Homeಅಂತರಾಷ್ಟ್ರೀಯಕೊರೊನಾ ವಿರುದ್ದದ ಹೋರಾಟದಲ್ಲಿ ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ ಪಾಕ್ ಪ್ರಧಾನಿ!

ಕೊರೊನಾ ವಿರುದ್ದದ ಹೋರಾಟದಲ್ಲಿ ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ ಪಾಕ್ ಪ್ರಧಾನಿ!

ಕೊರೊನಾ ಎರಡನೇ ಅಲೆಯ ವಿರುದ್ಧ ಹೋರಾಡಲು ಭಾರತಕ್ಕೆ ತನ್ನ ಸಹಾಯವನ್ನು ನೀಡುವುದಾಗಿ ಪಾಕಿಸ್ತಾನದ ‘ಈದಿ ವೆಲ್ಫೇರ್ ಟ್ರಸ್ಟ್’ ಪ್ರಧಾನಿ ಮೋದಿಗೆ ಪತ್ರ ಬರೆದಿದೆ.

- Advertisement -
- Advertisement -

ಕೊರೊನಾದ ಎರಡನೆ ಅಲೆ ಎದುರಿಸುತ್ತಿರುವ ಭಾರತಕ್ಕೆ ತಮ್ಮ ರಾಷ್ಟ್ರದ ಬೆಂಬಲ ವ್ಯಕ್ತಪಡಿಸಿರುವ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್‌, ಸೋಂಕಿನಿಂದ ಬಳಲುತ್ತಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶನಿವಾರ ಹಾರೈಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಇಮ್ರಾನ್ ಖಾನ್, “ಕೊರೊನಾದ ಅಪಾಯಕಾರಿ ಅಲೆಯೊಂದಿಗೆ ಹೋರಾಡುತ್ತಿರುವ ಭಾರತದ ಜನರೊಂದಿಗೆ ನಾವಿದ್ದೇವೆ ಎಂದು ಹೇಳಲು ನಾನು ಬಯಸುತ್ತೇನೆ. ನೆರೆಹೊರೆಯ ಹಾಗೂ ವಿಶ್ವದಾದ್ಯಂತ ಸೋಂಕಿನಿಂದ ಬಳಲುತ್ತಿರುವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಮ್ಮ ಪ್ರಾರ್ಥನೆ. ನಾವು ಈ ಜಾಗತಿಕ ಸವಾಲನ್ನು ಒಗ್ಗಟ್ಟಾಗಿ ಮಾನವೀಯತೆಯಿಂದ ಎದುರಿಸಬೇಕಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ಕೊರೊನಾ ಎರಡನೇ ಅಲೆಯ ವಿರುದ್ಧ ಹೋರಾಡಲು ಭಾರತಕ್ಕೆ ತನ್ನ ಸಹಾಯವನ್ನು ನೀಡುವುದಾಗಿ ಪಾಕಿಸ್ತಾನದ ‘ಈದಿ ವೆಲ್ಫೇರ್ ಟ್ರಸ್ಟ್’ ಎಂಬ ಲೋಕೋಪಕಾರಿ ಸಂಸ್ಥೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ರಾಷ್ಟ್ರಕ್ಕೆ ಸಹಾಯ ಮಾಡಲು 50 ಆಂಬುಲೆನ್ಸ್‌ಗಳು ಮತ್ತು ಸಹಾಯಕ ಸಿಬ್ಬಂದಿಯನ್ನು ಕಳುಹಿಸುವುದಾಗಿ ಸಂಸ್ಥೆ ತಿಳಿಸಿದೆ.

 

ಪಾಕಿಸ್ತಾನ ಕೂಡಾ ಕೊರೊನಾ ಪ್ರಕರಣಗಳ ಉಲ್ಬಣವನ್ನು ಎದುರಿಸುತ್ತಿದೆ, ಹಲವಾರು ನಗರಗಳಲ್ಲಿ ಕೊರೊನಾ ಹೆಚ್ಚುತ್ತಿರುವುದು ವರದಿಯಾಗಿದೆ. ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ರಚಿಸಲಾದ ಪಾಕಿಸ್ತಾನದ ಅತ್ಯುನ್ನತ ಸರ್ಕಾರಿ ಸಂಸ್ಥೆಯಾದ ರಾಷ್ಟ್ರೀಯ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಪ್ರಧಾನಿ ಇಮ್ರಾನ್‌ ಖಾನ್‌, ದೇಶದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಜಾರಿಗೆ ತರಲು ಪೊಲೀಸರಿಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾರೆ.

ಪಾಕಿಸ್ತಾನದಲ್ಲಿ ಸಾಂಕ್ರಾಮಿಕ ರೋಗವು ಪ್ರಾರಂಭವಾದಾಗಿನಿಂದ ಅತಿ ಹೆಚ್ಚು ದೈನಂದಿನ ಸಾವು ಶನಿವಾರ ವರದಿಯಾಗಿದೆ. ಒಂದೇ ದಿನದಲ್ಲಿ 157 ಸಾವುಗಳಾಗಿದ್ದು, ಸಾವಿನ ಸಂಖ್ಯೆ 16,999 ಕ್ಕೆ ತಲುಪಿದೆ. ಪಾಕಿಸ್ತಾನದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯು 790,016 ಕ್ಕೆ ತಲುಪಿದೆ.

ಇದನ್ನೂ ಓದಿ: ತಿಂಗಳಾಂತ್ಯದಲ್ಲಿ ಉತ್ತರಪ್ರದೇಶ ಹೆಚ್ಚು ಕೋವಿಡ್ ಪೀಡಿತ ರಾಜ್ಯ ಆಗಬಹುದು: ನೀತಿ ಆಯೋಗ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...