HomeಮುಖಪುಟAFSPA ರದ್ದತಿ ಕುರಿತು ಸಮಿತಿ ರಚನೆ: ಅಮಿತ್ ಶಾ ಜೊತೆ ಸಭೆ ನಂತರ ನಾಗಾಲ್ಯಾಂಡ್‌ ಸಿಎಂ...

AFSPA ರದ್ದತಿ ಕುರಿತು ಸಮಿತಿ ರಚನೆ: ಅಮಿತ್ ಶಾ ಜೊತೆ ಸಭೆ ನಂತರ ನಾಗಾಲ್ಯಾಂಡ್‌ ಸಿಎಂ ಹೇಳಿಕೆ

- Advertisement -
- Advertisement -

ನಾಗಾಲ್ಯಾಂಡ್‌ನಲ್ಲಿ ಇತ್ತೀಚೆಗೆ ನಡೆದ 13 ನಾಗರಿಕರ ಹತ್ಯೆ ಪ್ರರಕಣದ ಹಿನ್ನೆಲೆಯಲ್ಲಿ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಯನ್ನು ವಾಪಾಸ್ ಪಡೆಯುವ ಕುರಿತು ನಿರ್ಧರಿಸಲು ಸಮತಿ ರಚಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾರೊಂದಿಗಿನ ಸಭೆಯ ಬಳಿಕ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಮಾನ್ಯ ಗೃಹಮಂತ್ರಿ ಅಮಿತ್‌ ಶಾರವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 23 ರಂದು ಸಭೆ ನಡೆಯಲಾಗಿದೆ. AFSPA ರದ್ದುಗೊಳಸಬೇಕೆಂಬ ನಮ್ಮ ಮನವಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ರಾಜ್ಯದ ಎಲ್ಲಾ ವರ್ಗದ ಜನರು ಶಾಂತಿಯಿಂದ ವರ್ತಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಈ ಕುರಿತು ನಾಗಲ್ಯಾಂಡ್ ಸರ್ಕಾರವು ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ‘ AFSPA ರದ್ದುಗೊಳಿಸುವ ಕುರಿತು ಸಮಿತಿ ರಚಿಸಲಾಗುತ್ತದೆ. ಅದು ಅಧ್ಯಯನ ನಡೆಸಿ 45 ದಿನಗಳಲ್ಲಿ ತನ್ನ ವರದಿ ಸಲ್ಲಿಸಲಿದೆ. ಅದರ ಆಧಾರದಲ್ಲಿ ಗಲಭೆ ಪ್ರದೇಶದಲ್ಲಿ ಕಾನೂನನ್ನು ಹಿಂತೆಗೆದುಕೊಳ್ಳಲಾಗುವುದು” ಎಂದು ಹೇಳಲಾಗಿದೆ.

ಇತ್ತೀಚೆಗೆ ನಡೆದ 13 ನಾಗರೀಕರ ಹತ್ಯೆ ಪ್ರಕರಣದ ಕುರಿತು ಕೋರ್ಟ್ ನಿಷ್ಪಷಪಾತ ತನಿಖೆ ನಡೆಸುತ್ತದೆ ಮತ್ತು ತಪ್ಪಿತಸ್ಥ ಸೈನ್ಯದ ತುಕಡಿಯ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಘಟನೆಯನ್ನು ನೇರವಾಗಿ ಭಾಗಿಯಾದವರನ್ನು ತಕ್ಷಣದಿಂದಲೇ ಅಮಾನತುಗೊಳಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನವೆಂಬರ್ 20 ರಂದು, ನಾಗಾಲ್ಯಾಂಡ್ ಅಸೆಂಬ್ಲಿಯು ಭಾರತ ಸರ್ಕಾರವು ಈಶಾನ್ಯ ಪ್ರದೇಶದಿಂದ AFSPA ಅನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.


ಇದನ್ನೂ ಓದಿ: ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA...

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...