Homeಕರ್ನಾಟಕಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ....?

ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಒಂದು ಸಮುದಾಯ ಅದರಲ್ಲೂ ಉಪ ಸಮುದಾಯ ಸುಲಭಕ್ಕೆ ಇಡೀಯಾಗಿ ಪಕ್ಷನಿಷ್ಠೆ ಬದಲಿಸಿವುದು ಅಪರೂಪ. ಅದರ ಎದುರು ಒಪ್ಪಿತವಾಗುವ ವಾದಗಳು ಅಥವಾ ‘ತಮ್ಮದು ಎಂಬ ಭಾವ ಮೂಡಬೇಕಷ್ಟೇ. 2ನೇ ಹಂತದ ಚುನಾವಣೆ ನಡೆಯುತ್ತಿರುವ ಉತ್ತರ ಕರ್ನಾಟಕದಲ್ಲಿ ಈ ಸಲ ಪಂಚಮಸಾಲಿಗಳು ಒಂದು ಸಮುದಾವಾಗಿ ಯಾರ ಕಡೆ ಒಲವು ಹೊಂದಿದ್ದಾರೆ ಎಂಬುದನ್ನು ಗೆರೆ ಕೊರೆದು ಹೇಳಲಾಗದು. ಆದರೆ, ಸುಮಾರು 15 ವರ್ಷಗಳ ಕಾಲ ಬಿಜೆಪಿ ಬೆಂಬಲಿಗರು ಎಂದೇ ಗುರುತಿಸಲ್ಪಟ್ಟಿದ್ದ ಪಂಸಮಸಾಲಿ ಲಿಂಗಾಯತರು ಈ ಸಲ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆಯೇ ಎಂಬ ವಾತವಾರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುತ್ತಿದೆ.

ಮುಂಬೈ ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ಹಲವು ಬೆಳವಣಿಗೆಗಳು ಇದಕ್ಕೆ ಸಾಕ್ಷಿ. ನಿನ್ನೆ ಶನಿವಾರ ಹುಬ್ಬಳ್ಳಿಯಲ್ಲಿ ಧಾರವಾಡ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಿಜೆಪಿಯ ಶಾಸಕರು ಮತ್ತು ಮಾಜಿ ಶಾಸಕರು ಪತ್ರಿಕಾಗೋಷ್ಠಿ ನಡೆಸಿ, ಲಿಂಗಾಯತರು ಎಂದಿನಂತೆ ಪ್ರಹ್ಲಾದ ಜೋಶಿಯವರಿಗೇ ಬೆಂಬಲಿಸಬೇಕು…. ಈ ಹಿಂದೆ ಸಮಾಜ ಒಡೆಯಲು ಯತ್ನಿಸಿದ್ದ ವಿನಯ ಕುಲಕರ್ಣಿ ಈಗ ಸಮಾಜದ ಹೆಸರಲ್ಲಿ ಮತ ಬೇಡುತ್ತಿರುವುದು ಖಂಡನೀಯ’ ಎಂದು ಮಾತಾಡಿದ್ದಾರೆ.

ಹೌದು ವಿನಯ್ ಲಿಂಗಾಯತ/ವೀರಶೈವ ಮುಖಂಡರ ಸಭೆಗಳನ್ನು ನಡೆಸಿ, ಲಿಂಗಾಯತರು ಒಂದಾಗಿ ತಮಗೆ ಬೆಂಬಲಿಸಬೇಕು ಎಂದು ಒಲವು ಗಳಿಸುತ್ತಿದ್ದಾರೆ. ಬಹಿರಂಗ ಸಭೆಗಳಲ್ಲೂ ಅವರು, ‘8 ಲಿಂಗಾಯಿತ ಸಂಸದರಿದ್ದರೂ ಒಬ್ಬರಿಗೂ ಬಿಜೆಪಿ ಕೇಂದ್ರ ಸಚಿವ ಸ್ಥಾನ ನೀಡಲಿಲ್ಲ. ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ಮಾಡಿ, ಲಿಂಗಾಯತ ಸಮುದಾಯವನ್ನು ಅವಮಾನಿಸಿದ್ದಾರೆ… ಬಿಜೆಪಿಗೆ ನಿಜಕ್ಕೂ ಲಿಂಗಾಯತ ಸಮಾಜದ ಮೇಲೆ ಗೌರವವಿದ್ದರೆ, ನಾಗಪುರದ ಆರೆಸ್ಸೆಸ್ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಹಾಕಲಿ’ ಎಂದು ಸವಾಲು ಎಸೆಯುತ್ತಿದ್ದಾರೆ. ಇನ್ನೊಂದು ಕಡೆ, ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಮಾರು 15 ಅದ್ವೈತ ಮಠಾಧೀಶರು ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ಬಹಿರಂಗ ಹೇಳಿಕೆ ನೀಡಿದ್ದಾರೆ.

ಮುಂಬೈ ಕರ್ನಾಟಕ ವ್ಯಾಪ್ತಿಯಲ್ಲಿ ಒಟ್ಟು 6 ಕ್ಷೇತ್ರಗಳಿದ್ದು ಐದು ಸಾಮಾನ್ಯ ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಪಂಚಮಸಾಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ-ಸಾಧುನವರ್, ಚಿಕ್ಕೋಡಿ-ಪ್ರಕಾಶ ಹುಕ್ಕೇರಿ, ಧಾರವಾಡ-ವಿನಯ್ ಕುಲಕರ್ಣಿ ಮತ್ತು ಬಾಗಲಕೋಟೆ-ವೀಣಾ ಕಾಶಪ್ಪನವರ್. ಬಿಜೆಪಿ ಇಲ್ಲಿ ಪಂಚಮಸಾಲಿಗೂ ಟಿಕೆಟ್ ನೀಡಿಲ್ಲ. ಅದು ಹೈದರಾಬಾದ್ ಕರ್ನಾಟಕದಲ್ಲಿ ಮಾತ್ರ ಕೊಪ್ಪಳದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಸಂಗಣ್ಣ ಕರಡಿಯವರಿಗೆ ಟಿಕೆಟ್ ನೀಡಿದೆ. ಇದು ಕೂಡ ಪಂಚಮಸಾಲಿಗಳಿಗೆ ಕಾಂಗ್ರೆಸ್ ಪರ ಹೊರಳಲು ಒಂದು ಕಾರಣವಾಗುತ್ತಿದೆಯೇ? ಬಾಗಲಕೋಟೆಯಲ್ಲಂತೂ ಪಂಚಮಸಾಲಿಗಳು ಕಾಂಗ್ರೆಸ್ ಅಭ್ಯರ್ಥಿ ಪರ ನಿಲ್ಲುತ್ತಿರುವುದು ಸ್ಪಷ್ಟವಾಗುತ್ತಿದೆ.

ಲಿಂಗಾಯತ/ವೀರಶೈವ ಸಮುದಾಯದಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮುದಾಯ ತನಗೆ ಸರಿಯಾದ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಮೊದಲಿಂದಲೂ ಅಸಮಾಧಾನ ಹೊಂದಿದೆ. ರಾಜೈ ಪಂಚಮಸಾಲಿ ಸಂಘಟನೆಯೂ ಈ ಕುರಿತಾಗಿ ಧ್ವನಿ ಎತ್ತುತ್ತಾ ಬಂದಿದೆ. ಇಷ್ಟು ವರ್ಷಗಳು ಬೆಂಬಲಿಸಿದರೂ ಬಿಜೆಪಿ ತಮ್ಮನ್ನು ಬಳಸಿಕೊಂಡು ಬಿಸಾಡುತ್ತಿದೆ ಎಂಬ ಭಾವನೆ ದಟ್ಟವಾಗುತ್ತಿದೆ. ಇದು ಸಾಮೂಹಿಕವಾಗಿ ಮತಗಳಾಗಿ ಪರಿವರ್ತಿತ ಆಗಬಹುದೇ ಎಂಬ ಪ್ರಶ್ನೆ ಉಳಿದುಕೊಂಡಿದೆ.

ಬಿಜೆಪಿಗೆ ಮೊದಲ ಬಾರಿ ಇಂತಹ ಹೆದರಿಕೆ ಉಂಟಾಗಿದೆ. ಅದಕ್ಕೇ ಅದು ವಿಜಯ ಸಂಕೇಶ್ವರರ ಪೇಪರ್ ಮೂಲಕ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವನ್ನು ಮುನ್ನೆಲೆಗೆ ತಂದು ಕಾಂಗ್ರೆಸ್ ಧರ್ಮ ಒಡೆಯುತ್ತಿದೆ ಎಂಬ ಸವಕಲು ವಾದವನ್ನು ತೇಲಿಬಿಡಲು ಯತ್ನಿಸಿತು. ಕರ್ನಾಟಕದಲ್ಲಿ ಪ್ರಧಾನಿಯ ಬಾಯಲ್ಲೂ ಅದನ್ನು ಹೇಳಿಸಲು ಯತ್ನಿಸಿತು.

ಲಿಂಗಾಯತ ಮತಗಳಿಗಾಗಿ ಈಗ ರಾಜಕೀಯ ಮೇಲಾಟ ಶುರುವಾಗಿದ್ದು, ಪಂಚಮಸಾಲಿಗಳು ಈ ಸಲ ಪಾರ್ಟಿ ಬದಲಿಸಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ. ಚುನಾವಣಾ ಫಲಿತಾಂಶದ ಮೇಲೂ ಇದರ ಪ್ರಭಾವವಾಗಲಿದೆ. ಈ ವಿಷಯದಲ್ಲಿ ಹಿಂದೆಲ್ಲ ಬಿಜೆಪಿಗಿದ್ದ ಅಡ್ವಾಂಟೇಜ್ ಈ ಸಲ ಕಾಂಗ್ರೆಸ್‍ಗೆ ಇದೆ. ಅದಕ್ಕೆ ಸಾಕಷ್ಟು ಕಾರಣಗಳೂ ಇವೆಯಲ್ಲವೇ?

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...