ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಕೊರೊನಾ ಪಾಸಿಟಿವ್ ಆಗಿದ್ದಾರೆ ಎಂದು ದೇಶದ ಆರೋಗ್ಯ ಸೇವೆಗಳ ಉನ್ನತ ಅಧಿಕಾರಿ ಟ್ವೀಟ್ ಮಾಡಿದ್ದಾರೆ. ಅವರು ಎರಡು ದಿನಗಳ ಹಿಂದೆಯಷ್ಟೇ ಕೊರೊನಾ ಲಸಿಕೆ ಪಡೆದುಕೊಂಡಿದ್ದರು.
ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಪ್ರಧಾನಿ ತಮ್ಮ ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ವಿಶೇಷ ಸಹಾಯಕ ಫೈಸಲ್ ಸುಲ್ತಾನ್ ತಿಳಿದ್ದಾರೆ.
ಇದನ್ನೂ ಓದಿ: ‘ಆಟ ಶುರು – ಬಂಗಾಳದಲ್ಲಿ ಬಿಜೆಪಿ ತೊಲಗಿಸಿ’: ರಾಕೇಶ್ ಟಿಕಾಯತ್ ಕರೆ
ಈ ಬಗ್ಗೆ ಟ್ವೀಟ್ ಮಾಡಿರುವ ಫೈಝಲ್ ಸುಲ್ತಾನ್, “ಪಿಎಂ ಇಮ್ರಾನ್ ಖಾನ್ ಕೊರೊನಾ ಪಾಸಿಟಿವ್ ಆಗಿದ್ದಾರೆ ಮತ್ತು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ” ಎಂದು ಹೆಚ್ಚಿನ ವಿವರಗಳನ್ನು ನೀಡದೆ ಟ್ವೀಟ್ ಮಾಡಿದ್ದಾರೆ.
PM Imran Khan has tested positive for Covid-19 and is self isolating at home
— Faisal Sultan (@fslsltn) March 20, 2021
ಇಮ್ರಾನ್ ಖಾನ್ ಗುರುವಾರ ಅಷ್ಟೇ ಕೊರೊನಾ ಲಸಿಕೆ ಪಡೆದುಕೊಂಡಿದ್ದರು.
ಅವರು ಇತ್ತೀಚೆಗೆ ನಿಯಮಿತವಾಗಿ ಮತ್ತು ಆಗಾಗ್ಗೆ ಸಭೆಗಳನ್ನು ನಡೆಸುತ್ತಿದ್ದು, ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆದ ಭದ್ರತಾ ಸಮಾವೇಶದಲ್ಲಿ ಪಾಲ್ಗೊಳ್ಳುವುದು ಸೇರಿದಂತೆ ಹೆಚ್ಚಿನ ಸಂಖ್ಯೆಯ ಜನರು ಭಾಗವಹಿಸಿದ್ದ ಸಭೆಯಲ್ಲಿ ಅವರು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.
ಪಾಕಿಸ್ತಾನದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಒಟ್ಟು ಪ್ರಕರಣಗಳು 6.15 ಲಕ್ಷ ದಾಟಿದ್ದು, ಸಾವಿನ ಸಂಖ್ಯೆ 13,700 ಕ್ಕೆ ದಾಟಿದೆ.
ಇದನ್ನೂ ಓದಿ: ಸಿಂಘು ಗಡಿಯಲ್ಲಿ ಎರಡು ಅಂತಸ್ತಿನ ಮನೆ ನಿರ್ಮಿಸುತ್ತಿರುವ ರೈತರು!


