Homeಕರ್ನಾಟಕಪರಮ್‍ಗೆ ಮೊದಲೇ ಸಿಕ್ಕಿತ್ತೇ ಐಟಿ ದಾಳಿಯ ಸುಳಿವು...

ಪರಮ್‍ಗೆ ಮೊದಲೇ ಸಿಕ್ಕಿತ್ತೇ ಐಟಿ ದಾಳಿಯ ಸುಳಿವು…

- Advertisement -
- Advertisement -

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ತಮ್ಮ ಮೇಲಾಗುವ ಐಟಿ ರೈಡ್ ವಿಷಯ ಎರಡು ತಿಂಗಳಿಗೂ ಮೊದಲೇ ತಿಳಿದಿತ್ತು. ಅದಕ್ಕೆ ಅವರು ಹಿಂದೆ ಗೃಹ ಸಚಿವರಾಗಿದ್ದದ್ದೂ ಕಾರಣವಿರಬಹುದು. ಈ ವಿಷಯ ಗೊತ್ತಿದ್ದ ಕಾರಣ ಪರಮೇಶ್ವರ್ ತಮ್ಮ ಶಿಕ್ಷಣ ಸಂಸ್ಥೆಗಳ ಎಲ್ಲಾ ನೌಕರರು ಮತ್ತು ಸಿಬ್ಬಂದಿಗೆ ಚೆಕ್ ಮೂಲಕ ವೇತನ ಪಾವತಿಸಿದ್ದರು. ಒಂದು ವಾರ ಎಲ್ಲಿಗೂ ಹೋಗದೆ ಮನೆಯಲ್ಲೇ ಠಿಕಾಣಿ ಹೂಡಿ ತಮ್ಮೆಲ್ಲಾ ಸಂಸ್ಥೆಗಳ ನಿರ್ವಹಣೆಗೆ ಆಗುತ್ತಿರುವ ಖರ್ಚು-ವೆಚ್ಚಗಳ ಬಗ್ಗೆ ಪರಿಶೀಲನೆ ನಡೆಸಿದ್ದರು. ಸಂಸ್ಥೆಯ ಚಾರ್ಟರ್ಡ್ ಅಕೌಂಟೆಂಟ್‍ಗಳ ಸಮ್ಮುಖದಲ್ಲಿ ಪ್ರತಿಯೊಂದು ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು.

ಐಟಿ ರೈಡ್ ಆಗುವ ದಿನ ಅಂದರೆ ಅಕ್ಟೋಬರ್ 10ರಂದು ಮುಂಜಾನೆ ಎಂಟು ಗಂಟೆಗೆ ಕೊರಟಗೆರೆ ಕ್ಷೇತ್ರದ ಜಂಪೇನಹಳ್ಳಿ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪರಮೇಶ್ವರ್ ಸಿದ್ದಾರ್ಥನಗರದ ಮನೆಯಲ್ಲಿ ಇಲ್ಲ ಎಂಬುದು ಖಚಿತಪಡಿಸಿಕೊಂಡ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೇರ ಜಂಪೇನಹಳ್ಳಿಗೆ ಹೋದರು. ಅಲ್ಲಿಂದ ಕೊರಟಗೆರೆ ಐಬಿಯಲ್ಲಿ ವಿಚಾರಣೆ ನಡೆಸಿದ ಮೇಲೆ ಪರಮೇಶ್ವರ್ ಬೆಂಗಳೂರಿಗೆ ಹೋಗಿದ್ದು…

ಸಿದ್ದಾರ್ಥ ಶಿಕ್ಷಣ ಸಂಸ್ಥೆಯಡಿಯಲ್ಲಿ ಶಾಲಾ ಕಾಲೇಜುಗಳು, ಇಂಜಿನಿಯರ್, ವೈದ್ಯಕೀಯ ಕಾಲೇಜುಗಳ ಸೇರಿ 100ಕ್ಕೂ ಹೆಚ್ಚು ಸಂಸ್ಥೆಗಳಿವೆ. ಕರ್ನಾಟಕವಲ್ಲದೆ ಹೊರ ರಾಜ್ಯಗಳು ಮತ್ತು ಹೊರ ದೇಶದಲ್ಲೂ ಇವರ ಕಾಲೇಜುಗಳಿವೆ. ಇಷ್ಟೆಲ್ಲಾ ಸಂಸ್ಥೆಗಳ ವ್ಯವಹಾರ-ಹಣಕಾಸು ವಹಿವಾಟನ್ನು ಈ ಹಿಂದೆ ಪರಮೇಶ್ವರ್‍ರವರ ಸೋದರ ಡಾ.ಜಿ. ಶಿವಪ್ರಸಾದ್ ನೋಡಿಕೊಳ್ಳುತ್ತಿದ್ದರು. ಅವರು ಆಡಳಿತದ ಸಂಪೂರ್ಣ ಉಸ್ತುವಾರಿ ವಹಿಸಿದ್ದಾಗ ಎಲ್ಲಾ ಕಾಲೇಜುಗಳ ನಿರ್ವಹಣೆಯನ್ನು ನೋಡಿಕೊಳ್ಳುತ್ತಿದ್ದರು. ಪ್ರತಿ ವಾರಕ್ಕೊಮ್ಮೆ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ವ್ಯವಸ್ಥಾಪಕರನ್ನು ಕರೆಸಿ ಹಣಕಾಸಿನ ವಹಿವಾಟಿನ ಲೆಕ್ಕ ಪಡೆಯುತ್ತಿದ್ದರು. ಆಡಳಿತದ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಶಿವಪ್ರಸಾದ್ ತೀರಿಕೊಂಡ ಮೇಲೆಯೇ ಪರಮೇಶ್ವರ್ ಕಾಲೇಜು ಉಸ್ತುವಾರಿ ವಹಿಸಿಕೊಂಡಿದ್ದು..

2011ರಲ್ಲಿ ಮರಳೂರು ದಿಣ್ಣೆಯಲ್ಲಿ ನೂತನವಾಗಿ ನಿರ್ಮಿಸಿದ್ದ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ಉದ್ಘಾಟನೆಗೆ ಡಾ.ಜಿ.ಪರಮೇಶ್ವರ್ ಬಂದಿದ್ದರು. ಅದುವರೆಗೂ ಅವರು ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಆಡಳಿತದಲ್ಲಿ ತಲೆಹಾಕಿರಲಿಲ್ಲ. ಎಂಟು ವರ್ಷ ಕೆಪಿಸಿಸಿಯ ಸಾರಥ್ಯ ವಹಿಸಿದ್ದೇ ಇದಕ್ಕೆ ಪ್ರಮುಖ ಕಾರಣ. ರಾಜಕೀಯದಲ್ಲೇ ಹೆಚ್ಚು ತೊಡಗಿಸಿಕೊಂಡಿದ್ದ ಪರಮೇಶ್ವರ್ ಅಣ್ಣ ಶಿವಪ್ರಸಾದ್ ತೀರಿಕೊಂಡ ಮೇಲೆ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ಆದರೂ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳೇ ಎಲ್ಲವನ್ನೂ ನೋಡಿಕೊಂಡಿದ್ದರು. ನರಸಿಂಹಮೂರ್ತಿ, ವೈ.ಎಂ.ವಿ.ರೆಡ್ಡಿ ಆಡಳಿತಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟಿನಲ್ಲಿ ಈ ಎಲ್ಲಾ ಶಿಕ್ಷಣ ಸಂಸ್ಥೆಗಳ ಲಾಭ ಮಾತ್ರ ತೆಗೆದುಕೊಳ್ಳುತ್ತಿದ್ದ ಪರಮೇಶ್ವರ್ ಅದರ ಬಗ್ಗೆ ಎಚ್ಚರ ವಹಿಸದಿದ್ದುದರ ಪರಿಣಾಮವನ್ನು ಈಗ ಐಟಿ ದಾಳಿಯಲ್ಲಿ ಅನುಭವಿಸಬೇಕಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್‍ಪಿ ಮತ್ತು ಪ್ರತಿಪಕ್ಷದ ನಾಯಕರಾಗಿ ನೇಮಕಗೊಂಡರು. ಇದರಿಂದ ಪರಮೇಶ್ವರ್ ಬೇಸರಗೊಂಡಿದ್ದರು. ಹೀಗಾಗಿಯೇ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಿ ನೇಮಕಗೊಂಡ ಎರಡು ದಿನಗಳಲ್ಲೇ ಪರಮೇಶ್ವರ್ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ದೆಹಲಿಗೆ ಕರೆಸಿಕೊಂಡರು. ಅದಾಗಲೇ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿತ್ತು. ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಸಂಪೂರ್ಣ ಖರ್ಚು ವೆಚ್ಚ ನಿಭಾಯಿಸಿದ್ದ ಪರಮೇಶ್ವರ್ ಹೆಗಲಿಗೆ ಮಹಾರಾಷ್ಟ್ರ ಚುನಾವಣೆಯ ಜವಾಬ್ದಾರಿ ವಹಿಸಿದರು. ಹಾಗಾಗಿಯೇ ಪರಮೇಶ್ವರ್‍ರವರನ್ನು ದಿಕ್ಕುತಪ್ಪಿಸಲು ದುರುದ್ದೇಶಪೂರ್ವಕವಾಗಿ, ದ್ವೇಷದಿಂದ ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ವಿರುದ್ಧ ಕೇಂದ್ರದ ನಿಯಂತ್ರಣದಲ್ಲಿರುವ ಐಟಿ ದಾಳಿ ನಡೆಸಿದೆ ಎಂದು ಕೂಡ ವಿಶ್ಲೇಷಿಸಲಾಗುತ್ತಿದೆ.

ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳು ಇವೆ. ಅಲ್ಲೇನು ಕಡಿಮೆ ಶುಲ್ಕ ತೆಗೆದುಕೊಳ್ಳುತ್ತಾರೆಯೇ? ಬಿಜೆಪಿ ಮುಖಂಡ ಪ್ರಭಾಕರ್ ಕೋರೆ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್, ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ, ಬಿಜೆಪಿ ಬೆಂಬಲಿತ ಮೋಹನ್ ಆಳ್ವಾ ಮತ್ತು ಮಠಗಳಿಗೆ ಸೇರಿದ ಸಂಸ್ಥೆಗಳು, ಹೀಗೆ ಹಲವು ಮುಖಂಡರ ಕಾಲೇಜುಗಳು ಇವೆ. ಅವರ ಕಾಲೇಜುಗಳಲ್ಲಿ ಕೋಟಿ ಕೋಟಿ ಶುಲ್ಕ ಪಡೆಯುತ್ತಿಲ್ಲವೇ? ಎಂಬ ಪ್ರಶ್ನೆಗಳು ಸಹ ಎದ್ದಿವೆ.

ಎಲ್‍ಕೆಜಿ, ಯುಕೆಜಿ ಪ್ರವೇಶಕ್ಕೆ ಹೋಬಳಿ ಮಟ್ಟದಲ್ಲಿ 20 ಸಾವಿರ, ಜಿಲ್ಲಾ ಮಟ್ಟದಲ್ಲಿ 1 ಲಕ್ಷ, ಬೆಂಗಳೂರು ರಾಜಧಾನಿಯಲ್ಲಿ 2 ಲಕ್ಷ, ವಸತಿ ಶಾಲೆಗಳಲ್ಲಿ 5 ಲಕ್ಷ, ಆಳ್ವಾಸ್ ಕಾಲೇಜುಗಳಲ್ಲಿ 1 ಲಕ್ಷ ಶುಲ್ಕ ಪಡೆಯಲಾಗುತ್ತಿದೆ. ವೈದ್ಯಕೀಯ ಕಾಲೇಜುಗಳಲ್ಲಿ ಹೊರ ರಾಜ್ಯದವರಿಗೆ ಆದರೆ 2 ಕೋಟಿ ರೂಪಾಯಿಯಿಂದ 5 ಕೋಟಿ ಪಡೆಯುತ್ತಾರೆ. ಇದು ಎಲ್ಲರಿಗೂ ಗೊತ್ತಿರುವ ಹಗಲು ರಹಸ್ಯ. ಪ್ರಬಲ ಜಾತಿಗಳಾದ ಲಿಂಗಾಯತ, ಒಕ್ಕಲಿಗ ಶಿಕ್ಷಣ ಸಂಸ್ಥೆಗಳಲ್ಲಿ ಅವ್ಯವಹಾರ ನಡೆಯುತ್ತಿಲ್ಲವೇ, ಅವುಗಳ ಮೇಲೆ ತಾಕತ್ತಿದ್ದರೆ ಐಟಿ ದಾಳಿ ಮಾಡಲಿ ಎಂಬ ವಾದವೂ ಇದೇ ಸಂದರ್ಭದಲ್ಲಿ ಮುನ್ನೆಲೆಗೆ ಬಂದಿದೆ.

ಇನ್ನು ಆದಾಯ ತೆರಿಗೆ ಅಧಿಕಾರಿಗಳ ಮುಂದೆ ಅಕ್ಟೋಬರ್ 15ರಂದು ಪರಮೇಶ್ವರ್‌ ಹಾಜರಾಗಿದ್ದಾರೆ. ಐಟಿ ಅಧಿಕಾರಿಗಳು ಅವರನ್ನು ಪ್ರಶ್ನೆ ಮಾಡಿದ್ದೇ ತಡ ನನಗೆ ಮೂರ್ನಾಲ್ಕು ದಿನ ಸಮಯಕೊಡಿ ಎಂದ ಪರಂ ಬೇಡಿಕೆಗೆ ಐಟಿ ಅಧಿಕಾರಿಗಳು ಮರುಮಾತಿಲ್ಲದೇ ಒಪ್ಪಿಕೊಂಡಿದ್ದಾರೆ. ತನಿಖೆಯ ನಂತರ ಮಾಧ್ಯಮಗಳ ಜೊತೆ ಮಾತಾಡಿದ ಅವರು `ನನ್ನ ಸೆಕ್ರಟರಿ ರಮೇಶ್ ಸಾವಿನ ಕುರಿತು ಸಮರ್ಪಕ ತನಿಖೆಯಾಗಬೇಕು. ಏಕೆಂದರೆ ಕೆಲವು ಮಾಧ್ಯಮಗಳು ನಾನೇ ಕೊಲೆ ಮಾಡಿಸಿದ್ದೇನೆ, ನನ್ನ ಸ್ನೇಹಿತರು ಕೊಲೆ ಮಾಡಿಸಿದ್ದಾರೆ ಎಂದೆಲ್ಲಾ ಬಿತ್ತರಿಸಿದ್ದಾರೆ. ಇದಕ್ಕೆ ಉತ್ತರ ಸಿಗಬೇಕಾದರೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿ ಪತ್ರಬರೆಯುತ್ತೇನೆ’ ಎಂದು ಪರಂ ಹೇಳಿದ್ದಾರೆ. ಒಟ್ಟಾರೆ ಅವರ ಮಾತಿನಲ್ಲಿ ಗತ್ತಿದೆಯೇ ಹೊರತು ಯಾವ ಭಯವೂ ಇಲ್ಲ..

ಐಟಿಯನ್ನೇ ಅಳುಕಿಸಿತಾ ರಮೇಶ್ ಸಾವು?
ಒಂದು ಕಡೆ ನಾಲ್ಕು ಕೋಟಿ ಹಣ ಸಿಕ್ಕಿದೆ, ಇನ್ನೊಂದು ಕಡೆ ಅವರ ಆಪ್ತ ಸಹಾಯಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಲ್ಲಿ ಐಟಿಯೂ ಸಿಕ್ಕಿಬಿದ್ದಿದೆ. ಮೊದಲಿಗೆ ಪರಂ ಪಿಎ ರಮೇಶ್ ಆತ್ಮಹತ್ಯೆ ಮಾಡಿಕೊಂಡಾಗ ಐಟಿ ಅಧಿಕಾರಿಗಳು `ನಾವು ಮನೆಗೆ ಹೋಗಿಲ್ಲ, ಅವರನ್ನು ವಿಚಾರಣೆ ನಡೆಸಿಲ್ಲ’ ಎಂದು ಹೇಳಿಕೆ ನೀಡಿ ಜಾರಿಕೊಳ್ಳಲು ಪ್ರಯತ್ನಿಸಿದರು. ಆದರೆ ಆರು ಜನರ ತಂಡ ಅವರ ಮನೆಗೆ ಹೋಗಿ ವಿಚಾರಣೆ ನಡೆಸಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವಾದ್ದರಿಂದ ರಮೇಶ್ ಸಾವು ಐಟಿಯವರನ್ನೇ ಅಳುಕಿಸಿದೆ.
ಮೂರು ತಿಂಗಳ ಹಿಂದೆಯಷ್ಟೇ ಎಸ್‍ಎಂ ಕೃಷ್ಣರ ಅಳಿಯ ಸಿದ್ಧಾರ್ಥ್ ಇದೇ ಐಟಿ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡು ದೇಶವ್ಯಾಪಿ ಸುದ್ದಿಯಾಗಿದ್ದರ ಹಿನ್ನೆಲೆಯಲ್ಲಿ ರಮೇಶ್ ಸಾವು ಸಹ ಸಂಭವಿಸಿರುವುದರಿಂದ ಐಟಿ ಕಾದು ನೋಡುವ ತಂತ್ರ ಅನುಸರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...