸೆಮಿಫೈನಲ್ ಹಾದಿ ದುರ್ಗಮ

ಜಿಂಬಾಬ್ವೆ ಎದುರು 1 ರನ್‌ನಿಂದ ಸೋತ ಪಾಕಿಸ್ತಾನ: ಸೆಮಿಫೈನಲ್ ಹಾದಿ ದುರ್ಗಮ

- Advertisement -
- Advertisement -

ಇಂದು ನಡೆದ ಟಿ20 ವಿಶ್ವಕಪ್ ಸೂಪರ್ 12ರ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಪಾಕಿಸ್ತಾನಕ್ಕೆ ಆಘಾತಕಾರಿ ಸೋಲುಣಿಸಿದೆ. ಸತತ ಎರಡನೇ ಸೋಲು ಕಂಡಿರುವ ಪಾಕಿಸ್ತಾನದ ಸೆಮಿಫೈನಲ್ ಹಾದಿ ಮತ್ತಷ್ಟು ದುರ್ಗಮವಾಗಿದೆ.

ಗೆಲ್ಲಲು 131 ರನ್‌ಗಳ ಸಾಧಾರಣ ಗುರಿ ಪಡೆದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 129 ರನ್‌ಗಳನ್ನಷ್ಟೆ ಗಳಿಸಲು ಸಾಧ್ಯವಾಯಿತು. ಆ ಮೂಲಕ 1 ರನ್‌ಗಳ ಸೋಲೊಪ್ಪಿಕೊಂಡಿತು.

ಕೊನೆಯ ಓವರ್‌ನಲ್ಲಿ ಗೆಲ್ಲಲು ಪಾಕಿಸ್ತಾನಕ್ಕೆ 11 ರನ್‌ಗಳ ಅಗತ್ಯವಿತ್ತು. ಬ್ರಾಡ್ ಇವನ್ ಎಸೆದ ಮೊದಲ ಎಸೆತದಲ್ಲಿ ಪಾಕಿಸ್ತಾನದ ಬ್ಯಾಟರ್ ಮೊಹಮ್ಮದ್ ನವಾಜ್ 3 ರನ್ ಗಳಿಸಿದರು. ಎರಡನೇ ಎಸೆತದಲ್ಲಿ ಮೊಹಮ್ಮದ್ ವಾಸಿಂ ಬೌಂಡರಿ ಗಳಿಸಿದರು. ಅಲ್ಲಿಗೆ ನಾಲ್ಕು ಎಸೆತಗಳಲ್ಲಿ 4 ರನ್ ಮಾತ್ರ ಅಗತ್ಯವಿತ್ತು.

ಮೂರನೇ ಎಸೆತದಲ್ಲಿ ಮೊಹಮ್ಮದ್ ವಾಸಿಂ 1 ರನ್ ಗಳಿಸಿದರು. ನಾಲ್ಕನೇ ಎಸೆತದಲ್ಲಿ ಮೊಹಮ್ಮದ್ ನವಾಜ್ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಐದನೇ ಎಸೆತದಲ್ಲಿ ಕ್ಯಾಚಿತ್ತು ಔಟಾದರು. ಕೊನೆ ಬಾಲ್‌ನಲ್ಲಿ ಪಾಕಿಸ್ತಾನ 3 ರನ್ ಗಳಿಸಬೇಕಿತ್ತು. ಶಾಹೀನ್ ಅಫ್ರಿದಿ ಸ್ಟ್ರೈಕರ್‌ನಲ್ಲಿದ್ದರು. ನೇರ ಹೊಡೆದ ಬಾಲ್ ಫೀಲ್ಡರ್ ಕೈ ತಲುಪಿತು. ಎರಡನೇ ರನ್ ಓಡುತ್ತಿದ್ದ ಶಾಹೀನ್ ಅಫ್ರಿದಿ ರನ್ ಔಟಾದರು. ಅಲ್ಲಿಗೆ ಜಿಂಬಾಬ್ವೆ 1 ರನ್‌ಗಳ ರೋಚಕ ಗೆಲುವು ದಾಖಲಿಸಿತು.

ಇದಕ್ಕೂ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿತು.

ಟಿ20 ವಿಶ್ವಕಪ್ ಸೂಪರ್ 12 ಹಂತದ ಮೊದಲನೇ ಗುಂಪಿನ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು  ಐರ್ಲೆಂಡ್ ಮಣಿಸಿತ್ತು. ಅದಕ್ಕೂ ಮೊದಲು ಅರ್ಹತಾ ಸುತ್ತಿನಲ್ಲಿ 2 ಬಾರಿ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಮನೆಗೆ ಕಳುಹಿಸಿತ್ತು. ಅದೇ ರೀತಿ ಇಂದು ಬಲಿಷ್ಠ ಪಾಕಿಸ್ತಾನವನ್ನು ಜಿಂಬಾಬ್ವೆ ಸೋಲಿಸಿದೆ. ಸಣ್ಣ ತಂಡಗಳು ಯಾವುದೇ ಒತ್ತಡವಿಲ್ಲದೆ ಆಡಿ ಬಲಿಷ್ಟ ತಂಡಗಳನ್ನು ಮಣಿಸುತ್ತಿವೆ.

ಇದನ್ನೂ ಓದಿ: ನೆದರ್ಲೆಂಡ್ಸ್ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ: ಸೆಮಿಫೈನಲ್‌ನತ್ತ ಹೆಜ್ಜೆ

ಭಾರತದ ಎದುರು ಸೋಲು ಕಂಡಿದ್ದ ಪಾಕಿಸ್ತಾನ ಈಗ ಜಿಂಬಾಬ್ವೆ ವಿರುದ್ದವೂ ಸೋತಿದೆ. ಇನ್ನೊಂದೆಡೆ 2ನೇ ಗ್ರೂಪ್‌ನಲ್ಲಿ ಎರಡು ತಂಡಕ್ಕೆ ಮಾತ್ರ ಸೆಮಿಫೈನಲ್ ತಲುಪುವ ಅವಕಾಶವಿದೆ. ಭಾರತ ಎರಡು ಗೆಲುವಿನೊಂದಿಗೆ ಮುಂದಿದೆ. ದಕ್ಷಿಣ ಆಫ್ರಿಕಾ ತಂಡ ಒಂದು ಗೆಲುವು ಒಂದು ಟೈನೊಂದಿಗೆ 3 ಅಂಕ ಗಳಿಸಿದೆ. ಹಾಗಾಗಿ ಪಾಕಿಸ್ತಾನದ ಸೆಮಿಫೈನಲ್ ಹಾದಿ ದುರ್ಗಮ ಅಂತಲೇ ಹೇಳಬೇಕಿದೆ.

ಪಾಕಿಸ್ತಾನ ತಂಡ ಮೊದಲನೇ ಪಂದ್ಯದಲ್ಲಿಯೂ ಸಹ ಭಾರತದ ಎದುರು ಗೆಲುವಿನ ಸನಿಹಕ್ಕೆ ಬಂದು ಎಡವಿತ್ತು. ಕೊನೆಯ ಓವರ್‌ನಲ್ಲಿ 16 ರನ್ ಬಿಟ್ಟುಕೊಟ್ಟು ಕೊನೆಯ ಎಸೆತದಲ್ಲಿ ಸೋಲೊಪ್ಪಿಕೊಂಡರು. ಇಂದು ಅದೇ ಪುನಾರಾವರ್ತನೆ ಆಯಿತು. ಬ್ಯಾಟಿಂಗ್‌ನಲ್ಲಿ ಕೊನೆಯವರೆಗೂ ತಲುಪಿ ಒಂದು ರನ್‌ನಿಂದ ಸೋಲು ಕಂಡರು.

ಪಾಕಿಸ್ತಾನಕ್ಕೆ ಸೂಪರ್ 12 ಹಂತದಲ್ಲಿ ಕೊನೆಯ ಮೂರು ಪಂದ್ಯಗಳು ಬಾಕಿ ಇವೆ. ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್ ವಿರುದ್ದ ಪಾಕ್ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸತತ ಸೋತರೆ ಮಾತ್ರ ಪಾಕಿಸ್ತಾನಕ್ಕೆ ಸೆಮಿಫೈನಲ್ ಅವಕಾಶವಿದೆ. ಅದರೆ ಅದು ಅಷ್ಟು ಸುಲಭವಲ್ಲ.

ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ 5ಕ್ಕೆ 5 ಪಂದ್ಯ ಗೆದ್ದು ಸೆಮಿಫೈನಲ್ ತಲುಪಿತ್ತು. ಆದರೆ ಅಲ್ಲಿ ಆಸ್ಟ್ರೇಲಿಯಾದ ಎದುರು ಸೋಲನ್ನು ಅನುಭವಿಸಿತ್ತು. ಆದರೆ ಈ ಬಾರಿ ಸೆಮಿಫೈನಲ್ ತಲುಪುವುದು ದುಸ್ತರವಾಗಿದೆ.

ಪಾಕಿಸ್ತಾನದ ಸೋಲಿನಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಸೆಮಿಫೈನಲ್ ಹಾದಿ ಮತ್ತಷ್ಟು ಸುಲಭವಾಗಲಿದೆ. ನವೆಂಬರ್ 03 ರಂದು ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕ ತಂಡದ ನಡುವಿನ ಪಂದ್ಯ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ; ಟಿ20 ವಿಶ್ವಕಪ್ ಕ್ರಿಕೆಟ್: ಬಲಿಷ್ಠ ಇಂಗ್ಲೆಂಡ್ ಮಣಿಸಿದ ಐರ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...