Homeಮುಖಪುಟಪಾಲ್ಘರ್‌ ಗುಂಪು ಹತ್ಯೆ: 89 ಆರೋಪಿಗಳಿಗೆ ಜಾಮೀನು ನೀಡಿದ ನ್ಯಾಯಾಲಯ

ಪಾಲ್ಘರ್‌ ಗುಂಪು ಹತ್ಯೆ: 89 ಆರೋಪಿಗಳಿಗೆ ಜಾಮೀನು ನೀಡಿದ ನ್ಯಾಯಾಲಯ

- Advertisement -
- Advertisement -

ಪಾಲ್ಘರ್ ಗುಂಪು ಹತ್ಯೆ ಪ್ರಕರಣದ 89 ಆರೋಪಿಗಳಿಗೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಿಶೇಷ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ. ಪ್ರಕರಣದಲ್ಲಿ ಮಕ್ಕಳ ಕಳ್ಳರೆಂದು ಶಂಕಿಸಿ ಇಬ್ಬರು ಸಾಧುಗಳು ಹಾಗೂ ಚಾಲಕ ಸೇರಿದಂತೆ ಒಟ್ಟು ಮೂವರನ್ನು ಜನರ ಗುಂಪೊಂದು ಹತ್ಯೆ ಮಾಡಿತ್ತು.

ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎಸ್.ಬಿ. ಬಹಲ್ಕರ್ ಅವರು ತಮ್ಮ ಆದೇಶದಲ್ಲಿ 89 ಆರೋಪಿಗಳಿಗೆ ಜಾಮೀನು ನೀಡಿದ್ದು, ಪ್ರಕರಣದ ವಿಚಾರಣೆಯ ಮುಂದಿನ ದಿನಾಂಕವನ್ನು ಫೆಬ್ರವರಿ 15 ಕ್ಕೆ ನಿಗದಿಪಡಿಸಿದ್ದಾರೆ.

ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

ಆರೋಪಿಗಳ ಪರವಾಗಿ ಹಾಜರಾದ ವಕೀಲರಾದ ಅಮೃತ್ ಅಧಿಕಾರಿ ಮತ್ತು ಅತುಲ್ ಪಾಟೀಲ್ ತಮ್ಮ ಕಕ್ಷಿದಾರಿಗೆ ದಾಳಿಯಲ್ಲಿ ಯಾವುದೇ ಪಾತ್ರವಿಲ್ಲ ಮತ್ತು ಪೊಲೀಸರು ಅವರನ್ನು ಕೇವಲ ಅನುಮಾನದಿಂದ ಬಂಧಿಸಿದ್ದಾರೆ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ ಮೂರು ಎಫ್‌ಐಆರ್‌ಗಳ ಸಿಂಧುತ್ವವನ್ನೂ ಆರೋಪಿಗಳು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 201 ಜನರನ್ನು ಬಂಧಿಸಲಾಗಿದ್ದು, ಈ ಪೈಕಿ 75 ಪ್ರಮುಖ ಆರೋಪಿಗಳು ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: ನನ್ನ ಮೇಲೆ ಗುಂಪು ಹಲ್ಲೆಯಾದಾಗ ನೀವೇಕೆ ಮಾತಾಡಲಿಲ್ಲ?: ಸ್ವಾಮಿ ಅಗ್ನಿವೇಶ್ ಪ್ರಶ್ನೆ

ಪ್ರಾಸಿಕ್ಯೂಷನ್ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸತೀಶ್ ಮನೇಶಿಂದೆ ಹಾಜರಾಗಿದ್ದರೆ, ವಕೀಲ ಪಿ ಎನ್ ಓಜಾ ಸಾಧುಗಳ ಕುಟುಂಬದ ಪರವಾಗಿ ಹಾಜರಾದರು.

ಏಪ್ರಿಲ್ 16, 2020 ರಂದು, ಉದ್ರಿಕ್ತ ಗುಂಪು ಇಬ್ಬರು ಸಾಧುಗಳಾದ ಮಹಾರಾಜ್ ಕಲ್ಪವ್ರಕ್ಷಗಿರಿ (70), ಸುಶಿಲ್‌ ಗಿರಿ ಮಹಾರಾಜ್ (35), ಮತ್ತು ಅವರ ಕಾರು ಚಾಲಕ ನಿಲೇಶ್ ತೆಲ್ಗಡೆ (30) ಅವರನ್ನು ಮುಂಬೈಯಿಂದ 140 ಕಿ.ಮೀ ಉತ್ತರದಲ್ಲಿರುವ ಪಾಲ್ಘರ್ ಜಿಲ್ಲೆಯ ಗದ್ಚಿಂಚಲೆಯಲ್ಲಿ ಹತ್ಯೆ ಮಾಡಲಾಗಿತ್ತು.

ಬಿಜೆಪಿ ಮತ್ತು ಬಲಪಂಥೀಯ ಚಾನೆಲ್ ಸಂಪಾದಕ ಅರ್ನಬ್ ಗೋಸ್ವಾಮಿ ಈ ಘಟನೆಯನ್ನು ಇಟ್ಟುಕೊಂಡು ಕೋಮುಗಲಭೆಗೆ ಪ್ರಚೋದನೆ ನೀಡಿದ್ದರು.

ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ವೇಳೆ ದಾಳಿ: ಗಾಂಧೀಜಿ ಭಾವಚಿತ್ರ ಹಾಗೂ ವೇದಿಕೆ ಧ್ವಂಸ, ಬಿಜೆಪಿ ಯುವ ಮೋರ್ಚಾ ಕೃತ್ಯ ಎಂದು ಸಿಪಿಐ(ಎಂ) ಆರೋಪ

ಭಾರತೀಯ ಚುನಾವಣಾ ಆಯೋಗ ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕ್ರಮಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪಶ್ಚಿಮ ಬಂಗಾಳದ ಬಿರಾಟಿಯಲ್ಲಿ...

2021 ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಕಾಲಿನ ಗಾಯದ ‘ಸುಳ್ಳು ನಾಟಕ’ ಆಡಿದ್ದರು: ಸುವೇಂದು ಅಧಿಕಾರಿ ಆರೋಪ

"2021 ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಕಾಲಿಗೆ ಗಾಯವಾಗಿದೆ ಎಂದು 'ಸುಳ್ಳು ನಾಟಕ' ಆಡಿದ್ದರು. ಅವರ ಈ ಸುಳ್ಳು ಹಕ್ಕುಗಳ ಕುರಿತು ಸರ್ಕಾರದಿಂದ ತನಿಖೆ ನಡೆಸಲಾಗುವುದು" ಎಂದು ಪಶ್ಚಿಮ...

SIR ಪ್ರಕ್ರಿಯೆಯ ಅಧಿಕೃತ ದತ್ತಾಂಶ ಬಿಡುಗಡೆ ಮಾಡಿದ ಚುನಾವಣಾ ಆಯೋಗ

ರಾಜ್ಯದಲ್ಲಿ ತೀವ್ರ ಚರ್ಚೆ, ರಾಜಕೀಯ ವಿವಾದ ಹಾಗೂ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕೃತ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ....

ಗ್ಯಾನೇಶ್ ವಿರುದ್ಧ ನಿಲ್ಲದ ಪ್ರತಿಭಟನೆ: ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಸೇರಿದಂತೆ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಎರಡನೇ ದಿನವೂ ಮುಂದುವರಿಯಿತು. ನವದೆಹಲಿ ಜಿಲ್ಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಣೆ : ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಯೂತ್ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ, ಇಂಡಿಯನ್ ಯೂತ್ ಕಾಂಗ್ರೆಸ್ (ಐವೈಸಿ) ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಐವೈಸಿ...

ಹೈದರಾಬಾದ್‌| ಪ್ರಶ್ನೆ ಕೇಳಿ, ನಿಮ್ಮ ಮತದಾನದ ಹಕ್ಕನ್ನು ಪಡೆದುಕೊಳ್ಳಿ: ನಟ ಪ್ರಕಾಶ್ ರಾಜ್ ಕರೆ

ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಬೇಕು, ಸರ್ಕಾರಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಬಹುಭಾಷಾ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಮತದಾರರಿಗೆ...

ದೆಹಲಿ: ಸಿಇಸಿ ಗ್ಯಾನೇಶ್‌ ಕುಮಾರ್ ವಿರುದ್ಧದ ಹೋರಾಟಕ್ಕೆ ಕಪಿಲ್ ಸಿಬಲ್ – ಪ್ರಶಾಂತ್ ಭೂಷಣ್ ಸೇರ್ಪಡೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಹಿರಿಯ ವಕೀಲ ಕಪಿಲ್ ಸಿಬಲ್, ವಕೀಲ ಪ್ರಶಾಂತ್ ಭೂಷಣ್, ಎಐಎಸ್‌ಎ...

ಫಾರಂ-7 ಮೂಲಕ ಆಕ್ಷೇಪ: ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ವಿಜಯೇಂದ್ರ ಒತ್ತಾಯ

ಚುನಾವಣಾ ಆಯೋಗದ ನಿಯಮಾನುಸಾರ ಫಾರಂ-7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಎಫ್‌ಐಆರ್ (FIR) ದಾಖಲಿಸಿರುವುದನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಈ ಪ್ರಕರಣಗಳನ್ನು ಕೂಡಲೇ...

ಕೇರಳ ಯುಡಿಎಫ್ ಸರ್ಕಾರದಲ್ಲಿ ಭಿನ್ನಮತದ ಹೊಗೆ: ಸಿಎಂ ಸತೀಶನ್ ಏಕಪಕ್ಷೀಯ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರ ಅಸಮಾಧಾನ

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳು ಕಳೆಯುವುದರೊಳಗೇ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷದೊಳಗೆ ಭಿನ್ನಮತ ತೀವ್ರಗೊಳ್ಳುತ್ತಿರುವ ಲಕ್ಷಣಗಳು ಗೋಚರಿಸಿವೆ. ಉನ್ನತ...

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ: ದೆಹಲಿ ಪೊಲೀಸರಿಂದ 3 ಪ್ರಕರಣ ದಾಖಲು; 1 ಸಾವಿರ ಜನ ವಶಕ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು...