Homeಕರ್ನಾಟಕಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ...

ಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ ಹೊಡೆಯಲಾಗಿದೆ ಎಂದ ಹೈಕೋರ್ಟ್‌

- Advertisement -
- Advertisement -

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕಂಚಿನ ಪರಶುರಾಮ ಪ್ರತಿಮೆಗೆ ಬದಲಾಗಿ ಹಿತ್ತಾಳೆ, ತಾಮ್ರ ಮತ್ತು ಸತು ಬಳಸಿ ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌, ಜನರ ಹಣವನ್ನು ಲೂಟಿ ಮಾಡಲಾಗಿದೆ ಎಂದು ಕಿಡಿಕಾರಿದೆ.

ಬೆಂಗಳೂರಿನ ಸರ್. ಎಂ ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಯಾಗಿರುವ ಕಲಾವಿದ ಕೃಷ್ಣ ನಾಯಕ್‌ ಅವರು ತಮ್ಮ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ಖಚಿತಪಡಿಸಿರು ಪೀಠ, “ನಿಮಗೆ ಕೊಟ್ಟಿರುವುದು ನಿರ್ಮಿತಿ ಕೇಂದ್ರ ಅಥವಾ ದೂರುದಾರರಿಗೆ ಸೇರಿದ ದುಡ್ಡಲ್ಲ, ಅದು ಜನರ ದುಡ್ಡು. ನೀವು ಜನರ ಹಣದಲ್ಲಿ ಆಟವಾಡಲಾಗದು” ಎಂದು ಖಾರವಾಗಿ ನುಡಿದಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

“ಪ್ರತಿಮೆಗೆ ಕಂಚು ಬಳಸುವ ಬದಲು ಹಿತ್ತಾಳೆ ಮತ್ತು ಸತುವನ್ನೇಕೆ ಬಳಸಲಾಗಿದೆ? ಪ್ರತಿಮೆ ಹೆಸರಿನಲ್ಲಿ ಕಳಪೆ ಕಾಮಗಾರಿ ನಡೆಸಿ ಸಾರ್ವಜನಿಕರ ಹಣವನ್ನು ಲೂಟಿ ಮಾಡಲಾಗಿದೆ. 1.83 ಕೋಟಿ ರೂಪಾಯಿ ಪೈಕಿ ಈಗಾಗಲೇ ನಿಮಗೆ 1.20 ಕೋಟಿ ರೂಪಾಯಿ ಪಾವತಿಯಾಗಿದೆ. ಇದು ಸಾರ್ವಜನಿಕರ ಹಣ. ಎಲ್ಲವೂ ದಾಖಲೆಯಲ್ಲಿರುವುದರಿಂದ ಯಾವುದೇ ಸೂಚನೆ ಪಡೆಯುವ ಅಗತ್ಯವೇ ಇಲ್ಲ. ಜನರ ಹಣದ ಜೊತೆ ಆಟ ಆಡುವವರನ್ನು ಬಿಡಲಾಗದು. ಪುಣ್ಯಕ್ಕೆ ಪ್ರತಿಮೆ ಮಾರನೇಯ ದಿನ ಕುಸಿದಿಲ್ಲ. ಅದು ಬೀಳುವ ಮುಂಚೆಯೇ ತೆರವು ಮಾಡಲಾಗಿದೆ” ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಅರ್ಜಿದಾರರ ವಿರುದ್ಧ ಮೌಖಿಕವಾಗಿ ಕಿಡಿಕಾರಿದ್ದಾರೆ

“35 ಅಡಿ ಎತ್ತರದ ಪ್ರತಿಮೆಯ ಭಾರವನ್ನು ಹಿತ್ತಾಳೆ ಮತ್ತು ಸತು ತಾಳುತ್ತದೆಯೇ? ಪ್ರತಿಮೆಗೆ ಕಂಚನ್ನೇ ಬಳಸಬೇಕು ಎಂದು ಹೇಳಿರುವುದಕ್ಕೆ ನಿಖರ ಕಾರಣವಿದೆ. ಹಿತ್ತಾಳೆ ಮತ್ತು ಸತು ಬಳಸಿ ಪ್ರತಿಮೆ ನಿರ್ಮಿಸಲು 1.20 ಕೋಟಿ ರೂಪಾಯಿ ಏಕೆ ಪಡೆದಿರಿ? ಕಂಚು ಬಳಕೆ ಮಾಡದಿರುವುದು ಕ್ರಿಮಿನಲ್‌ ಅಪರಾಧ. ನಿರ್ಮಿತಿ ಕೇಂದ್ರದ ಬಗ್ಗೆ ಚೆನ್ನಾಗಿ ತಿಳಿದಿದೆ. ಅದರ ಬಗ್ಗೆ ಕಡಿಮೆ ಮಾತನಾಡಿದಷ್ಟು ಒಳ್ಳೆಯದು” ಎಂದು ಹೈಕೋರ್ಟ್ ಚಾಟಿ ಬೀಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ “ಪರಶುರಾಮ ಪ್ರತಿಮೆ ತಲೆಯ ಭಾಗ ಭಾರ ತಾಳಲಾರದ್ದರಿಂದ ಅದರ ಜೋಡಣೆ ಬದಲಿಸಲಾಗಿದೆ. ಕಂಚಿನಲ್ಲಿ ಪ್ರತಿಮೆ ನಿರ್ಮಿಸಬೇಕು ಎಂದು ಹೇಳಿದ್ದು, ನಾವು ತಾಮ್ರ, ಸತು ಮತ್ತು ಹಿತ್ತಾಳೆಯನ್ನು ಬಳಕೆ ಮಾಡಿದ್ದೇವೆ. ಸತು ಮತ್ತು ಹಿತ್ತಾಳೆಯು ಕಂಚಿಗೆ ಸಮನಾಗುತ್ತದೆ” ಎಂದು ಸಮಜಾಯಿಷಿ ನೀಡಿದ್ದಾರೆ.

“ಕೆಲಸದ ಭಾಗವಾಗಿ 1.20 ಕೋಟಿ ರೂಪಾಯಿ ಸ್ವೀಕರಿಸಿದ್ದೇವೆ. ನಮ್ಮ ಕೆಲಸವನ್ನು ಪೂರ್ಣಗೊಳಿಸುತ್ತೇವೆ. ಆಮೇಲೆ ಅದನ್ನು ಪರಿಶೀಲಿಸಬಹುದು. ಪರಶುರಾಮ ಥೀಮ್‌ ಪಾರ್ಕ್‌ನಲ್ಲಿ ಪರಶುರಾಮ ಪ್ರತಿಮೆ ನಿರ್ಮಾಣವೂ ಒಂದಾಗಿತ್ತು. ಉದ್ಘಾಟನೆಯ ಹಿನ್ನೆಲೆಯಲ್ಲಿ ಬೇಗ ಮಾಡಿ ಮುಗಿಸಲಾಗಿತ್ತು. ಆನಂತರ ಜಿಲ್ಲಾಧಿಕಾರಿಯು ಅದನ್ನು ಪುನರ್‌ ನಿರ್ಮಾಣ ಮಾಡುವಂತೆ ಸೂಚಿಸಿದ್ದಾರೆ. ಈಗ ಸರ್ಕಾರ ಇಡೀ ಪ್ರಕರಣವನ್ನು ತನಿಖೆಗೆ ಒಪ್ಪಿಸಿದ್ದರಿಂದ ಅಲ್ಲಿಗೆ ತೆರಳಿ ಕೆಲಸ ಮಾಡಲಾಗುತ್ತಿಲ್ಲ. ಅವಕಾಶ ನೀಡಿದರೆ ಕಂಚಿನಲ್ಲೇ ಕಾಲಮಿತಿಯಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು” ಎಂದಿದ್ದಾರೆ.

“ದೂರುದಾರರು ರಾಜಕೀಯ ಪಕ್ಷದ ಪ್ರತಿನಿಧಿ. ಅವರು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸದೇ ಹೈಕೋರ್ಟ್‌ನ ವಿಭಾಗೀಯ ಪೀಠವು ವಜಾ ಮಾಡಿದೆ. ಹಿಂದಿನ ಸರ್ಕಾರ ಮತ್ತು ಮಾಜಿ ಸಚಿವರ ವರ್ಚಸ್ಸು ಹಾಳು ಮಾಡುವ ಉದ್ದೇಶದಿಂದ ಈ ಕೆಲಸ ಮಾಡಲಾಗುತ್ತಿದೆ. ದೂರುದಾರರು ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ವಿರುದ್ಧ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ. ಹಾಗಾಗಿ, ಈ ರೀತಿ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ, ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿ) ನೀಡಿರುವ ವರದಿಯ ಪ್ರಕಾರ ಅರ್ಜಿದಾರರು ಪರಶುರಾಮ ಪ್ರತಿಮೆಗೆ ಕಂಚು ಬಳಸಿಲ್ಲ. ಶೇ. 80ರಷ್ಟು ಹಿತ್ತಾಳೆ ಮತ್ತು ಶೇ.20ರಷ್ಟು ಸತು ಬಳಕೆ ಮಾಡಿದ್ದಾರೆ ಎಂದು ವರದಿ ನೀಡಿದೆ. ಆದರೆ, ನಿರ್ಮಿತಿ ಕೇಂದ್ರ ಮತ್ತು ಅರ್ಜಿದಾರರು ಕಂಚು ಬಳಕೆ ಮಾಡಿದೆ ಎಂದು ಹೇಳಿದೆ. ನಿರ್ಮಿತಿ ಕೇಂದ್ರ ಹೇಳುತ್ತಿರುವುದನ್ನು ನೋಡಿದರೆ ಇನ್ನಷ್ಟು ತನಿಖೆಯಾಗಬೇಕಿದೆ. ಜಿಲ್ಲಾಧಿಕಾರಿ ಪ್ರತಿಮೆ ತೆರವು ಮಾಡಿ ಎಂದು ಆದೇಶ ಮಾಡಿದ್ದಾರೆ. ಈ ಆದೇಶವನ್ನು ನಿರ್ಮಿತಿ ಕೇಂದ್ರವು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ತನಿಖೆ ಪ್ರಗತಿಯಲ್ಲಿರುವುದರಿಂದ ತೆರವು ಮಾಡುವಂತೆ ಆದೇಶಿಸಿದ್ದನ್ನು ತಡೆಯಿರಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ತನಿಖೆ ನಡೆಯಲಿ, ಅರ್ಜಿದಾರರಿಗೂ ಹಣ ತಲುಪಿದೆಯೋ ಗೊತ್ತಿಲ್ಲ. ಅವರ ಪಾತ್ರವೂ ಬಹಿರಂಗವಾಗಬೇಕಿದೆ. ಇದರಲ್ಲಿ ನಿಜವಾದ ಅಪರಾಧಿ ಯಾರು ಎಂಬುವುದು ತಿಳಿಯಬೇಕಿದೆ” ಎಂದಿದ್ದಾರೆ.

ಇದನ್ನೂ ಓದಿ : ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ : ‘ಕರಾಳ ದಿನ’ ಆಚರಣೆಗೆ ಕರವೇ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...