Homeಚಳವಳಿಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಇಲ್ಲದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯ

- Advertisement -
- Advertisement -

ಪಠ್ಯ ಪುಸ್ತಕ ಪುನರ್ ಪರಿಷ್ಕರಣೆಗೆ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಕ್ರೋಶ ವ್ಯಕ್ತಪಡಿಸಿದ್ದರು, ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, “ಪಠ್ಯದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಪರಿಶೀಲಿಸೋಣ ಎಂದರೆ ಎಲ್ಲಿಯೂ ಪಠ್ಯ ಪುಸ್ತಕಗಳೇ ಸಿಗುತ್ತಿಲ್ಲ. ಶಾಲೆ ಆರಂಭವಾಗಿ 15 ದಿನ ಕಳೆದರೂ ಮಕ್ಕಳಿಗೆ ಪುಸ್ತಕ ಸಿಕ್ಕಿಲ. ಹೀಗಾದಾಗ ಶಿಕ್ಷಕರು ಹೇಗೆ ಪಾಠ ಮಾಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಿನ ಪಠ್ಯ ಪರಿಷ್ಕರಣೆಯ ಸಮಿತಿಯಲ್ಲಿ ಒಂದು ವರ್ಗಕ್ಕೆ ಸೇರಿರುವವರೆ ಇರುವುದು ಸರಿಯಲ್ಲ. ಬದಲಿಗೆ ಶಿಕ್ಷಣ ಕ್ಷೇತ್ರದಲ್ಲಿ ದುಡಿದವರು, ಶಿಕ್ಷಣ ತಜ್ಞರು, ಸಾಮಾಜಿಕ ಕಾಳಜಿಯುಳ್ಳ ದೂರದೃಷ್ಟಿಯುಳ್ಳವರು ಸಮಿತಿಯಲ್ಲಿ ಇರಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಪಾಠದಲ್ಲಿ ನೈಜ ವಿಚಾರಗಳನ್ನು ಕಿತ್ತುಹಾಕಿ ಸುಳ್ಳುಗಳನ್ನು ಬಿತ್ತಲಾಗಿದೆ ಎಂದು ಸ್ವಾಮೀಜಿಗಳು ದೂರಿದ್ದಾರೆ. ಕಳೆದ ವರ್ಷದ ಪಾಠದಲ್ಲಿ “ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಆದ್ಯ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. ವೈದಿಕ ಮೂಲ ಧರ್ಮದಲ್ಲಿ ಬೇರೂರಿದ್ದ ಅಸಂಖ್ಯ ಧಾರ್ಮಿಕ ಆಚರಣಾ ವಿಧಿ ವಿಧಾನಗಳನ್ನು ಬದಿಗೊತ್ತಿ ಮಾನವೀಯ ಮೌಲ್ಯ ಆಧಾರಿತ ಸರಳ ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಪ್ರಚಾರಪಡಿಸಿದರು. ‘ಜಾತಿವ್ಯವಸ್ಥೆಯ ಕಡುವಿರೋಧಿಯಾಗಿದ್ದ ಬಸವೇಶ್ವರರು ತಮ್ಮ ಉಪನಯನದ ನಂತರ ಯಜ್ಞೋಪವೀತವನ್ನು ಕಿತ್ತೆಸೆದು ಕೂಡಲಸಂಗಮಕ್ಕೆ ನಡೆದರು. “ಉನ್ನತಾಧಿಕಾರದಲ್ಲಿದ್ದರೂ ಹಣ, ಅಧಿಕಾರ, ಅಧಿಪತ್ಯ ಇವ್ಯಾವುದರಿಂದಲೂ ಇವರು ವಿಚಲಿತರಾಗಲಿಲ್ಲ. ತಮ್ಮ ಇಡೀ ಜೀವನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು. ಸಮಾಜ, ಧರ್ಮದ ಪುನಶ್ಚತನಕ್ಕೆ ಟೊಂಕಕಟ್ಟಿದರು’. ‘ಸ್ವಾವಲಂಬನೆಯ ತತ್ವವನ್ನು, ‘ದೇಹವೇ ದೇಗುಲ’, ‘ಈ ಬಗೆಯ ಸಂವೇದನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪಗಳಾಗಿವೆ’,`ಅವರು ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು. ಇಂಥ ಅನೇಕ ಮಹತ್ವದ ಅಂಶಗಳನ್ನೇ ತೆಗೆದುಹಾಕಿ ತಮಗೆ ಬೇಕಾದಂತೆ ತಿರುಚಿದ್ದಾರೆ. ಬಸವಣ್ಣನವರ ಮತ್ತು ಅವರು ಪ್ರತಿಪಾದಿಸಿದ ಲಿಂಗಾಯತ ಧರ್ಮದ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಮಾಡಿದ್ದಾರೆ” ಎಂದು ಶ್ರೀಗಳು ಕಿಡಿಕಾರಿದ್ದಾರೆ.

ಮುಂದುವರಿದು ಈ ಬದಲಾವಣೆ ನಿಜಕ್ಕೂ ಖಂಡನಾರ್ಹ. ಬಸವಣ್ಣನವರ ಶುದ್ಧ, ಪಾರದರ್ಶಕ ಬದುಕಿಗೆ ಕಳಂಕ ತಂದಂತೆ, ‘ವಚನಕಾರರು ವೀರಶೈವ ಮತವನ್ನು ಸುಧಾರಿಸಿದರು’ ಎನ್ನುವುದು ಶುದ್ಧ ಸುಳ್ಳು. ಅವರು ‘ಲಿಂಗಾಯತ ಧರ್ಮವನ್ನು ಜಾರಿಯಲ್ಲಿ ತಂದರು’ ಎಂದಾಗಬೇಕಿತ್ತು. ಇಂತಹ ಹಲವು ದೋಷಗಳಾಗಿವೆ. ಆದುದರಿಂದ ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಈ ಬಗ್ಗೆ ಕೂಡಲೇ ಕ್ರಮ ಜರುಗಿಸದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯವಾಗಬಹುದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದಲ್ಲಿ ನನ್ನ ಕವಿತೆಯನ್ನೂ ಕೈಬಿಡಿ: ಶಿಕ್ಷಣ ಸಚಿವರಿಗೆ ಎಸ್‌.ಜಿ.ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...