Homeಅಂತರಾಷ್ಟ್ರೀಯಧ್ವಂಸಗೊಂಡ ದೇವಾಲಯವನ್ನು ಎರಡು ವಾರಗಳಲ್ಲಿ ಪುನಃಸ್ಥಾಪಿಸಿಯೆಂದ ಪಾಕಿಸ್ತಾನ ಸುಪ್ರೀಂ ಕೋರ್ಟ್

ಧ್ವಂಸಗೊಂಡ ದೇವಾಲಯವನ್ನು ಎರಡು ವಾರಗಳಲ್ಲಿ ಪುನಃಸ್ಥಾಪಿಸಿಯೆಂದ ಪಾಕಿಸ್ತಾನ ಸುಪ್ರೀಂ ಕೋರ್ಟ್

- Advertisement -

ಪಾಕಿಸ್ತಾನದ ಖೈಬರ್ ಪಾಖ್ತುನ್‌‌‌ಖ್ವಾ ಪ್ರಾಂತ್ಯದಲ್ಲಿ ಧ್ವಂಸಗೊಳಿಸಿರುವ ಹಿಂದೂ ದೇವಾಲಯವನ್ನು ಎರಡು ವಾರಗಳ ಅವಧಿಯಲ್ಲಿ ಪುನಃಸ್ಥಾಪಿಸುವಂತೆ ಪಾಕಿಸ್ತಾನದ ಸುಪ್ರೀಂಕೋರ್ಟ್ ಪ್ರಾಂತೀಯ ಸರ್ಕಾರಕ್ಕೆ ಮಂಗಳವಾರ ಆದೇಶಿಸಿದೆ.

ಡಿಸೆಂಬರ್‌ 30 ರಂದು ದೇವಾಲಯವನ್ನು ಮೂಲಭೂತವಾದಿ ಪಕ್ಷದ ಸದಸ್ಯರ ನೇತೃತ್ವದಲ್ಲಿ ಗುಂಪೊಂದು ಧ್ವಂಸಗೊಳಿಸಿ, ಬೆಂಕಿ ಹಚ್ಚಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಪಾಕಿಸ್ತಾನ ಪೊಲೀಸರು 350 ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್‌ ದಾಖಲಿಸಿದ್ದು ಹಲವಾರು ಜನರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ- ಬಂಧಿತರ ಸಂಖ್ಯೆ 55 ಕ್ಕೆ ಏರಿಕೆ

ಈ ಹಿಂದೆ, ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ದಾಳಿಯ ಬಗ್ಗೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ, ಪ್ರಕರಣದ ವಿಚಾರಣೆಯನ್ನು ಜನವರಿ 5 ರಂದು ನಡೆಸುವುದಾಗಿ ಹೇಳಿದ್ದರು. ಆದರೆ ಕಳೆದ ವಾರ ಕರಾಚಿಯಲ್ಲಿ ನಡೆದ ಸಭೆಯಲ್ಲಿ ಅಲ್ಪಸಂಖ್ಯಾತ ಶಾಸಕ ರಮೇಶ್ ಕುಮಾರ್ ಅವರು ದೇವಾಲಯವನ್ನು ಧ್ವಂಸಗೊಳಿಸಿರುವ ಬಗ್ಗೆ ವಿವರಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಈ ಆದೇಶ ನೀಡಿದ್ದಾರೆ.

ಖೈಬರ್ ಪಾಖ್ತುನ್‌‌‌ಖ್ವಾ ಸರ್ಕಾರ ಮತ್ತು ಔಕಾಫ್ ಇಲಾಖೆಗೆ ಕಾಮಗಾರಿ ತಕ್ಷಣವೇ ಪ್ರಾರಂಭಿಸಿ, ಎರಡು ವಾರಗಳಲ್ಲಿ ಕಾಮಗಾರಿಯ ವರದಿಯನ್ನು ಸಲ್ಲಿಸುವಂತೆ ನಿರ್ದೇಶಿಸಲಾಗಿದೆ. ದೇವಾಲಯವನ್ನು ಧ್ವಂಸಗೊಳಿಸಿದ ಜನರೇ ಅದರ ಪುನಃಸ್ಥಾಪನೆಯ ಖರ್ಚನ್ನು ಪಾವತಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಪಾಕಿಸ್ತಾನದ ದೇವಾಲಯಗಳ ಸಂಖ್ಯೆ, ಔಕಾಫ್ ಇಲಾಖೆಗೆ ಸೇರಿದ ಜಮೀನು ಅತಿಕ್ರಮಣ, ಮತ್ತು ಭೂ ಕಬಳಿಕೆ ವಿರುದ್ಧ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆಯೂ ನ್ಯಾಯಾಲಯ ವರದಿ ಕೇಳಿದೆ. ಪಾಕಿಸ್ತಾನದ ಎಲ್ಲಾ ದೇವಾಲಯಗಳು ಔಕಾಫ್ ಇಲಾಖೆಯ ವ್ಯಾಪ್ತಿಗೆ ಬರುತ್ತವೆ.

ಇದನ್ನೂ ಓದಿ: ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕರ್ನಾಟಕ ಕೊರೊನಾ: 24 ಗಂಟೆಯಲ್ಲಿ 67 ಸಾವಿರ ಡಿಸ್ಚಾರ್ಜ್, 38 ಸಾವಿರ ಹೊಸ ಪ್ರಕರಣ

0
ಕೊರೊನಾ ಮೂರನೇ ಅಲೆಯಲ್ಲಿ ರಾಜ್ಯದಲ್ಲಿ ಪ್ರಕರಣಗಳು ದಿಢೀರ್‌ ಹೆಚ್ಚಾಗಿದ್ದವು. ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಕೇಸಸ್ ಪತ್ತೆಯಾಗಿದ್ದವು. ಆದರೆ, ಕಳೆದ 24 ಗಂಟೆಯಲ್ಲಿ 67 ಸಾವಿರ ಕೊರೊನಾ ಸೋಂಕಿತರು ಚೇತರಿಕೆ ಕಂಡು, ಡಿಸ್ಚಾರ್ಜ್ ಆಗಿದ್ದಾರೆ....
Wordpress Social Share Plugin powered by Ultimatelysocial