Homeಅಂತರಾಷ್ಟ್ರೀಯಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಅಮೆರಿಕ ಅಧ್ಯಕ್ಷ ಏನಂದ್ರು?

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಏರ್ಪಟ್ಟಿದ್ದ ಸಂಘರ್ಷವನ್ನು ಶಮನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು 2026ರ ‘ನೊಬೆಲ್ ಶಾಂತಿ ಪ್ರಶಸ್ತಿ’ಗೆ ಪಾಕಿಸ್ತಾನ ನಾಮನಿರ್ದೇಶನ ಮಾಡಿದೆ ಎಂದು ವರದಿಯಾಗಿದೆ.

ಪಾಕಿಸ್ತಾನ ಸರ್ಕಾರದ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಲಾಗಿದೆ ಎಂದು ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

“ಪಾಕಿಸ್ತಾನ ಸರ್ಕಾರ 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಶಿಫಾರಸ್ಸು ಮಾಡುತ್ತಿದೆ. ಭಾರತ-ಪಾಕ್ ಸಂಘರ್ಷದ ಸಂದರ್ಭದಲ್ಲಿ ಟ್ರಂಪ್ ವಹಿಸಿದ ಪ್ರಮುಖ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಪರಿವರ್ತನಾಶೀಲ ನಾಯಕತ್ವ ಪ್ರದರ್ಶಿಸಿದ್ದನ್ನು ಗುರುತಿಸಿ ಪಾಕಿಸ್ತಾನ ಸರ್ಕಾರವು 2026ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಅಧಿಕೃತವಾಗಿ ಶಿಫಾರಸ್ಸು ಮಾಡುತ್ತಿದೆ” ಎಂದು ಪೋಸ್ಟ್‌ನಲ್ಲಿ ಹೇಳಿರುವುದಾಗಿ ವರದಿಗಳು ವಿವರಿಸಿವೆ.

ಭಾರತ- ಪಾಕಿಸ್ತಾನದ ಸಂಘರ್ಷದ ಬಳಿಕ ಮೊದಲ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಪಾಕಿಸ್ತಾನ ಸೇನೆಯ ಮುಖ್ಯಸ್ಥ ಅಸೀಮ್ ಮುನೀರ್ ಅವರಿಗೆ, ಅಧ್ಯಕ್ಷ ಟ್ರಂಪ್ ಜೂನ್ 18ರಂದು ಶ್ವೇತಭವನದಲ್ಲಿ ವಿಶೇಷ ಔತಣಕೂಟ ಆಯೋಜಿಸಿದ್ದರು. ಇದರ ಮರುದಿನವೇ ಪಾಕಿಸ್ತಾನದಿಂದ ಈ ಅಚ್ಚರಿಯ ಹೇಳಿಕೆ ಹೊರಬಿದ್ದಿದೆ.

ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನ ಪ್ರೇರಿತ ಮತ್ತು ಇತರ ರೀತಿಯ ಭಯೋತ್ಪಾದನೆಯ ಕುರಿತ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಭಾರತ ಸರ್ಕಾರ ಸರ್ವಪಕ್ಷ ಸಂಸದರ ಸುಮಾರು 7 ನಿಯೋಗಗಳನ್ನು ವಿವಿಧ ರಾಷ್ಟ್ರಗಳಿಗೆ ಕಳುಹಿಸಿತ್ತು.

ಈ ನಿಯೋಗಗಳು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಬಣ್ಣ ಬಯಲು ಮಾಡಿದೆ ಎಂದು ಹೇಳಲಾಗಿತ್ತು. ಇದಾಗಿ ಕೆಲ ದಿನಗಳಲ್ಲೇ ಅಮೆರಿಕ ಅಧ್ಯಕ್ಷ ಪಾಕಿಸ್ತಾನದ ಸೇನಾ ಮುಖ್ಯಸ್ಥರಿಗೆ ಔತಣಕೂಟ ಆಯೋಜಿಸಿ ಗೌರವಿಸಿರುವುದು ಭಾರತಕ್ಕೆ ಒಂದು ರೀತಿಯಲ್ಲಿ ರಾಜತಾಂತ್ರಿಕ ಹಿನ್ನಡೆ ಎನ್ನಬಹುದು.

ಟ್ರಂಪ್ ಮಧ್ಯಸ್ಥಿಕೆ ಅಲ್ಲಗಳೆದ ಭಾರತ

ಭಾರತ-ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟಿದ್ದಾಗ, ಆರಂಭದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, “ಅದು ಆ ಎರಡು ರಾಷ್ಟ್ರಗಳ ನಡುವಿನ ಸಂಘರ್ಷ. ಈ ರೀತಿಯ ಸಂಘರ್ಷ ಭಾರತ-ಪಾಕಿಸ್ತಾನ ನಡುವೆ ಸುದೀರ್ಘ ಸಮಯದಿಂದ ಇದೆ. ನಮಗೆ ಭಾರತ-ಪಾಕಿಸ್ತಾನ ಎರಡೂ ಮಿತ್ರ ರಾಷ್ಟ್ರಗಳೇ. ಅವರ ಸಮಸ್ಯೆಯನ್ನು ಅವರು ಬಗೆ ಹರಿಸಿಕೊಳ್ಳುತ್ತಾರೆ. ನಾವು ಅದರಲ್ಲಿ ತಲೆ ಹಾಕಲು ಹೋಗುವುದಿಲ್ಲ” ಎಂದಿದ್ದರು.

ಆದರೆ, ಮೇ 10ರಂದು ಸಂಜೆ 5.33ರ (ಭಾರತೀಯ ಕಾಲಮಾನ) ಸುಮಾರಿಗೆ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಮೊದಲು ಪೋಸ್ಟ್ ಮಾಡಿದ್ದರು. ಆ ಬಳಿಕವಾಗಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಮತ್ತು ವಿದೇಶಾಂಗ ಇಲಾಖೆ ಸಚಿವರು ಕದನ ವಿರಾಮದ ಕುರಿತು ಘೋಷಣೆ ಮಾಡಿರುವುದು.

ಈ ಬೆಳವಣಿಗೆ ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದಲ್ಲಿ ಟ್ರಂಪ್ ಅಥವಾ ಅಮೆರಿಕ ಮಧ್ಯಸ್ಥಿಕೆ ವಹಿಸಿರುವುದನ್ನು ಡೃಢಪಡಿಸಿತ್ತು. ಅಲ್ಲದೆ, ಟ್ರಂಪ್ ತಮ್ಮ ಪೋಸ್ಟ್‌ನಲ್ಲಿ ಕೂಡ ಅಮೆರಿಕ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಏರ್ಪಟ್ಟಿದೆ ಎಂದಿದ್ದರು. (ಟ್ರಂಪ್‌ ಪೋಸ್ಟ್‌ನಲ್ಲಿ ‘Mediate by the United States’ ಎಂದು ಬರೆದಿರುವುದನ್ನು ನೋಡಬಹುದು)

ಸೌದಿಯಲ್ಲಿ ನಡೆದ ಹೂಡಿಕೆ ಸಮಾವೇಶದಲ್ಲಿ ಮಾತನಾಡಿದ್ದ ಟ್ರಂಪ್, ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಮಾಡಿಸಿದೆ ಎಂದು ಹೇಳಿಕೊಂಡಿದ್ದರು. ಆದರೆ, ಭಾರತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿತ್ತು.

ಟ್ರಂಪ್ ಈಗಲೂ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾವೇ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಭಾರತ ಅದನ್ನು ನಿರಾಕರಿಸುತ್ತಲೇ ಇದೆ. ಈ ನಡುವೆ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಟ್ರಂಪ್‌ಗೆ ನೊಬೆಲ್ ಕೊಡುವಂತೆ ಅಮೆರಿಕ ಶಿಫಾರಸ್ಸು ಮಾಡಿರುವುದು ಚರ್ಚೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ಟ್ರಂಪ್ ಪ್ರತಿಕ್ರಿಯೆ ಏನು?

ನೋಬೆಲ್‌ಗೆ ಶಿಫಾರಸ್ಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್, “ಹಿಂಸಾತ್ಮಕ ರಕ್ತಪಾತ, ಸಾವಿಗೆ ಹೆಸರುವಾಸಿಯಾಗಿರುವ ಮತ್ತು ದಶಕಗಳಿಂದ ಯುದ್ಧ ನಡೆಯುತ್ತಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಮತ್ತು ರುವಾಂಡಾ ಗಣರಾಜ್ಯದ ನಡುವೆ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಸೇರಿ ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ತಿಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಯುದ್ಧವು ಇತರ ಯುದ್ಧಗಳಿಗಿಂತ ಹೆಚ್ಚಾಗಿ ಹಿಂಸಾತ್ಮಕ ರಕ್ತಪಾತ ಮತ್ತು ಸಾವಿಗೆ ಹೆಸರುವಾಸಿಯಾಗಿತ್ತು ಮತ್ತು ದಶಕಗಳಿಂದ ನಡೆಯುತ್ತಿತ್ತು. ದಾಖಲೆಗಳಿಗೆ ಸಹಿ ಹಾಕಲು ರುವಾಂಡಾ ಮತ್ತು ಕಾಂಗೋದ ಪ್ರತಿನಿಧಿಗಳು ಸೋಮವಾರ ವಾಷಿಂಗ್ಟನ್‌ ಆಗಮಿಸಲಿದ್ದಾರೆ. ಇದು ಆಫ್ರಿಕಾಕ್ಕೆ ಮತ್ತು ಸ್ಪಷ್ಟವಾಗಿ ಹೇಳುವುದಾದರೆ, ಜಗತ್ತಿಗೆ ಶ್ರೇಷ್ಠ ದಿನ!. ಇದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದು ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ, ಈಜಿಪ್ಟ್ ಮತ್ತು ಇಥಿಯೋಪಿಯಾ ನಡುವೆ ಶಾಂತಿ ಕಾಪಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. (ಯುಎಸ್‌ ಮೂರ್ಖತನದಿಂದ ಹಣಕಾಸು ಒದಗಿಸಿದ ಇಥಿಯೋಪಿಯನ್ ನಿರ್ಮಿಸಿದ ಬೃಹತ್ ಅಣೆಕಟ್ಟು, ನೈಲ್ ನದಿಗೆ ಹರಿಯುವ ನೀರನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ) ಮತ್ತು ಮಧ್ಯಪ್ರಾಚ್ಯದಲ್ಲಿ ಅಬ್ರಹಾಂ ಒಪ್ಪಂದಗಳನ್ನು ಮಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದಿದ್ದಾರೆ.

“ಎಲ್ಲವೂ ಸರಿಯಾಗಿ ನಡೆದರೆ, ಇನ್ನಷ್ಟು ದೇಶಗಳು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಿವೆ. ಈ ಮೂಲಕ ಈ ಯುಗದಲ್ಲೇ ಮೊದಲ ಬಾರಿಗೆ ಮಧ್ಯಪ್ರಾಚ್ಯ ಒಂದಾಗಲಿದೆ. ಇಲ್ಲ, ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಇರಾನ್ ಸೇರಿದಂತೆ ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ನನ್ನ ಶ್ರಮದ ಫಲಿತಾಂಶಗಳು ಏನೇ ಇರಲಿ. ಅದು ಜನರಿಗೆ ತಿಳಿದಿದೆ. ನನಗೆ ಅಷ್ಟೇ ಮುಖ್ಯ” ಎಂದು ಟ್ರಂಪ್ ಹೇಳಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...