Homeಮುಖಪುಟಸಮಾನಾಂತರ ಆಡಳಿತ ಅನಗತ್ಯ: ಮಹಾರಾಷ್ಟ್ರ ರಾಜ್ಯಪಾಲರನ್ನು ತರಾಟೆ ತೆಗೆದುಕೊಂಡ ಶಿವಸೇನೆ

ಸಮಾನಾಂತರ ಆಡಳಿತ ಅನಗತ್ಯ: ಮಹಾರಾಷ್ಟ್ರ ರಾಜ್ಯಪಾಲರನ್ನು ತರಾಟೆ ತೆಗೆದುಕೊಂಡ ಶಿವಸೇನೆ

- Advertisement -
- Advertisement -

ಕೊರೋನಾ ಹರಡುವಿಕೆಯನ್ನು ಹೇಗೆ ತಡೆಯುವುದು ಎಂಬುದರ ಕುರಿತು ಆಡಳಿತ ಅಧಿಕಾರಿಗಳೊಂದಿಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ನಡೆಸಿದ ಸಭೆಗೆ ಆಕ್ಷೇಪ ವ್ಯಕ್ತಪಡಿಸಿದ ಶಿವಸೇನೆ, ಇದನ್ನು “ಅನಗತ್ಯ ಸಮಾನಾಂತರ ಆಡಳಿತ” ಎಂದು ಹೇಳಿದೆ. ಇಂತಹ ಸಭೆಗಳು ರಾಜ್ಯ ಆಡಳಿತ ಸಿಬ್ಬಂದಿಗಳಲ್ಲಿ ಗೊಂದಲವನ್ನು ಉಂಟುಮಾಡುತ್ತವೆ ಎಂದು ಶಿವಸೇನೆ ಆರೋಪಿಸಿದೆ.

ಶಿವಸೇನೆ ತನ್ನ ಮುಖವಾಣಿ ‘ಸಾಮ್ನಾ’ ದ ಸಂಪಾದಕೀಯದಲ್ಲಿ, “ಆಡಳಿತ ಪಕ್ಷವು ಕೊರೊನಾ ವಿರುದ್ಧದ  ಯುದ್ಧದಂತಹ ಪರಿಸ್ಥಿತಿಯಲ್ಲಿ ಹೋರಾಡುತ್ತಿರುವಾಗ, ಆಡಳಿತ ವರ್ಗಕ್ಕೆ ನಿರ್ದೇಶನಗಳನ್ನು ನೀಡಲು ಒಂದೇ ಕೇಂದ್ರ ಆಜ್ಞೆ ಇರಬೇಕು” ಎಂದು ಪ್ರತಿಪಾದಿಸಿದೆ.

“ಕೇಂದ್ರದಲ್ಲಿ ಪ್ರಧಾನಿ ಮತ್ತು ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿ ಅಧಿಕಾರವನ್ನು ಹೊಂದಿರಬೇಕು. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಬುಧವಾರ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿಯೂ ಸಹ, ಶಿವಸೇನೆ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನ ಮಂತ್ರಿಗೆ ಕೊರೊನಾ ವಿರುದ್ಧ ಹೋರಾಡಲು ಅವರ ನಾಯಕತ್ವದಲ್ಲಿ ಇಡೀ ದೇಶವನ್ನು ಒಗ್ಗೂಡಲಾಗಿದೆ” ಎಂದು ಶಿವಸೇನೆ ಹೇಳಿದೆ.

ಕೊರೊನಾ ವೈರಸ್ ಆರೋಗ್ಯ ಬಿಕ್ಕಟ್ಟನ್ನು ನಿಭಾಯಿಸಿದ್ದಕ್ಕಾಗಿ ಸಿಎಂ ನಾಯಕತ್ವವನ್ನು ಶ್ಲಾಘಿಸಿದ ಪವಾರ್, ಪಿಎಂ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರಿಗೆ ರಾಜ್ಯಪಾಲರ ಪಾತ್ರದ ಬಗ್ಗೆ (ಅಧಿಕಾರಿಗಳೊಂದಿಗೆ ಸಭೆ ನಡೆಸುವಲ್ಲಿ) ತಿಳಿಸಿದ್ದರು ಎಂದು ಸಂಪಾದಕೀಯ ತಿಳಿಸಿದೆ.

“ಯಾವುದೇ ಕೆಟ್ಟ ಅನುಭವವಾಗಿಲ್ಲ, ಆದರೆ ಯಾರಾದರೂ ಸಮಾನಾಂತರ ಸರ್ಕಾರವನ್ನು ನಡೆಸಿದರೆ ಗೊಂದಲಕ್ಕೆ ಕಾರಣವಾಗುತ್ತದೆ. ಶರದ್ ಪವಾರ್ ಅವರಂತಹ ಹಿರಿಯ ನಾಯಕನಿಗೆ ಈ ರೀತಿ ಅನಿಸಿದರೆ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಸಾಮ್ನಾ ತನ್ನ ಸಂಪಾದಕೀಯದಲ್ಲಿ ಹೇಳಿದೆ.

ಈ ವಾರದ ಆರಂಭದಲ್ಲಿ ರಾಜ್ಯಪಾಲ ಕೊಶಾರಿ ಅವರು ಜಿಲ್ಲಾಧಿಕಾರಿಗಳು ಮತ್ತು ವಿಭಾಗೀಯ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ವಿಭಾಗೀಯ ಆಯುಕ್ತರು, ಬೃಹತ್‌ ಮುಂಬೈ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರು ಮತ್ತು ಹತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭಾಗವಹಿಸಿದ್ದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...