Homeಕರ್ನಾಟಕಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ...

ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

- Advertisement -
- Advertisement -

ಬೆಂಗಳೂರಿನ ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳನ್ನು ಅಗಲೀಕರಣಗೊಳಿಸಲು ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆ 39 ಗುಂಟೆ ಭೂಮಿಗೆ 3,400 ಕೋಟಿ ರೂಪಾಯಿ ಮೌಲ್ಯದ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರಗಳನ್ನು ಮೈಸೂರು ರಾಜಮನೆತನದ ಕಾನೂನುಬದ್ಧ ವಾರಿಸುದಾರರಿಗೆ ನೀಡುವಂತೆ ಸುಪ್ರೀಂ ಕೋರ್ಟ್ ಗುರುವಾರ (ಮೇ 22, 2025) ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರ ಪೀಠ ತೀರ್ಪು ಪ್ರಕಟಿಸಿದೆ. ರಾಜ್ಯ ಸರ್ಕಾರದ ಎಲ್ಲ ವಾದಗಳನ್ನು ತಿರಸ್ಕರಿಸಿದ ಪೀಠ, ಕರ್ನಾಟಕ ಸ್ಟ್ಯಾಂಪ್‌ ಕಾಯ್ದೆ ಹಾಗೂ ಹಿಂದಿನ ತೀರ್ಪುಗಳ ಅಡಿಯಲ್ಲಿ ಕಾನೂನು ಬಾಧ್ಯತೆಗಳನ್ನು ಗೌರವಿಸಬೇಕು ಎಂದು ಸೂಚಿಸಿದೆ.

ತೀರ್ಪು ಬರೆದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು “ಸರ್ಕಾರ ಈಗಾಗಲೇ ಠೇವಣಿ ಇಟ್ಟಿರುವ ಟಿಡಿಆರ್‌ಗಳು/ಡಿಆರ್‌ಸಿಗಳನ್ನು ಆಯಾ ಅರ್ಜಿದಾರರು ಅಥವಾ ಅವರ ಅಧಿಕೃತ ಪ್ರತಿನಿಧಿಗೆ ಅಫಿಡವಿಟ್‌ ಆಧಾರದಲ್ಲಿ ತಕ್ಷಣವೇ ಹಸ್ತಾಂತರಿಸಲು ರಿಜಿಸ್ಟ್ರಿಗೆ ಆದೇಶಿಸಲಾಗಿದೆ” ಎಂದು ಎಂದು ತಿಳಿಸಿದ್ದಾರೆ.

ಬೆಂಗಳೂರು ಅರಮನೆ (ಭೂಮಿ ಬಳಕೆ ಮತ್ತು ನಿಯಂತ್ರಣ) ಸುಗ್ರೀವಾಜ್ಞೆ-2025 ಅನ್ನು ಉಲ್ಲೇಖಿಸಿದ ನ್ಯಾಯಾಲಯ “ಸುಗ್ರಿವಾಜ್ಞೆ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಥವಾ ಸ್ವಾಧೀನಪಡಿಸಿಕೊಳ್ಳದಿರುವ ಹಕ್ಕನ್ನು ತನ್ನಲ್ಲೇ ಉಳಿಸಿಕೊಂಡಿದೆ. ಅಲ್ಲದೆ, 3,400 ಕೋಟಿ ರೂಪಾಯಿ ಟಿಡಿಆರ್‌ ಪಾವತಿಸುವ ಬದಲು ರಸ್ತೆ ಅಗಲೀಕರಣ ಯೋಜನೆಯನ್ನೇ ಕೈಬಿಡುವ ಸೂಚನೆ ನೀಡುತ್ತಿದೆ” ಎಂದು ಹೇಳಿದೆ.

ಕರ್ನಾಟಕ ಸ್ಟ್ಯಾಂಪ್‌ ಕಾಯ್ದೆಯ ಸೆಕ್ಷನ್‌ 45 ಬಿ ಗೆ ಅನುಗುಣವಾಗಿ ಅರಮನೆ ಮೈದಾನಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕೆ ಅನುಗುಣವಾಗಿ ರಸ್ತೆ ವಿಸ್ತರಣೆ ಉದ್ದೇಶಕ್ಕಾಗಿ ಅರಮನೆ ಜಾಗವನ್ನು ಮೌಲ್ಯೀಕರಿಸಿ, ವರ್ಗಾವಣೆ ಮಾಡಬಹುದಾದ ಟಿಡಿಆರ್‌ ನೀಡುವಂತೆ ಕಳೆದ ವರ್ಷದ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

ಆ ಬಳಿಕ ಸಣ್ಣ ಜಾಗಕ್ಕೆ ದೊಡ್ಡ ಮೊತ್ತ ಪಾವತಿಸುವುದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಸುಗ್ರಿವಾಜ್ಞೆ ಹೊರಡಿಸಿತ್ತು. ನಂತರ ಸುಗ್ರೀವಾಜ್ಞೆ ರೂಪದಲ್ಲಿದ್ದ ಮಸೂದೆಗೆ ಕೆಲ ಸಣ್ಣ ತಿದ್ದುಪಡಿಗಳನ್ನು ತಂದು ವಿಧಾನಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದಿತ್ತು.

ಅಲ್ಲದೆ, ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಕಾಯ್ದೆ–1996ಕ್ಕೆ ಸಂಬಂಧಪಟ್ಟ ಸಿವಿಲ್‌ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಆ ಬಳಿಕ, 3,400 ಕೋಟಿ ರೂಪಾಯಿ ಟಿಡಿಆರ್ ಅನ್ನು ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಠೇವಣಿ ಇಟ್ಟಿತ್ತು. ಈ ಟಿಡಿಆರ್‌ಗಳನ್ನು ರಾಜವಂಶಸ್ಥರಿಗೆ ಹಸ್ತಾಂತರ ಮಾಡಬಾರದು ಎಂದು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಪೀಠವು ಮೇ 1ರಂದು ತೀರ್ಪು ಕಾಯ್ದಿರಿಸಿತ್ತು.

ಚಿನ್ನ ಕಳ್ಳಸಾಗಣೆ ಪ್ರಕರಣ | ಇಡಿ ಜೊತೆ ಸಹಕರಿಸುತ್ತೇವೆ ಎಂದ ಗೃಹ ಸಚಿವ ಜಿ ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...