Homeಮುಖಪುಟಬಿಜೆಪಿಯ ನವ ಭಾರತದಲ್ಲಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ: ಪರಕಾಲ ಪ್ರಭಾಕರ್

ಬಿಜೆಪಿಯ ನವ ಭಾರತದಲ್ಲಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ: ಪರಕಾಲ ಪ್ರಭಾಕರ್

- Advertisement -
- Advertisement -

ಬಿಜೆಪಿ ಆಡಳಿತದ ನವ ಭಾರತದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪತಿ ಹಾಗೂ ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪರಕಾಲ ಪ್ರಭಾಕರ್, ಒಕ್ಕೂಟ ವ್ಯವಸ್ಥೆಯನ್ನು ನಾಶಪಡಿಸುವ ಪ್ರಯತ್ನಗಳು ನಡೆದಿವೆ. ದೇಶದಲ್ಲಿ  ಧರ್ಮವು ಯಾವಾಗಲೂ ಇತ್ತು. ಆದರೆ, ಬಿಜೆಪಿ ಆಡಳಿತದ ಈ ‘ನವ ಭಾರತ’ದಲ್ಲಿ ಹೊಸ ವಿಷಯವೆಂದರೆ ರಾಜಕೀಯ ಉದ್ದೇಶಗಳು ಮತ್ತು ಹಿತಾಸಕ್ತಿಗಳಿಗಾಗಿ ಧರ್ಮವನ್ನು ಆಯುಧವನ್ನಾಗಿಸಲಾಗಿದೆ ಎಂದು ಹೇಳಿದ್ದಾರೆ.

ದೇಶದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯು ಅಪಾಯದಲ್ಲಿದೆ. ಕೇಂದ್ರ ಸರ್ಕಾರವು ಟೀಕೆಗಳನ್ನು ಸ್ವೀಕರಿಸುವುದಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ ಇರುವವರು ತಮ್ಮನ್ನು ತಾವು ಸ್ವಾತಂತ್ರ್ಯ ಹೋರಾಟಗಾರರೆಂದು ಕರೆದುಕೊಳ್ಳುತ್ತಿದ್ದಾರೆ. ಇದು ನಾಚಿಗೇಡಿನ ಸಂಗತಿ. ನವಭಾರತದಲ್ಲಿ ಅಸಮಾನತೆ ತಾಂಡವವಾಡುತ್ತಿದೆ. ಆರ್ಥಿಕವಾಗಿ ಸಶಕ್ತರಾಗಿರುವ ಶೇಕಡ ಒಂದರಷ್ಟು ಜನರು ರಾಷ್ಟ್ರದ ಶೇ.40ರಷ್ಟು ಸಂ‍ಪನ್ಮೂಲವನ್ನು ಹೊಂದಿದ್ದಾರೆ ಎಂದು ಪರಕಾಲ ಪ್ರಭಾಕರ್ ಹೇಳಿದ್ದಾರೆ.

ಮೋದಿ ನೇತೃತ್ವದ ಪ್ರಸ್ತುತ ಬಿಜೆಪಿ ಸರಕಾರದ ಪ್ರಬಲ ಟೀಕಾಕಾರಾಗಿರುವ ಪರಕಾಲ ಪ್ರಭಾಕರ್ ಅವರು ಒರ್ವ ಭಾರತೀಯ ರಾಜಕೀಯ ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಮರ್ಶಕರಾಗಿದ್ದಾರೆ. ಇವರು ಲಂಡನ್‌ ಸ್ಕೂಲ್‌ ಆಪ್‌ ಎಕನಾಮಿಕ್‌ನಿಂದ ಪಿಹೆಚ್‌ಡಿ ಪಡೆದಿದ್ದರು. ಜುಲೈ 2014 ಮತ್ತು ಜೂನ್ 2018ರ ನಡುವೆ ಸಂವಹನ ಸಲಹೆಗಾರರಾಗಿ ಆಂಧ್ರ ಪ್ರದೇಶ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆಯ ಸ್ಥಾನವನ್ನು ಹೊಂದಿದ್ದರು.

ನೋಟು ರದ್ದತಿಯನ್ನು ಒಂದು ದೊಡ್ಡ ಪ್ರಮಾದ ಎಂದು ಕರೆದಿದ್ದ ಪರಕಾಲ ಪ್ರಭಾಕರ್, ಅರ್ಥಶಾಸ್ತ್ರದಲ್ಲಿ ಮೂಲಭೂತ ತರಬೇತಿ ಹೊಂದಿರುವ ಯಾವುದೇ ಅರ್ಥಶಾಸ್ತ್ರಜ್ಞರು, ಇಷ್ಟು ದೊಡ್ಡ ಪ್ರಮಾಣದಲ್ಲಿ ನೋಟು ಅಮಾನೀಕರಣವನ್ನು ಶಿಫಾರಸು ಮಾಡುತ್ತಿರಲಿಲ್ಲ ಎಂದು ಹೇಳಿದ್ದರು. ಸ್ವಾತಂತ್ರ್ಯ ಹಾಗೂ ಸಂವಿಧಾನ ರೂಪಿಸಿದ ಆಶಯಗಳಿಗೆ ವಿರುದ್ಧವಾಗಿ ದೇಶ ಸಾಗುತ್ತಿದೆ. ಜನರು ಭ್ರಮೆಗಳನ್ನೇ ವಾಸ್ತವವೆಂದು ನಂಬಿಕೊಂಡು ಸಂಭ್ರಮಿಸುತ್ತಿದ್ದಾರೆ. ಕೇಂದ್ರದ ಯೋಜನೆಗಳ ಶೇ 80ರಷ್ಟು ಹಣವನ್ನು ಪ್ರಚಾರಕ್ಕೆ ಬಳಸಲಾಗುತ್ತಿದೆ. ಪ್ರಶ್ನಿಸಿದವರನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಅವರು ಹೇಳಿದ್ದರು.

ಇದನ್ನು ಓದಿ: ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...