Homeರಂಜನೆಕ್ರೀಡೆಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಬೆಳ್ಳಿ ತಂದುಕೊಟ್ಟ ಹೈಜಂಪರ್ ನಿಶಾದ್ ಕುಮಾರ್

ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಬೆಳ್ಳಿ ತಂದುಕೊಟ್ಟ ಹೈಜಂಪರ್ ನಿಶಾದ್ ಕುಮಾರ್

ಇಂದು ನಡೆದ ಡಿಸ್ಕಸ್ ಥ್ರೋ ಎಫ್52 ಫೈನಲ್ ಪಂದ್ಯದಲ್ಲಿ ಭಾರತದ ವಿನೋದ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ.

- Advertisement -
- Advertisement -

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ನಿಶಾದ್ ಕುಮಾರ್  ಪುರುಷರ ಎತ್ತರ ಜಿಗಿತ (ಟಿ 46/47) ವಿಭಾಗದಲ್ಲಿ ಭಾನುವಾರ ಬೆಳ್ಳಿ ಪದಕ ಗೆದ್ದಿದ್ದಾರೆ. ಅದೇ ರೀತಿ ಡಿಸ್ಕಸ್ ಥ್ರೋ ಎಫ್52 ಫೈನಲ್ ಪಂದ್ಯದಲ್ಲಿ ಭಾರತದ ವಿನೋದ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ. ಆ ಮೂಲಕ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೂರು ಪದಕಗಳು ಲಭಿಸಿದಂತಾಗಿವೆ. ಇಂದು ಬೆಳಿಗ್ಗೆ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಭಾರತದ ಭವಿನಾ ಪಟೇಲ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ನಿಶಾದ್ ಕುಮಾರ್ ಹೈ ಜಂಪ್ ಸ್ಪರ್ಧೆಯ ಫೈನಲ್‌ನಲ್ಲಿ 2.06 ಮೀ ಜಿಗಿಯುವ ಮೂಲಕ ತಮ್ಮ ಏಷ್ಯನ್ ದಾಖಲೆಯನ್ನು ಸರಿಗಟ್ಟಿದರು. ಸ್ಪರ್ಧೆಯಲ್ಲಿದ್ದ ಭಾರತದ ರಾಮ್ ಪಾಲ್ ಅವರು 1.94 ಮೀ ಜಿಗಿದು ಐದನೇ ಸ್ಥಾನ ಗಳಿಸಿದರು. ಇದು ಅವರ ವೈಯಕ್ತಿಕ ಅತ್ಯುತ್ತಮ ಜಿಗಿತವಾಗಿದೆ. ಅಮೇರಿಕನ್ ರೋಡೆರಿಕ್ ಟೌನ್ಸೆಂಡ್ 2.15 ಮೀ ಜಿಗಿಯುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಇಂದು ನಡೆದ ಡಿಸ್ಕಸ್ ಥ್ರೋ ಎಫ್52 ಫೈನಲ್ ಪಂದ್ಯದಲ್ಲಿ ಭಾರತದ ವಿನೋದ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ.


ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌: ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ಭವಿನಾ ಪಟೇಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...