Homeಕ್ರೀಡೆಒಲಂಪಿಕ್ಚಿನ್ನ ಗೆದ್ದ ಶೂಟರ್ ಅವನಿ ಲೇಖರಾ: ಪ್ಯಾರಾಲಿಂಪಿಕ್ಸ್‌ನ ಮೊದಲ ಭಾರತೀಯ ಮಹಿಳೆಯೆಂಬ ಹೆಗ್ಗಳಿಕೆ

ಚಿನ್ನ ಗೆದ್ದ ಶೂಟರ್ ಅವನಿ ಲೇಖರಾ: ಪ್ಯಾರಾಲಿಂಪಿಕ್ಸ್‌ನ ಮೊದಲ ಭಾರತೀಯ ಮಹಿಳೆಯೆಂಬ ಹೆಗ್ಗಳಿಕೆ

- Advertisement -
- Advertisement -

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳಾ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ (ಎಸ್‌ಎಚ್ 1) ಸ್ಪರ್ಧೆಯಲ್ಲಿ ಶೂಟರ್ ಅವನಿ ಲೇಖರಾ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಆ ಮೂಲಕ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ.

ಅವನಿ ಲೇಖರಾ 249.6 ಅಂಕಗಳೊಂದಿಗೆ ಪ್ಯಾರಾಲಿಂಪಿಕ್ಸ್ ದಾಖಲೆ ಸೃಷ್ಟಿಸಿ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾರೆ. ಆ ಮೂಲಕ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಸ್ಪರ್ಧೆಯಲ್ಲಿ ಚೀನಾದ ಕ್ಯುಪಿಂಗ್ ಜಾಂಗ್ 248.9 ಅಂಕಗಳೊಂದಿಗೆ ಬೆಳ್ಳಿ ಹಾಗೂ ಉಕ್ರೇನ್‌ನ ಇರಿನಾ ಶ್ಚೆಟ್ನಿಕ್ ಒಟ್ಟು 227.5 ಅಂಕಗಳೊಂದಿಗೆ ಕಂಚು ಪಡೆದರು.

ಯೋಗೀಶ್ ಕಠುನಿಯಾಗೆ ಬೆಳ್ಳಿ ಪದಕ

ಸೋಮವಾರ ಇಲ್ಲಿ ನಡೆದ ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಎಫ್ 56 ಸ್ಪರ್ಧೆಯಲ್ಲಿ ಭಾರತದ ಡಿಸ್ಕಸ್ ಎಸೆತಗಾರ ಯೋಗೀಶ್ ಕಠುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಅವರು 44.38ಮೀಟರ್ ದೂರ ಎಸೆದು ಸಾಧನೆಗೈದಿದ್ದಾರೆ.

ದೇವೇಂದ್ರ ಜಜಾರಿಯಾಗೆ ಬೆಳ್ಳಿ ಪದಕ

ಎರಡು ಬಾರಿ ಚಿನ್ನ ಗೆದ್ದ ಜಾವೆಲಿನ್ ಥ್ರೋ ಅನುಭವಿ ಸ್ಪರ್ಧಿ ದೇವೇಂದ್ರ ಜಜಾರಿಯಾ ಈ ಬಾರಿ ಮೂರನೇ ಪ್ಯಾರಾಲಿಂಪಿಕ್ ಪದಕವನ್ನು ಗೆದ್ದರು. ಎಫ್ 46 ಫೈನಲ್ ಪಂದ್ಯದಲ್ಲಿ 64.35 ಮೀಟರ್ ದೂರ ಎಸೆದು ಬೆಳ್ಳಿ ಪದಕಕ್ಕೆ ಮುತ್ತಿಟ್ಟರು.

ಇದೇ ಸ್ಪರ್ಧೆಯಲ್ಲಿ ಸುಂದರ್ ಸಿಂಗ್ ಗುರ್ಜಾರ್ ಕೂಡ ಕಂಚಿನ ಪದಕ ಪಡೆದರು. ಅವರು 64.01 ಮೀಟರ್ ಎಸೆದು ಮೂರನೇ ಸ್ಥಾನ ಪಡೆದರು.

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ನಿಶಾದ್ ಕುಮಾರ್  ಪುರುಷರ ಎತ್ತರ ಜಿಗಿತ (ಟಿ 46/47) ವಿಭಾಗದಲ್ಲಿ ಭಾನುವಾರ ಬೆಳ್ಳಿ ಪದಕ ಗೆದ್ದಿದ್ದಾರೆ. ಭಾನುವಾರ ನಡೆದ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಭಾರತದ ಭವಿನಾ ಪಟೇಲ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ನಿನ್ನೆ ನಡೆದ ಡಿಸ್ಕಸ್ ಥ್ರೋ ಎಫ್52 ಫೈನಲ್ ಪಂದ್ಯದಲ್ಲಿ ಭಾರತದ ವಿನೋದ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ. ಆದರೆ ಅದಕ್ಕೆ ಆಕ್ಷೇಪ ವ್ಯಕ್ತವಾದ ನಂತರ ಅದು ರಿವ್ಯೂನಲ್ಲಿದೆ. ಆ ಮೂಲಕ ಈ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಒಟ್ಟು ಏಳು ಪದಕಗಳು ಲಭಿಸಿದಂತಾಗಿವೆ.


ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಬೆಳ್ಳಿ ತಂದುಕೊಟ್ಟ ಹೈಜಂಪರ್ ನಿಶಾದ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...