Homeಕ್ರೀಡೆಒಲಂಪಿಕ್ಪ್ಯಾರಾಲಿಂಪಿಕ್ಸ್‌: ಪದಕ ಬೇಟೆ ಮುಂದುವರೆಸಿರುವ ಭಾರತ; ಬೆಳ್ಳಿ ಗೆದ್ದ ಮರಿಯಪ್ಪನ್‌!

ಪ್ಯಾರಾಲಿಂಪಿಕ್ಸ್‌: ಪದಕ ಬೇಟೆ ಮುಂದುವರೆಸಿರುವ ಭಾರತ; ಬೆಳ್ಳಿ ಗೆದ್ದ ಮರಿಯಪ್ಪನ್‌!

- Advertisement -
- Advertisement -

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವು ತನ್ನ ಪದಕ ಬೇಟೆಯನ್ನು ಮುಂದುವರೆಸಿದೆ. ಮಂಗಳವಾರದಂದು ಭಾರತ ತನ್ನ ತೆಕ್ಕೆಗೆ ಒಟ್ಟು 10 ಪದಕವನ್ನು ಸೇರಿಸಿಕೊಂಡಿದೆ. ಇಂದು ನಡೆದ ಪುರುಷರ ಹೈಜಂಪ್ ಟಿ42 ಸ್ಪರ್ಧೆಯಲ್ಲಿ ಹಾಲಿ ಚಾಂಪಿಯನ್ ಮರಿಯಪ್ಪನ್ ತಂಗವೇಲು ಮತ್ತು ಶರದ್ ಕುಮಾರ್ ಕ್ರಮವಾಗಿ ಬೆಳ್ಳಿ ಮತ್ತು ಕಂಚು ಗೆದ್ದಿದ್ದಾರೆ.

ಈ ಪಂದ್ಯದಲ್ಲಿ ಅಮೆರಿಕದ ಸ್ಯಾಮ್ ಗ್ರೀವ್ ಅವರು 1.88 ಮೀ ಹಾರುವ ಮೂಲಕ ಚಿನ್ನ ಗೆದ್ದರೆ, ಮರಿಯಪ್ಪನ್‌ ತಂಗವೇಲು ಅವರು 1.86 ಮೀ ಬೆಳ್ಳಿ ಗೆದ್ದರು ಹಾಗೂ ಶರದ್‌ ಕುಮಾರ್‌ ಅವರು 1.83ಮೀ ಹಾರಿ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚಿನ್ನ ಗೆದ್ದ ಶೂಟರ್ ಅವನಿ ಲೇಖರಾ: ಪ್ಯಾರಾಲಿಂಪಿಕ್ಸ್‌ನ ಮೊದಲ ಭಾರತೀಯ ಮಹಿಳೆಯೆಂಬ ಹೆಗ್ಗಳಿಕೆ

ಸ್ಪರ್ಧೆಯಲ್ಲಿದ್ದ ಮೂರನೇ ಭಾರತೀಯ ಮತ್ತು 2016 ರ ರಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ವರುಣ್ ಸಿಂಗ್ ಭಾಟಿ ಅವರು ಒಟ್ಟು ಒಂಬತ್ತು ಸ್ಪರ್ಧಿಗಳಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಡೆದುಕೊಂಡರು.

ಸೋಮವಾರ, ಶೂಟರ್ ಸಿಂಗರಾಜ್ ಅದಾನ ಅವರು ಪುರುಷರ 10 ಮೇರ್ ಪಿಸ್ತೂಲ್ SH1 ಸ್ಪರ್ಧೆಯಲ್ಲಿ ಕಂಚು ಗೆದ್ದಿದ್ದಾರೆ.

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ತಂಡವು ಇದುವರೆಗೆ ಎರಡು ಚಿನ್ನ, ಐದು ಬೆಳ್ಳಿ ಮತ್ತು ಮೂರು ಕಂಚಿನ ಪದಕಗಳನ್ನು ಗೆದ್ದಿದೆ.

ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್‌‌ ಜಾವೆಲಿನ್ ಥ್ರೋ: ಚಿನ್ನ ಗೆಲ್ಲುವುದರೊಂದಿಗೆ ವಿಶ್ವದಾಖಲೆ ಬರೆದ ಸುಮಿತ್‌ ಆಂಟಿಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...