Homeಅಂತರಾಷ್ಟ್ರೀಯಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : 'ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

- Advertisement -
- Advertisement -

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು ‘ಐತಿಹಾಸಿಕ ಕ್ಷಣ’ ಎಂದು ಬಣ್ಣಿಸಿದ್ದಾರೆ.

ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಯುಕೆಯ ಪ್ಯಾಲೆಸ್ತೀನ್ ರಾಯಭಾರಿ ಹುಸಾಮ್ ಝೊಮ್ಲೋಟ್, “ರಾಯಭಾರ ಕಚೇರಿಯ ಸ್ಥಾಪನೆಯು ‘ಬ್ರಿಟಿಷ್-ಪ್ಯಾಲೆಸ್ತೀನ್’ ಸಂಬಂಧಗಳಲ್ಲಿ ಒಂದು ದೊಡ್ಡ ಮೈಲಿಗಲ್ಲು” ಎಂದಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್ ಆಕ್ರಮಣವನ್ನು ತೀವ್ರವಾಗಿ ಖಂಡಿಸಿದ್ದ ಯುಕೆ, ಕಳೆದ ಸೆಪ್ಟೆಂಬರ್‌ನಲ್ಲಿ ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಕ ಸ್ವತಂತ್ರ ರಾಷ್ಟ್ರ ಎಂದು ಗುರುತಿಸಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ರಾಯಭಾರ ಕಚೇರಿ ತೆರೆಯಲಾಗಿದೆ.

“ಯುಕೆಯಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿಯ ಉದ್ಘಾಟನೆಯ ಒಂದು ಐತಿಹಾಸಿಕ ಕ್ಷಣದಲ್ಲಿ ನಾವೆಲ್ಲ ಒಟ್ಟುಗೂಡಿದ್ದೇವೆ. ಇದು ಪೂರ್ಣ ರಾಜತಾಂತ್ರಿಕ ಸ್ಥಾನಮಾನ ಮತ್ತು ಸವಲತ್ತುಗಳೊಂದಿಗೆ, ನಮ್ಮ ಜನರ ಸಾರ್ವಭೌಮ ರಾಜ್ಯತ್ವ ಮತ್ತು ರಾಷ್ಟ್ರಗಳ ನಡುವೆ ಸಮಾನತೆಯ ಅವಿಭಾಜ್ಯ ಹಕ್ಕಿನ ಸಂಕೇತವಾಗಿದೆ” ಎಂದು ಝೊಮ್ಲೋಟ್ ಹೇಳಿದ್ದಾರೆ.

“ಗಾಝಾ, ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಪಶ್ಚಿಮ ದಂಡೆ, ನಿರಾಶ್ರಿತರ ಶಿಬಿರಗಳು ಮತ್ತು ವಲಸೆಗಾರರಾದ್ಯಂತ ಪ್ಯಾಲೆಸ್ತೀನಿಯರ ತಲೆಮಾರುಗಳಿಗೆ ಈ ರಾಯಭಾರ ಕಚೇರಿ ನಮ್ಮ ಗುರುತನ್ನು ನಿರಾಕರಿಸಲಾಗುವುದಿಲ್ಲ, ನಮ್ಮ ಉಪಸ್ಥಿತಿಯನ್ನು ಅಳಿಸಲಾಗುವುದಿಲ್ಲ ಮತ್ತು ನಮ್ಮ ಜೀವನವನ್ನು ಅಪಮೌಲ್ಯಗೊಳಿಸಲು ಸಾಧ್ಯವಿಲ್ಲ ಎಂಬುವುದಕ್ಕೆ ಪುರಾವೆಯಾಗಿದೆ” ಎಂದಿದ್ದಾರೆ.

“ಒಂದು ಶತಮಾನಕ್ಕೂ ಹೆಚ್ಚು ಕಾಲ ಸ್ವಯಂ ನಿರ್ಣಯವನ್ನು ನಿರಾಕರಿಸಿದ ಜನರಿಗೆ, ಇದು ಒಂದು ಸ್ಮರಣೀಯ ಕ್ಷಣ” ಎಂದು ಹೇಳಿದ್ದಾರೆ.

ಅಂದರೆ, ಪ್ಯಾಲೆಸ್ತೀನಿಯರು ಒಂದು ಶತಮಾನಕ್ಕೂ ಹೆಚ್ಚು ಕಾಲ (1917ರ ಬಾಲ್ಫೋರ್ ಘೋಷಣೆಯಿಂದ ಆರಂಭವಾಗಿ, ಇಸ್ರೇಲ್ ಸ್ಥಾಪನೆ, ಆಕ್ರಮಿತ ಪ್ರದೇಶಗಳು ಇತ್ಯಾದಿ ಮೂಲಕ) ತಮ್ಮ ಸ್ವಯಂ ನಿರ್ಣಯದ ಹಕ್ಕನ್ನು (ತಮ್ಮ ಭವಿಷ್ಯವನ್ನು ತಾವೇ ನಿರ್ಧರಿಸುವ ಹಕ್ಕು) ನಿರಾಕರಿಸಲ್ಪಟ್ಟಿದ್ದಾರೆ. ಹಾಗಾಗಿ, ಅವರಿಗೆಇದು ಒಂದು ಸ್ಮರಣೀಯ ಕ್ಷಣ ಎಂದು ತಿಳಿಸಿದ್ದಾರೆ.

ಯುಕೆ ಎಲ್ಲಾ ಕಾನೂನು ಹಕ್ಕುಗಳು ಮತ್ತು ಬಾಧ್ಯತೆಗಳನ್ನು ನೀಡಿ ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಕ ಸ್ವತಂತ್ರ ರಾಷ್ಟ್ರವೆಂದು ಒಪ್ಪಿಕೊಂಡಿದೆ.

ಹೊಸ ರಾಯಭಾರ ಕಚೇರಿಯ ಫಲಕವನ್ನು ಅನಾವರಣಗೊಳಿಸಿದ ನಂತರ, ರಾಜತಾಂತ್ರಿಕ ದಳದ ಮಾರ್ಷಲ್ ಅಲಿಸ್ಟೈರ್ ಹ್ಯಾರಿಸನ್, ಝಮ್ಲೋಟ್ ಅವರ ಹೇಳಿಕೆಗಳಿಗೆ ದನಿಗೂಡಿಸಿದ್ದು, ರಾಯಭಾರ ಕಚೇರಿಯ ಉದ್ಘಾಟನೆಯು ‘ಪ್ಯಾಲೆಸ್ತೀನ್‌ಗೆ ಐತಿಹಾಸಿಕ ಕ್ಷಣ’ ಎಂದು ಹೇಳಿದ್ದಾರೆ.

“ನಮ್ಮ ಎರಡೂ ದೇಶಗಳ ನಡುವಿನ ಸಂಬಂಧದಲ್ಲಿ ಇದು ಬಹಳ ಮುಖ್ಯವಾದ ಕ್ಷಣ. ಇದು ನಮ್ಮ ದ್ವಿಪಕ್ಷೀಯ ಸಂಬಂಧದಲ್ಲಿ ಒಂದು ಹೆಜ್ಜೆ ಬದಲಾವಣೆಯ ಆರಂಭ” ಎಂದಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಗಾಝಾದ 14 ವರ್ಷದ ಪ್ಯಾಲೆಸ್ತೀನಿಯನ್ ಬಾಲಕ ಉಬೈದಾ ಮಾತನಾಡಿ “ನಾನು ನರಮೇಧದಿಂದ ಬದುಕುಳಿದೆ, ಆದರೆ ನನ್ನ ದೇಹವು ಆಳವಾದ ಗಾಯಗಳನ್ನು ಹೊಂದಿದೆ” ಎಂದು ಹೇಳಿದ್ದಾರೆ.

ತನ್ನ ಕುಟುಂಬದ ಒಂದು ಭಾಗ ಯುಕೆಯಲ್ಲಿದೆ ಎಂದು ಉಬೈದಾ ತಿಳಿಸಿದ್ದು, ಆದರೆ ಅವರ ತಂದೆ ಇನ್ನೂ ಗಾಝಾದಲ್ಲಿದ್ದಾರೆ, ಅಲ್ಲಿ ‘ಜೀವನವು ಇನ್ನೂ ಭಯದಿಂದ ತುಂಬಿದೆ’ ಎಂದು ಹೇಳಿದ್ದಾರೆ.

“ಒಂದು ದಿನ ನಾನು ರಾಯಭಾರಿಯಾಗಬೇಕೆಂದು ಆಶಿಸುತ್ತೇನೆ, ಯುಕೆ ರಾಯಭಾರಿಯದಾರೂ.. ಈ ಮೂಲಕ ನಾನು ನನ್ನ ಜನರಿಗೆ ಸಹಾಯ ಮಾಡಲು ಮತ್ತು ನಮ್ಮ ಧ್ವನಿಯನ್ನು ಪ್ರಪಂಚದಾದ್ಯಂತ ಕೇಳುವಂತೆ ಮಾಡಲು ಕೆಲಸ ಮಾಡಬಹುದು” ಎಂದು ಉಬೈದಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...