Homeಅಂತರಾಷ್ಟ್ರೀಯಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

- Advertisement -
- Advertisement -

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿಯ (ಇಸಿಸಿ) ಪ್ರಸ್ತಾವನೆಯನ್ನು ಪಾಕಿಸ್ತಾನದ ಕ್ಯಾಬಿನೆಟ್ ಗುರುವಾರ ತಿರಸ್ಕರಿಸಿದ್ದು, ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ.

ಪಾಕಿಸ್ತಾನದ ಹೊಸ ಹಣಕಾಸು ಸಚಿವ ಹಮ್ಮದ್ ಅಝರ್ ಅವರು ಅಧ್ಯಕ್ಷತೆ ವಹಿಸಿದ್ದ ಇಸಿಸಿ ಸಭೆಯಲ್ಲಿ ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿನ ಮೇಲಿನ ಎರಡು ವರ್ಷಗಳ ಹಳೆಯ ನಿಷೇಧವನ್ನು ತೆಗೆದುಹಾಕುವುದಾಗಿ ಬುಧವಾರ ಘೋಷಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ, ಇಮ್ರಾನ್ ಖಾನ್ ಅವರ ಆಪ್ತ ಸಹಾಯಕಿ ಮತ್ತು ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ ಅವರು, ಎಲ್ಲಾ ಇಸಿಸಿ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ ಮತ್ತು ಆಗ ಮಾತ್ರ ಅವುಗಳನ್ನು ಸರ್ಕಾರದ ಅನುಮೋದನೆ ಎಂದು ಹೇಳಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

“ಇಸಿಸಿಯ ಎಲ್ಲಾ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ. ಆಗ ಮಾತ್ರ ಅವುಗಳನ್ನು ಸರ್ಕಾರದಿಂದ ಅನುಮೋದಿಸಲಾಗಿದೆ ಎಂದು ಹೇಳಬಹುದು. ಆದ್ದರಿಂದ ಇಂದು ಕ್ಯಾಬಿನೆಟ್‌‌ನಲ್ಲಿ ಭಾರತದೊಂದಿಗೆ ವ್ಯಾಪಾರ ಸೇರಿದಂತೆ ಇಸಿಸಿ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಮಾಧ್ಯಮಗಳು ಈ ಬಗ್ಗೆ ಕನಿಷ್ಠ ತಿಳಿದಿರಬೇಕು” ಎಂದು ಶಿರಿನ್ ಮಜಾರಿ ಬೆಳಿಗ್ಗೆ ತಿಳಿಸಿದ್ದರು.

ಸಂಜೆ ಟ್ವೀಟ್ ಮಾಡಿ, “ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ. 5 ಆಗಸ್ಟ್ 2019 ರಂದು ಜಮ್ಮುಕಾಶ್ಮೀರದಲ್ಲಿ ಹೇರಲ್ಪಟ್ಟ ಕಾನೂನುಬಾಹಿರ ಕ್ರಮಗಳನ್ನು ಹಿಂಪಡೆಯುವರೆಗೆ ಭಾರತದೊಂದಿಗೆ ಯಾವುದೇ ಸಂಬಂಧವನ್ನು ಸಾಮಾನ್ಯೀಕರಿಸಲಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ” ಎಂದು ಕಾಶ್ಮೀರದ ಬಗ್ಗೆ ಬಿಗಿ ನಿಲುವಿಗೆ ಹೆಸರುವಾಸಿಯಾದ ಶಿರಿನ್ ಮಜಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನರಗುಂದ: ದಲಿತ ಬಾಲಕಿಯ ಸುಟ್ಟ ಮೃತದೇಹ ಪತ್ತೆ – ಅತ್ಯಾಚಾರ, ಕೊಲೆ ಆರೋಪ

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಾಗಿ ಅಜರ್ ಬುಧವಾರ ಪ್ರಕಟಿಸಿದ್ದು, ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳು ಭಾಗಶಃ ಪುನ ಪ್ರಾರಂಭವಾಗುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿತ್ತು. ಭಾರತವು 2019 ರ ಆಗಸ್ಟ್ 5 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವುದರೊಂದಿಗೆ ಈ ವ್ಯಾಪಾರ ಸಂಬಂಧವು ಸ್ಥಗಿತಗೊಂಡಿತ್ತು.

ಭಾರತವು ವಿಶ್ವದ ಅತಿದೊಡ್ಡ ಹತ್ತಿ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಭಾರತದಿಂದ ಔಷಧಗಳು ಮತ್ತು ಅಗತ್ಯ ಔಷಧಿಗಳ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವ ನಿಷೇಧವನ್ನು 2020 ರ ಮೇ ತಿಂಗಳಲ್ಲಿ ಪಾಕಿಸ್ತಾನ ತೆಗೆದುಹಾಕಿತ್ತು.

2019 ರ ಆಗಸ್ಟ್‌ನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ಕ್ರಮವು ಪಾಕಿಸ್ತಾನಕ್ಕೆ ಕೋಪವನ್ನುಂಟುಮಾಡಿತ್ತು. ಇದರೊಂದಿಗೆ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವು ಕುಸಿದಿದ್ದು, ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನರ್‌ನನ್ನು ವಾಪಾಸ್ ಕಳುಹಿಸಿತ್ತು. ಪಾಕಿಸ್ತಾನವು ಭಾರತದೊಂದಿಗಿನ ಎಲ್ಲಾ ವಾಯು ಮತ್ತು ಭೂ ಸಂಪರ್ಕಗಳನ್ನು ಕಿತ್ತುಹಾಕಿ, ವ್ಯಾಪಾರ ಮತ್ತು ರೈಲ್ವೆ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...