Homeಕರ್ನಾಟಕಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ | ಎಫ್‌ಐಆರ್‌ ದಾಖಲಿಸಿದ ಮಂಗಳೂರು ಪೊಲೀಸ್!

ಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ | ಎಫ್‌ಐಆರ್‌ ದಾಖಲಿಸಿದ ಮಂಗಳೂರು ಪೊಲೀಸ್!

- Advertisement -
- Advertisement -

ಮಂಗಳೂರಿನಲ್ಲಿ ಇತ್ತೀಚೆಗೆ ಪ್ಯಾಲೆಸ್ತೀನ್ ಪರ ಶಾಂತಿಯುತ ಪ್ರತಿಭಟನೆ ನಡೆಸಿದ ಎಡಪಕ್ಷಗಳು ಮತ್ತು ಸಮಾನ ಮನಸ್ಕ ಸಂಘಟನೆಯ ವಿರುದ್ಧ ಮಂಗಳೂರು ನಗರ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಪ್ರವೀಣ್ ಕೆ.  14 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್‌ 4ರ ಸೋಮವಾರ ಪ್ಯಾಲೆಸ್ತೀನ್ ಮೇಲಿನ ದಾಳಿ ವಿರೋಧಿಸಿ ಮತ್ತು ಕದನ ವಿರಾಮಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ಎಡಪಕ್ಷಗಳ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಒಂದು ವಾರಕ್ಕೆ ಮುಂಚಿತವಾಗಿಯೆ ಪ್ರತಿಭಟನೆಯ ಮಾಹಿತಿ ನೀಡಿ, ಧ್ವನಿವರ್ಧಕ ಬಳಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿದ್ದರೂ, ಕಾನೂನು ಸುವ್ಯವಸ್ಥೆ ನೆಪವೊಡ್ಡಿ ಡಿಸಿಪಿ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಸಿಪಿಐಎಂ ಕಚೇರಿಗೆ ನೋಟಿಸ್ ಜಾರಿಗೊಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ, ಪ್ರತಿಭಟನೆ ರದ್ದುಗೊಳಿಸಲು ನಿರಾಕರಿಸಿದ್ದ ಎಡಪಕ್ಷಗಳ ನಾಯಕರು, ಧ್ವನಿ ವರ್ಧಕ ಬಳಸದೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದರು. ಅದಾಗ್ಯೂ, ‘ಅದಕ್ಕೂ ಅವಕಾಶ ಇಲ್ಲ, ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಪೊಲೀಸ್ ಅಧಿಕಾರಿಗಳು ಎಚ್ಚರಿಸಿದ್ದರು. ಪೊಲೀಸರ ಈ ಎಚ್ಚರಿಕೆಗೆ ಮಣಿಯದ ಎಡಪಕ್ಷಗಳು ಪ್ರತಿಭಟನಾ ಸಭೆಯನ್ನು ತೀರ್ಮಾನದಂತೆ ನಡೆಸಿದ್ದರು.

ಅಷ್ಟೆ ಅಲ್ಲದೆ, ಪೊಲೀಸ್ ಇಲಾಖೆಯ ಈ ನಡೆಯನ್ನು, ಪ್ಯಾಲೆಸ್ತೀನ್ ನಾಗರಿಕರ ಮೇಲಿನ ಬರ್ಬರ ದಾಳಿಯ ವಿರುದ್ಧ ಪ್ರತಿಭಟಿಸುವ ಹಕ್ಕನ್ನು ನಿರಾಕರಿಸುವ ನಿಲುವನ್ನು ಪ್ರತಿಭಟನಾ ಸಭೆಯಲ್ಲಿ ಬಲವಾಗಿ ಖಂಡಿಸಿಸಲಾಗಿತ್ತು. ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಪ್ರವೀಣ್ ಕೆ. 14 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

“ಅಕ್ರಮಕೂಟ ಕಟ್ಟಿಕೊಂಡು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದ್ದು, 11 ಮಂದಿಯ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಎಲ್ಲರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಅವರು ಉಲ್ಲೇಖಿಸಿದ್ದಾರೆ. ಎಫ್‌ಐಆರ್‌ನಲ್ಲಿ ಎಡಪಕ್ಷಗಳ ನಾಯಕರಾದ ನಾಗೇಶ್ ಕೋಟ್ಯಾನ್, ವಸಂತ ಆಚಾರಿ, ಯಾಧವ ಶೆಟ್ಟಿ, ಸಂತೋಷ್ ಬಜಾಲ್, ಸುಕುಮಾರ್ ರಾವ್, ಇಮ್ತಿಯಾಜ್, ಮುನೀರ್ ಕಾಟಿಪಳ್ಳ, ಸುನಿಲ್ ಕುಮಾರ್ ಬಜಾಲ್, ಯೋಗೀಶ್ ಜಪ್ಪಿನಮೊಗರು, ಹಯವದನ ರಾವ್, ಸೀತಾರಾಮ ಬೆರಿಂಜ ಹಾಗೂ ಇತರರ ಹೆಸರನ್ನು ಉಲ್ಲೇಖಿಸಲಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಪಿಐ(ಎಂ) ನಾಯಕರು, “ಒಂದು ಕಡೆ ಕಾಂಗ್ರೆಸ್ ಪಕ್ಷವು ಇಸ್ರೇಲ್ ನಡೆಯನ್ನು ಖಂಡಿಸಿ, ಹೇಳಿಕೆ ನೀಡುತ್ತಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಪ್ಯಾಲೆಸ್ತೀನ್ ಪರವಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೆ ಎಫ್‌ಐಆರ್ ದಾಖಲಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆಯೋ ಅಥವಾ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆಯೋ ಎಂಬ ಅನುಮಾನ ಕಾಡುತ್ತಿದೆ” ಎಂದು ಹೇಳಿದ್ದಾರೆ. ಮಂಗಳೂರು ಪೊಲೀಸರು ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲವೇ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಚೋದನಕಾರಿ ಭಾಷಣ: ನಟ-ರಾಜಕಾರಣಿ ಮಿಥುನ್ ಚಕ್ರವರ್ತಿ ವಿರುದ್ಧ ಪೊಲೀಸ್ ಕೇಸ್

ಪ್ರಚೋದನಕಾರಿ ಭಾಷಣ: ನಟ-ರಾಜಕಾರಣಿ ಮಿಥುನ್ ಚಕ್ರವರ್ತಿ ವಿರುದ್ಧ ಪೊಲೀಸ್ ಕೇಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...