ಸ್ವಘೋಷಿತ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಅವರ ಉದ್ಯಮ ಪಾಲುದಾರ ಆಚಾರ್ಯ ಬಾಲಕೃಷ್ಣ ವಿರುದ್ದ ಕೇರಳದ ಪಾಲಕ್ಕಾಡ್‌ನ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಬಂಧನ ವಾರೆಂಟ್ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.
ಔಷಧ ಪ್ರಚಾರಕ್ಕಾಗಿ ತಪ್ಪು ದಾರಿಗೆಳೆಯುವ ಜಾಹೀರಾತು ನೀಡಲಾಗಿದೆ ಎಂದು ಆರೋಪಿಸಿ ಕೇರಳದ ಔಷಧ ನಿಯಂತ್ರಣ ಇಲಾಖೆ ದಾಖಲಿಸಿದ ಪ್ರಕರಣದಲ್ಲಿ ಇಬ್ಬರ ವಿರುದ್ದವೂ ಜಾಮೀನು ನೀಡಬಹುದಾದ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಹರಿದ್ವಾರ ಮೂಲದ ಆಯುರ್ವೇದ ಔಷಧ ತಯಾರಿಕಾ ಕಂಪನಿ ಪತಂಜಲಿ ಆಯುರ್ವೇದದ ಮುಖ್ಯಸ್ಥರಾಗಿರುವ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ದ ಭಾರತ ವಿವಿಧ ರಾಜ್ಯಗಳಲ್ಲಿ ಇದೇ ರೀತಿಯ ಪ್ರಕರಣಗಳಿವೆ. ಆದರೆ, ಮೊದಲ ಬಾರಿಗೆ ಬಂಧನ ವಾರೆಂಟ್ ಹೊರಡಿಸಲಾಗಿದೆ.
ಪ್ರಕರಣದ ಇಬ್ಬರೂ ಆರೋಪಿಗಳು ಹಲವು ಬಾರಿ ಸಮನ್ಸ್ ನೀಡಿದರೂ ಪ್ರತಿಕ್ರಿಯಿಸದ ಕಾರಣ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ವರದಿಗಳು ಹೇಳಿವೆ.
ಪತಂಜಲಿ ಉತ್ಪನ್ನಗಳು ಅಧಿಕ ರಕ್ತದೊತ್ತಡ ಮತ್ತು ಮಧುಮೇಹವನ್ನು ಗುಣಪಡಿಸುತ್ತದೆ ಎಂದು ತಮ್ಮ ದಿವ್ಯಾ ಫಾರ್ಮಸಿ ಮೂಲಕ ಸುದ್ದಿ ಮಾಧ್ಯಮಗಳಲ್ಲಿ ತಪ್ಪುದಾರಿಗೆಳೆಯುವ ಜಾಹೀರಾತು ನೀಡಿರುವ ಆರೋಪ ರಾಮ್‌ದೇವ್ ಮತ್ತು ಬಾಲಕೃಷ್ಣ ಮೇಲಿದೆ.
ಅಕ್ಟೋಬರ್ 2024ರಲ್ಲಿ ಈ ಸಂಬಂಧ ಕೇರಳದ ಪಾಲಕ್ಕಾಡ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಜನವರಿ 16, 2025ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಇಬ್ಬರಿಗೂ ಸಮನ್ಸ್ ನೀಡಲಾಗಿತ್ತು. ಆದರೆ, ಅವರು ಗೈರಾಗಿದ್ದರು. ಈ ಹಿನ್ನೆಲೆ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ ಎಂದು ವರದಿಯಾಗಿದೆ.
ವಾಲ್ಮೀಕಿ ಅರ್ಚಕರನ್ನು ಗೌರವಧನದಿಂದ ಹೊರಗಿಟ್ಟ ಕೇಜ್ರಿವಾಲ್ ದಲಿತ ವಿರೋಧಿ: ಕಾಂಗ್ರೆಸ್‌ನ ಉದಿತ್ ರಾಜ್


