Homeಮುಖಪುಟತಮಿಳುನಾಡು ಸಿಎಂ ಅಭ್ಯರ್ಥಿ ಪಟ್ಟಕ್ಕಾಗಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನಡುವೆ ಪೈಪೋಟಿ

ತಮಿಳುನಾಡು ಸಿಎಂ ಅಭ್ಯರ್ಥಿ ಪಟ್ಟಕ್ಕಾಗಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ನಡುವೆ ಪೈಪೋಟಿ

ಚುನಾವಣೆಗೆ ಮುನ್ನವೇ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದನ್ನು ಪನ್ನೀರ್‌ಸೆಲ್ವಂ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮುಂದಿನ ವರ್ಷ ಆರಂಭದಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಆಡಳಿತ ಪಕ್ಷ AIADMK ನಲ್ಲಿ ಮುಸುಕಿನ ಗುದ್ದಾಟಕ್ಕೆ ಉಪಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಪ್ರತಿಕ್ರಿಯೆ ನೀಡಿದ್ದಾರೆ.

ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಎಐಎಡಿಎಂಕೆ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಆಯ್ಕೆ ಹಿನ್ನೆಲೆ ಉದ್ಭವಿಸಿರುವ ಬಿಕ್ಕಟ್ಟಿನ ಕುರಿತು ತಮಿಳುನಾಡಿನ ಉಪಮುಖ್ಯಮಂತ್ರಿ ಓ ಪನ್ನೀರ್‌ಸೆಲ್ವಂ ಮೌನ ಮುರಿದಿದ್ದಾರೆ.

2021ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲು ಎಡಪ್ಪಾಡಿ ಪಳನಿಸ್ವಾಮಿ ಮತ್ತು ಪನ್ನೀರ್‌ಸೆಲ್ವಂ ಅವರ ನಡುವೆ ಬಿರುಸಿನ ಪೈಪೋಟಿ ನಡೆದಿದೆ.

ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಅವರ ಬೆಂಬಲಿಗರು ತಮ್ಮ ನಾಯಕ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೊಂಡು ಪೋಸ್ಟರ್‌ಗಳನ್ನು ಹಾಕಿದಾಗ ಈ ವಿವಾದ ಉಲ್ಬಣಗೊಂಡಿತು. ಅಕ್ಟೋಬರ್‌ 7 ರಂದು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಘೋಷಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ವಿನಾಯಕ ಚತುರ್ಥಿ: ತಮಿಳುನಾಡಿನಲ್ಲಿ ಮಿತ್ರಪಕ್ಷಗಳಾದ AIADMK ಮತ್ತು BJP ಟ್ವೀಟ್ ಸಮರ

ಇಂದು ಟ್ವೀಟ್ ಮಾಡಿರುವ ಪನ್ನೀರ್‌ ಸೆಲ್ವಂ, ’ಇದುವರೆಗಿನ ನನ್ನ ನಿರ್ಧಾರಗಳು ತಮಿಳುನಾಡಿನ ಜನರು ಮತ್ತು ಎಐಎಡಿಎಂಕೆ ಸ್ವಯಂಸೇವಕರ ಹಿತದೃಷ್ಟಿಯಿಂದ ಕೈಗೊಂಡಿರುತ್ತೇನೆ. ಭವಿಷ್ಯದಲ್ಲಿಯೂ ಇದೇ ರೀತಿ ನಿರ್ಧಾರ ಕೈಗೊಳ್ಳುತ್ತೇನೆ” ಎಂದಿದ್ದಾರೆ.

ಜೊತೆಗೆ ’ಇದುವರೆಗೆ ಏನು ನಡೆದಿದೆಯೋ ಒಳ್ಳೆಯದಕ್ಕಾಗಿಯೇ ನಡೆದಿದೆ. ಈಗ ನಡೆಯುತ್ತಿರುವುದು ಸಹ ಒಳ್ಳೆಯದಕ್ಕೆ. ಮುಂದೆ ನಡೆಯುವುದು ಸಹ ಒಳ್ಳೆಯದಕ್ಕೆ’ ಎಂದು ಒಪಿಎಸ್ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕುರಿತು ಚರ್ಚಿಸಲು ಎಐಎಡಿಎಂಕೆ ಕಾರ್ಯಕಾರಿ ಸಮಿತಿ ಸೆಪ್ಟೆಂಬರ್ 28 ರಂದು ಚೆನ್ನೈನ ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿತ್ತು. ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪನ್ನೀರ್ ಸೆಲ್ವಂ ಮತ್ತು ಎಡಪ್ಪಾಡಿ ಪಳನಿಸ್ವಾಮಿ ಇಬ್ಬರೂ ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ: NEP ಯ ತ್ರಿಭಾಷಾ ಸೂತ್ರ ಅಳವಡಿಸುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ

ಉಪಮುಖ್ಯಮಂತ್ರಿ ಪನ್ನೀರ್‌ಸೆಲ್ವಂಗೆ ಬೆಂಬಲದ ಕೊರತೆ ಇದ್ದು, ಪಳನಿಸ್ವಾಮಿ ಅವರಿಗೆ ಬಹುತೇಕ ಶಾಸಕರು, ಮುಖಂಡರ ಬೆಂಬಲವಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಕಾರ್ಯಕಾರಿ ಸಮಿತಿ ಎಐಎಡಿಎಂಕೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಕ್ಟೋಬರ್ 7 ರಂದು ಘೋಷಿಸಲಾಗುವುದು ಎಂದು ಘೋಷಿಸಿತ್ತು.

ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಗೆ ಇನ್ನೇರಡು ದಿನಗಳಿರುವಾಗ ಪನ್ನೀರ್‌ ಸೆಲ್ವಂ ಟ್ವೀಟ್ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಚುನಾವಣೆಗೆ ಮುನ್ನವೇ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವುದನ್ನು ಪನ್ನೀರ್‌ಸೆಲ್ವಂ ಪ್ರಶ್ನಿಸಿದ್ದಾರೆ.

’ಪಕ್ಷದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಯಥಾಸ್ಥಿತಿ ಮುಂದುವರಿಯುತ್ತದೆ. ಪಳನಿಸ್ವಾಮಿ ಉಸ್ತುವಾರಿಯಲ್ಲಿ ಪಕ್ಷವು ಚುನಾವಣೆಯನ್ನು ಎದುರಿಸಲಿದೆ, ಆದರೆ ಪನ್ನೀರ್‌ ಸೆಲ್ವಂ ಪಕ್ಷದ ಸಂಯೋಜಕರಾಗಿರುತ್ತಾರೆ’ ಎಂದು ಹೆಸರು ಹೇಳಲು ಬಯಸದ ಹಿರಿಯ ಅಧಿಕಾರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬ ಕೇಳುತ್ತಿರುವುದೇನು?: 5 ಪ್ರಶ್ನೆಗಳನ್ನು ಮುಂದಿಟ್ಟ ಪ್ರಿಯಾಂಕ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...