Homeಮುಖಪುಟಸಿಬಿಐ ಆರೋಪಪಟ್ಟಿ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಲಯಾರ್ ಬಾಲಕಿಯರ ಪೋಷಕರು

ಸಿಬಿಐ ಆರೋಪಪಟ್ಟಿ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್ ಮೊರೆ ಹೋದ ವಲಯಾರ್ ಬಾಲಕಿಯರ ಪೋಷಕರು

- Advertisement -
- Advertisement -

ಕೇಂದ್ರ ತನಿಖಾ ದಳ (ಸಿಬಿಐ) ತಮ್ಮ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ, ವಲಯಾರ್‌ನಲ್ಲಿ ಮೃತಪಟ್ಟ ಬಾಲಕಿಯರ ಪೋಷಕರು ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಬಾಲಕಿಯರ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆಯೂ ಅವರು ನ್ಯಾಯಾಲಯವನ್ನು ಕೋರಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ಕೋರಿ ನ್ಯಾಯಾಲಯ ಸಿಬಿಐಗೆ ನೋಟಿಸ್ ನೀಡಿದೆ.

ಸಿಬಿಐ ನಡೆಸಿದ ಹೆಚ್ಚಿನ ತನಿಖೆಯಲ್ಲಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಪಕ್ಷಪಾತದ ಮತ್ತು ಕೇವಲ ಬಾಹ್ಯ ಪರಿಗಣನೆಯ ತನಿಖೆ ನಡೆಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಸಿಬಿಐಗೆ ಸ್ಪಷ್ಟತೆಯಿಲ್ಲ ಎಂದು ಹೇಳಿದ್ದಾರೆ.

ಆರೋಪಿಗಳಾದ ಪ್ರದೀಪ್, ಮಧು ಅಲಿಯಾಸ್ ಕುಟ್ಟಿ ಮಧು ಮತ್ತು ಶಂಕಿತ ಜಾನ್ ಪ್ರವೀಣ್ ಅವರ ಅನುಮಾನಾಸ್ಪದ ಸಾವಿನ ಬಗ್ಗೆಯೂ ಯಾವುದೇ ತನಿಖೆ ನಡೆದಿಲ್ಲ ಎಂದು ಪೋಷಕರು ಹೇಳಿದ್ದಾರೆ.

ಜಾನ್ ಪ್ರವೀಣ್ ಅವರ ಮರಣೋತ್ತರ ಪರೀಕ್ಷೆಯಲ್ಲಿ ದೇಹದ ಪ್ರಮುಖ ಭಾಗಗಳಲ್ಲಿ ಗಂಭೀರವಾದ ಗಾಯಗಳು ಕಂಡುಬಂದಿವೆ, ಅದರಲ್ಲಿ ಛೇದಿತ ಗಾಯಗಳೂ ಸೇರಿವೆ ಎಂದಿದ್ದಾರೆ.

ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ, ತಾರ್ಕಿಕ ಆಧಾರದ ಮೇಲೆ ಅಲ್ಲ. ಕೆಲವು ಸಾಕ್ಷಿಗಳ ಹೇಳಿಕೆಗಳು ವಿಶ್ವಾಸಾರ್ಹತೆ ಇಲ್ಲದ ಕಾರಣ, ತನಿಖಾಧಿಕಾರಿಯು ಅರ್ಜಿದಾರೇ ಅಪರಾಧಗಳು ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಅರ್ಜಿದಾರರು ಮತ್ತು ಆರೋಪಿಗಳ ನಡುವೆ ಸಂಬಂಧ ಕಲ್ಪಿಸಲಾಗಿದೆ. ಸಿಬಿಐ ಈ ಘೋರ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಿ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ತನಿಖೆ ವೇಳೆ ಕೆಲವೊಂದು ಅಂಶಗಳನ್ನು ಉಲ್ಲೇಖಿಸಿದೆ ಎಂದು ಹೇಳಿದ್ದಾರೆ.

ಏನಿದು ವಲಯಾರ್ ಸಹೋದರಿಯರ ಸಾವು?

ಕೇರಳದ ಪಾಲಕ್ಕಾಡ್ ಜಿಲ್ಲೆಯ ವಲಯಾರ್ ಪ್ರದೇಶದ 13 ಮತ್ತು 9 ವರ್ಷದ ಇಬ್ಬರು ಆದಿವಾಸಿ ಸಹೋದರಿಯರ ಅನುಮಾನಾಸ್ಪದ ಸಾವು ಪ್ರಕರಣವನ್ನು ‘ವಲಯಾರ್ ಸಹೋದರಿಯರ ಸಾವು’ ಎಂದು ಹೇಳಲಾಗುತ್ತದೆ.

ಈ ಪ್ರಕರಣದಲ್ಲಿ 13 ವರ್ಷದ ಬಾಲಕಿ ಜನವರಿ 13, 2017 ರಂದು ಆಕೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಇದಾಗಿ ಎರಡು ತಿಂಗಳ ಬಳಿಕ, ಅಂದರೆ ಮಾರ್ಚ್ 14ರಂದು 9 ವರ್ಷದ ಆಕೆಯ ತಂಗಿ ಕೂಡ ಅದೇ ಜಾಗದಲ್ಲಿ, ಅದೇ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

ಶವಪರೀಕ್ಷೆಯ ವರದಿಗಳು ಇಬ್ಬರೂ ಹುಡುಗಿಯರು ಸಾಯುವ ಮುನ್ನ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ದೃಢಪಡಿಸಿತ್ತು. ಈ ವಿಷಯ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು ಮತ್ತು ಬಾಲಕಿಯರಿಗೆ ನ್ಯಾಯಕ್ಕಾಗಿ ವ್ಯಾಪಕ ಪ್ರತಿಭಟನೆಗಳು ನಡೆದಿತ್ತು.

ಆರಂಭದಲ್ಲಿ, ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸಿ, ದೀರ್ಘಕಾಲದ ಲೈಂಗಿಕ ದೌರ್ಜನ್ಯವನ್ನು ಸಹಿಸಿಕೊಂಡ ನಂತರ ಹುಡುಗಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದರು.

ಒಬ್ಬ ಬಾಲಾಪರಾಧಿ ಸೇರಿದಂತೆ ಐವರ ಮೇಲೆ ಮೇಲೆ ಭಾರತೀಯ ದಂಡ ಸಂಹಿತೆ (ಐಪಿಸಿ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊರಿಸಿದ್ದರು.

ಆದಾಗ್ಯೂ, 2019 ರಲ್ಲಿ, ಪಾಲಕ್ಕಾಡ್‌ನ ವಿಶೇಷ ಪೋಕ್ಸೊ ನ್ಯಾಯಾಲಯವು ಸಾಕಷ್ಟು ಸಾಕ್ಷ್ಯಗಳು ಇಲ್ಲ ಎಂದು ಉಲ್ಲೇಖಿಸಿ, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದು ಸಾರ್ವಜನಿಕರಲ್ಲಿ ಮತ್ತೆ ಆಕ್ರೋಶ ಭುಗಿಲೇಳುವಂತೆ ಮಾಡಿತ್ತು.

ಸಾರ್ವಜನಿಕರ ಆಕ್ರೋಶ, ಸಂತ್ರಸ್ತ ಬಾಲಕಿಯರ ತಾಯಿ ಮತ್ತು ಕೇರಳ ಸರ್ಕಾರದ ಮೇಲ್ಮನವಿಗಳ ಕಾರಣ, ಕೇರಳ ಹೈಕೋರ್ಟ್ ಪ್ರಕರಣದಲ್ಲಿ ಮಧ್ಯಪ್ರವೇಶಿಸಿತ್ತು. ಜನವರಿ 2021ರಲ್ಲಿ, ಪ್ರಕರಣದ ಮರುವಿಚಾರಣೆಗೆ ಆದೇಶಿಸಿತ್ತು. ನಂತರ ಮಾರ್ಚ್ 2021ರಲ್ಲಿ, ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಯನ್ನು ವಹಿಸಿಕೊಳ್ಳುವಂತೆ ನಿರ್ದೇಶಿಸಿತ್ತು.

ಸಿಬಿಐನ ಆರಂಭಿಕ ತನಿಖೆಯು ಪೊಲೀಸರು ಹೇಳಿದ್ದನ್ನೇ ಹೇಳಿತ್ತು. ಡಿಸೆಂಬರ್ 2021ರಲ್ಲಿ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ಹುಡುಗಿಯರು ದೀರ್ಘಕಾಲದ ಲೈಂಗಿಕ ದೌರ್ಜನ್ಯ ಎದುರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿತ್ತು. ಆದಾಗ್ಯೂ, ಸಂತ್ರಸ್ತರ ತಾಯಿ ಇದನ್ನು ಪ್ರಶ್ನಿಸಿದ್ದರು. ಕೊಲೆ ಆರೋಪ ಮಾಡಿದ್ದರು. ಆಗಸ್ಟ್ 2022ರಲ್ಲಿ, ಪಾಲಕ್ಕಾಡ್ ಪೋಕ್ಸೊ ನ್ಯಾಯಾಲಯ ಸಿಬಿಐನ ಆರೋಪಪಟ್ಟಿಯನ್ನು ತಿರಸ್ಕರಿಸಿ, ಮರುತನಿಖೆಗೆ ಆದೇಶಿಸಿತ್ತು.

ಪ್ರಕರಣದ ಪ್ರಸ್ತುತ ಸ್ಥಿತಿ (ಮಾರ್ಚ್ 25, 2025 ರಂತೆ) 

ಜನವರಿ 2025 : ಸಿಬಿಐ ಪೂರಕ ಆರೋಪಪಟ್ಟಿ ಸಲ್ಲಿಸಿತ್ತು. ಗಮನಾರ್ಹವಾಗಿ ಬಾಲಕಿಯರ ಪೋಷಕರನ್ನೇ ಆರೋಪಿಗಳೆಂದು ಹೆಸರಿಸಿತ್ತು. ಅವರ ಮೇಲೆ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಮತ್ತು ಲೈಂಗಿಕ ದೌರ್ಜನ್ಯಗಳನ್ನು ಮರೆಮಾಚಿದ ಆರೋಪ ಹೊರಿಸಿ ಎರ್ನಾಕುಲಂನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು. ನಂತರ ಸಿಬಿಐ ಕೋರಿಕೆಯ ಮೇರೆಗೆ ಪ್ರಕರಣವನ್ನು 2024ರಲ್ಲಿ ಪಾಲಕ್ಕಾಡ್ ಪೋಕ್ಸೊ ನ್ಯಾಯಾಲಯದಿಂದ ವರ್ಗಾಯಿಸಲಾಯಿತು.

ಫೆಬ್ರವರಿ 2025 : ಸಿಬಿಐನ ಹಿಂದಿನ ತನಿಖಾ ವರದಿಯು ಬಾಲಕಿಯರ ಸಾವು ಆತ್ಮಹತ್ಯೆ ಎಂಬುವುದನ್ನು ಸಮರ್ಥಿಸಿಕೊಂಡಿತ್ತು. ಬಾಲಕಿಯರ ಶವ ದೊರೆತ ಸ್ಥಳದ ಪರಿಶೀಲನೆ ಮತ್ತು ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಕೊಲೆ ಆರೋಪ ತಳ್ಳಿಹಾಕಿತ್ತು. ವೈದ್ಯಕೀಯ ಮಂಡಳಿ ಮತ್ತು ವಿಧಿವಿಜ್ಞಾನ ತಜ್ಞರು ಇದನ್ನು ಬೆಂಬಲಿಸಿದ್ದರು. ಆದಾಗ್ಯೂ, ಈ ವರದಿಯನ್ನು ಬಾಲಕಿಯ ಪೋಷಕರು ಮತ್ತು ಹೋರಾಟಗಾರರು ವಿರೋಧಿಸಿದ್ದಾರೆ.

ಪ್ರಸ್ತುತ ಪ್ರಕರಣವು ಎರ್ನಾಕುಲಂನ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಪೋಷಕರನ್ನು ಆರೋಪಿಗಳಾಗಿ ಹೆಸರಿಸಿರುವುದು ಪ್ರಕರಣದ ಸಂಕೀರ್ಣತೆಯನ್ನು ಹೆಚ್ಚಿಸಿದೆ ಮತ್ತು 2022ರಲ್ಲಿ ಆದೇಶಿಸಲಾದ ಮರುತನಿಖೆ ಇನ್ನೂ ಪ್ರಗತಿಯಲ್ಲಿದೆ.

ಸಂತ್ರಸ್ತರ ತಾಯಿ ಸೇರಿದಂತೆ ನ್ಯಾಯಕ್ಕಾಗಿ ಹೋರಾಡುತ್ತಿರುವ ‘ವಲಯಾರ್ ನೀದಿ ಸಮರ ಸಮಿದಿ’ 2019 ಮತ್ತು 2023 ರ ನಡುವೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವ್ಯಕ್ತಿಗಳ (ಇಬ್ಬರು ಆರೋಪಿಗಳು ಮತ್ತು ಒಬ್ಬ ಶಂಕಿತ) ಅನುಮಾನಾಸ್ಪದ ಸಾವುಗಳನ್ನು ಗಮನದಲ್ಲಿಟ್ಟುಕೊಂಡು, ಸಮಗ್ರ ತನಿಖೆಗೆ ಒತ್ತಾಯಿಸುತ್ತಲೇ ಇದೆ. ಇವರೆಲ್ಲರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.

ಇಂದಿನವರೆಗೆ, ಅಂದರೆ ಮಾರ್ಚ್ 25, 2025ರವರೆಗೂ ಈ ಪ್ರಕರಣ ಇತ್ಯರ್ಥವಾಗದೆ ಉಳಿದಿದೆ. ಸಿಬಿಐನ ಮರುತನಿಖೆ ಮುಂದುವರೆದಿದ್ದು, ನ್ಯಾಯಾಲಯ ಇನ್ನೂ ಅಂತಿಮ ತೀರ್ಪು ನೀಡಿಲ್ಲ. ವ್ಯವಸ್ಥಿತ ವೈಫಲ್ಯಗಳು ಮತ್ತು ಮುಚ್ಚಿಹಾಕುವಿಕೆಯ ಆರೋಪಗಳ ನಡುವೆಯೂ, ಪ್ರಕರಣದ ಸತ್ಯ ಬಹಿರಂಗವಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಜನರು ಆಗ್ರಹಿಸುತ್ತಲೇ ಇದ್ದಾರೆ.

‘ಭೂ ಜಿಹಾದ್’ ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...