Homeಮುಖಪುಟಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

- Advertisement -
- Advertisement -

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಗ್ರಾಮ ಪಂಚಾಯಿತಿಯೊಂದು, ಆರೋಪಿಗೆ ಕೇವಲ 1ಲಕ್ಷ ರೂ, ದಂಡ ವಿಧಿಸಿ, ಆ ಹಣದಲ್ಲೇ ಮಾಂಸ ಮತ್ತು ಮದ್ಯದ ಪಾರ್ಟಿ ನಡೆಸಿ ಸಂಭ್ರಮಿಸಿದ ಅಮಾನವೀಯ ಘಟನೆ ನಡೆದಿದೆ.

ಘಟನೆಯ ವಿವರಗಳ ಪ್ರಕಾರ, ಶನಿವಾರ ಸಂಜೆ ಸುನಿಲ್ ಲೋಹರಾ ಎಂಬ ಪಾತಕಿ ಸಂತ್ರಸ್ತ ಬಾಲಕಿಯ ಮನೆಗೆ ತೆರಳಿದ್ದ. ಆ ಸಮಯದಲ್ಲಿ ಬಾಲಕಿಯ ತಾಯಿ ಮನೆಯ ದೈನಂದಿನ ಕೆಲಸಗಳಲ್ಲಿ ನಿರತರಾಗಿದ್ದರು. ಮಗುವನ್ನು ಆಟವಾಡಿಸುವುದಾಗಿ ನಂಬಿಸಿ ತಾಯಿಯಿಂದ ಕರೆದೊಯ್ದ ಆರೋಪಿ, ಪಕ್ಕದ ಕೊಠಡಿಯಲ್ಲಿ ಕಂದಮ್ಮನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಗುವಿನ ಗಂಭೀರ ಸ್ಥಿತಿ ಹಾಗೂ ಅಸಹನೀಯ ಅಳಲನ್ನು ಕೇಳಿ ಧಾವಿಸಿ ಬಂದ ತಾಯಿ, ತಕ್ಷಣವೇ ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಆದರೆ, ಈ ಭೀಕರ ಅಪರಾಧಕ್ಕೆ ಕಾನೂನಿನಡಿ ಸೂಕ್ತ ಶಿಕ್ಷೆ ಕೊಡಿಸುವ ಬದಲು, ಗ್ರಾಮದ ಪ್ರಭಾವಿ ಮುಖಂಡರು ಪ್ರಕರಣವನ್ನು ಪೋಲಿಸರ ವರೆಗೆ ತಲುಪದಂತೆ ತಡೆಯಲು ಯತ್ನಿಸಿದ್ದಾರೆ. ಭಾನುವಾರ ಕಂಗಾರೂ ಕೋರ್ಟ್ ಮಾದರಿಯಲ್ಲಿ ಪಂಚಾಯಿತಿ ಸಭೆ ಕರೆದ ಗ್ರಾಮಸ್ಥರು, ಆರೋಪಿಗೆ 1ಲಕ್ಷ ರೂಪಾಯಿ ದಂಡ ವಿಧಿಸಿ, ವಿಷಯವನ್ನು ಸ್ಥಳೀಯವಾಗಿಯೇ ಇತ್ಯರ್ಥಪಡಿಸಲು ಮುಂದಾಗಿದ್ದಾರೆ.

ಅತ್ಯಂತ ಅಸಹ್ಯಕರ ಸಂಗತಿಯೆಂದರೆ, ಆರೋಪಿ ಸುನಿಲ್ ಲೋಹರಾ ಮುಂಗಡವಾಗಿ ಪಾವತಿಸಿದ 20,000 ರೂಪಾಯಿ ದಂಡದ ಹಣದಲ್ಲಿ ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರು ಮಾಂಸ ಹಾಗೂ ಮದ್ಯದ ಪಾರ್ಟಿ ಆಯೋಜಿಸಿ ಸಂಭ್ರಮಿಸಿದ್ದಾರೆ! ಉಳಿದ 80,000 ರೂಪಾಯಿಗಳನ್ನು ವಾರದೊಳಗೆ ಪಾವತಿಸುವಂತೆ ಆರೋಪಿಗೆ ಗಡುವು ನೀಡಲಾಗಿತ್ತು.

ಗ್ರಾಮಸ್ಥರ ಒತ್ತಡದಿಂದಾಗಿ ಸಂತ್ರಸ್ತೆಯ ಕುಟುಂಬ ಪೋಲಿಸರಿಗೆ ದೂರು ನೀಡಲು ಸಾಧ್ಯವಾಗಿರಲಿಲ್ಲ. ಆದರೆ, ಗ್ರಾಮದಲ್ಲಿ ನಡೆಯುತ್ತಿದ್ದ ಈ ಅಮಾನವೀಯ ಕೃತ್ಯದ ಕುರಿತು ರಹಸ್ಯ ಮಾಹಿತಿಯೊಂದು ಘಾಗ್ರಾ ಪೊಲೀಸರಿಗೆ ತಲುಪಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಭಾನುವಾರ ಗ್ರಾಮಕ್ಕೆ ಧಾವಿಸಿದಾಗ, ದಂಡದ ಹಣದಲ್ಲೇ ಮದ್ಯದ ಪಾರ್ಟಿ ಭರದಿಂದ ಸಾಗಿರುವುದನ್ನು ಗಮನಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ.

ಘಾಗ್ರಾ ಪೊಲೀಸ್ ಠಾಣಾ ಉಸ್ತುವಾರಿ ಮೋಹನ್ ಕುಮಾರ್ ನೇತೃತ್ವದ ತಂಡವು ಸ್ಥಳದಲ್ಲೇ ಆರೋಪಿ ಸುನಿಲ್ ಲೋಹರಾನನ್ನು ಬಂಧಿಸಿದೆ. ಸಂತ್ರಸ್ತ ಮಗುವಿನ ತಾಯಿಯಿಂದ ಅಧಿಕೃತ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು, ಪೋಕ್ಸೊ (POCSO) ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಇನ್ನು ಘಟನೆ ಕುರಿತು ಪ್ರತಿಕ್ರಿಯಿಸಿರುವ ಅರಂಗಿ ಪಂಚಾಯತಿ ಮುಖ್ಯಸ್ಥ ಲೋಡೋ ಎಕ್ಕಾ, ಪಾಲ್ಮಾ ಗ್ರಾಮದಲ್ಲಿ ನಡೆದ ಈ ಕಾನೂನುಬಾಹಿರ ಸಭೆಯ ಬಗ್ಗೆ ತಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಘೋರ ಅಪರಾಧವನ್ನು ಮುಚ್ಚಿಹಾಕಲು ಯತ್ನಿಸಿದ ಪಂಚಾಯಿತಿ ಸದಸ್ಯರ ವಿರುದ್ಧವೂ ಕಾನೂನು ಕ್ರಮ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...