Homeಅಂತರಾಷ್ಟ್ರೀಯಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆದ ನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಪೊಲೀಸ್ ದೌರ್ಜನಕ್ಕೆ ಕಾರಣಕ್ಕೆ ಅಮಾಯಕರು ಶಿಕ್ಷೆ ಅನುಭವಿಸಿದ ಹಲವಾರು ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಕರ್ನಾಟಕದ ಮೂಡಿಗೆರೆ ಸೇರಿದಂತೆ ಹಲವು ಕಡೆ ಪೊಲೀಸ್ ದೌರ್ಜನ್ಯ ಘಟನೆಗಳು ನಡೆದಿವೆ. ‘ಅಧಿಕಾರದ ಅಹಂ’ ನಿಂದ ಪೊಲೀಸರು ಕಾನೂನು ಬಾಹಿರವಾಗಿ ನಡೆಸುವ ಕೃತ್ಯಗಳು ಒಂದೇ ದೇಶ, ಒಂದು ಪ್ರದೇಶಕ್ಕೆ ಸಿಮೀತವಾಗಿಲ್ಲ. ಅವು ವಿಶ್ವವ್ಯಾಪಿಯಾಗಿವೆ ಎಂಬುದನ್ನು ಪಾಕಿಸ್ತಾನದ ಈ ನಿದರ್ಶನ ರುಜುವಾತು ಮಾಡಿದೆ.

ಪಾಕಿಸ್ತಾನದ ಅಬುಜರ್ ಮಧು ಎಂಬ ಕಲಾವಿದನನ್ನು ಜೂನ್‌ನಲ್ಲಿ ಲಾಹೋರ್‌ನಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು ಮತ್ತು ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ರಾತ್ರಿ ಬಂಧನದಲ್ಲಿಟ್ಟಿದ್ದರು. ಕಾರಣವೆಂದರೆ ಆತ ಉದ್ದ ಕೂದಲು ಬೆಳಿಸಿದ್ದಾಗಿತ್ತು ಎಂದು ಅವನ ಸ್ನೇಹಿತೆ, ಟ್ವಿಟರ್ ಬಳಕೆದಾರ ನತಾಶಾ ಜಾವೇದ್ ತಿಳಿಸಿದ್ದಾರೆ.

“ಅಬುಜರ್ ಒಬ್ಬ ಕಲಾವಿದ ಮತ್ತು ಶಿಕ್ಷಕ. ಅವರು ಕಲ್ಮಾ ಚಾಕ್ ಬಳಿ ರಿಕ್ಷಾಗಾಗಿ ಕಾಯುತ್ತಿದ್ದಾಗ ಪೊಲೀಸರು ಅವರ ಬಳಿ ಬಂದು ಗುರುತಿನ ಚೀಟಿಯನ್ನು ತೋರಿಸಲು ಕೇಳಿದ್ದಾರೆ. ಅವರು ಗುರುತಿನ ಚೀಟಿ ತೋರಿಸಿದರೂ ಸಹ ಅವರನ್ನು ಬಂಧಿಸಿ ಕರೆದೊಯ್ಯಲಾಯಿತು” ಎಂದು ಜಾವೇದ್ ಹೇಳಿದ್ದಾರೆ.

“ತನ್ನನ್ನು ಬಂಧಿಸಿದ್ದರ ಕಾರಣ ಕೇಳಿದರೆ “ನೀನು ದುರುಗುಟ್ಟುಕೊಂಡು ನೋಡುತ್ತಿದ್ದೆ. ಉದ್ದ ಕೂದಲು ಬೆಳಿಸಿದ್ದೆ. ಅಲ್ಲದೇ ಮುಂಜಾನೆ 3 ಗಂಟೆ ಸಮಯದಲ್ಲಿ ರಸ್ತೆಯಲ್ಲಿದ್ದೀಯ ಎಂಬ ಕಾರಣದಿಂದಲೂ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾಗಿ ಅಬುಜಾರ್‌” ತಿಳಿಸಿದರು.

ನತಾಶಾ ಜಾವೇದ್ ಘಟನೆಯ ಕುರಿತು ದೀರ್ಘವಾಗಿ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಅವರ ಪ್ರಕಾರ, “ಯಾವುದೇ ಕಾರಣವಿಲ್ಲದೆ ಅಬುಜಾರ್‌ನನ್ನು ಬಂಧಿಸಲಾಯಿತು. ಈ ಬಗ್ಗೆ ಅವರು ಪ್ರಶ್ನಿಸಿದಾಗ ಅವರಿಗೆ ಬೆದರಿಕೆ ಒಡ್ಡಲಾಯಿತು. ಅವರ ಮೇಲೆ ದೌರ್ಜನ್ಯವೆಸಗಿ ಒಂದು ರಾತ್ರಿ ಜೈಲಿನಲ್ಲಿ ಕಳೆಯುವಂತೆ ಮಾಡಲಾಯಿತು. ಮಾರನೇಯ ದಿನ ಸ್ನೇಹಿತರ ಮಧ್ಯಪ್ರವೇಶದಿಂದ ಅವರನ್ನು ಬಿಡುಗಡೆ ಮಾಡಲಾಯಿತು” ಎಂದು ಆರೋಪಿಸಿದ್ದಾರೆ.

ಅವರನ್ನು ಏಕೆ ಬಂಧಿಸಲಾಯಿತು? ಅಬುಜಾರ್‌ ರಿಕ್ಷಾಗೆ ಕಾಯುತ್ತಿದ್ದರೆ ಹೊರತು ಅವರು ಖಾಸಗಿ ಕಾರ್‌ನಲ್ಲಿ ಕುಳಿತಿರಲಿಲ್ಲ.. ಅವರು ಉದ್ದನೆಯ ಕೂದಲು ಬಿಟ್ಟಿದ್ದರು.. ಅವರು ಹೇಗೆ ಕಾಣುತ್ತಿದ್ದಾರೆ ಎಂಬ ಕಾರಣದಿಂದ ಅವರನ್ನು ಬಂಧಿಸಬಹುದೇ? ಅವರು ಯಾವುದೇ ತಪ್ಪು ಮಾಡದೇ, ಸಮರ್ಪಕ ವಿಚಾರಣೆ ನಡೆಸದೇ ಬಂಧಿಸಬಹುದೆ? ಸೈಪುಲ್ಲ ಎಂಬ ಪೊಲೀಸ್ ಅಧಿಕಾರಿ ಬೇಕಂತಲೇ ಕಿರುಕುಳ ನೀಡಿದ್ದಾರೆ. ಈ ರೀತಿ ಅಧಿಕಾರ ದುರ್ಬಳಕೆ ಮಾಡಿದ ನಂತರವೂ ಅವರಿಗೆ ಯಾವುದೇ ಶಿಕ್ಷೆ ಇಲ್ಲ ಏಕೆ? ಎಂದು ಅವರ ಗೆಳತಿ ನತಾಶಾ ಜಾವೇದ್ ಪ್ರಶ್ನಿಸಿದ್ದಾರೆ.

ನತಾಶಾರವರ ಪೋಸ್ಟ್ ಟ್ವಿಟರ್‌ನಲ್ಲಿ ವೈರಲ್ ಆಗಿದ್ದು, ತದನಂತರ ಬಹುತೇಕರು ಪಾಕ್ ಪೊಲೀಸ್ ದೌರ್ಜನ್ಯವನ್ನು ತೀವ್ರ ಪದಗಳಲ್ಲಿ ಟೀಕಿಸಿದ್ದಾರೆ. ಈ ದೇಶದಲ್ಲಿ ಕೂದಲು ಬೆಳೆಸುವುದು ಅಪರಾಧವೇ ಎಂದು ಹಲವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...