Homeಅಂತರಾಷ್ಟ್ರೀಯನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು

ನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು

- Advertisement -
- Advertisement -

ನಾಪತ್ತೆಯಾದ 20 ವರ್ಷದ ಭಾರತೀಯ ವಿದ್ಯಾರ್ಥಿನಿ ಸುದೀಕ್ಷಾ ಕೊನಾಂಕಿ ಮೃತಪಟ್ಟಿದ್ದಾರೆಂದು ಘೋಷಿಸುವಂತೆ ಆಕೆಯ ಪೋಷಕರು ಡೊಮಿನಿಕನ್ ರಿಪಬ್ಲಿಕ್‌ನ ಪೊಲೀಸರನ್ನು ಕೋರಿದ್ದಾರೆ ಎಂದು ಅಮೆರಿಕದ ಮಾಧ್ಯಮ ವರದಿಗಳು ತಿಳಿಸಿವೆ.

ಭಾರತದ ಪ್ರಜೆ ಹಾಗೂ ಅಮೆರಿಕದ ಖಾಯಂ ನಿವಾಸಿಯಾಗಿರುವ ಸುದೀಕ್ಷಾ ಅವರು ಮಾರ್ಚ್ 6ರಂದು ಪಂಟಾ ಕಾನಾ ಪಟ್ಟಣದ ರಿಯು ರಿಪಬ್ಲಿಕ್ ರೆಸಾರ್ಟ್‌ನಲ್ಲಿ ಕಡೆಯದಾಗಿ ಕಾಣಿಸಿಕೊಂಡಿದ್ದರು. ನಂತರ ಡೊಮಿನಿಕನ್ ರಿಪಬ್ಲಿಕ್‌ಗೆ ರಜಾದಿನ ಕಳೆಯಲು ತೆರಳಿದ ಆಕೆ ಕಾಣೆಯಾಗಿದ್ದಾರೆ. ವ್ಯಾಪಕ ಹುಡುಕಾಟದ ಹೊರತಾಗಿಯೂ, ಆಕೆ ಪತ್ತೆಯಾಗಿಲ್ಲ ಎನ್ನಲಾಗಿದೆ.

ಕೆರಿಬಿಯನ್ ದೇಶವಾದ ಡೊಮಿನಿಕನ್ ರಿಪಬ್ಲಿಕ್ ಮತ್ತು ಅಮೆರಿಕದ ಫೆಡರಲ್ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳು ಸುದೀಕ್ಷಾ ಅವರ ನಾಪತ್ತೆ ಕುರಿತು ತನಿಖೆ ಕೈಗೊಂಡಿದ್ದಾರೆ.

ಸುದೀಕ್ಷಾ ಸಾವನ್ನಪ್ಪಿದ್ದಾಗಿ ಘೋಷಿಸಲು ಕೋರಿ ಆಕೆಯ ಪೋಷಕರು ಪತ್ರ ಬರೆದಿದ್ದಾರೆ ಎಂದು ಡೊಮಿನಿಕನ್ ರಿಪಬ್ಲಿಕ್ ರಾಷ್ಟ್ರೀಯ ಪೊಲೀಸ್ ವಕ್ತಾರ ಡಿಯಾಗೋ ಪೆಸ್ಕ್ವೇರಾ ಹೇಳಿದ್ದಾರೆ ಎಂದು ಎನ್‌ಬಿಸಿ ನ್ಯೂಸ್ ಮಂಗಳವಾರ ವರದಿ ಮಾಡಿದೆ.

ಡೊಮಿನಿಕನ್ ರಿಪಬ್ಲಿಕ್ ಅಧಿಕಾರಿಗಳು ಕೊನೆಯದಾಗಿ ಸುದೀಕ್ಷಾ ಅವರ ಜೊತೆಗಿದ್ದವರು ಎಂದು ಹೇಳಲಾದ ಸ್ಟೀವನ್ ರೈಬೆ ಎಂಬಾತನ ಪಾಸ್‌ಪೋರ್ಟ್ ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಎನ್ ನ್ಯೂಸ್ ವರದಿ ಮಾಡಿದೆ.

ಡೊಮಿನಿಕನ್ ರಿಪಬ್ಲಿಕ್ ಅಟಾರ್ನಿ ಜನರಲ್ ಯೆನಿ ಬೆರೆನಿಸ್ ರೆನೊಸೊ ಅವರು ಸ್ಟೀವನ್ ರೈಬೆ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ ಮತ್ತು ಸ್ಥಳೀಯ ಪ್ರಾಸಿಕ್ಯೂಟರ್‌ಗಳು ವಿಚಾರಣೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣದಲ್ಲಿ ರೈಬೆ ಅವರನ್ನು ಶಂಕಿತ ಎಂದು ಪರಿಗಣಿಸಲಾಗಿಲ್ಲ ಮತ್ತು ಅವರ ಮೇಲೆ ಯಾವುದೇ ಆರೋಪ ಹೊರಿಸಲಾಗಿಲ್ಲ. ರೈಬೆ ಅವರ ಪಾಸ್‌ಪೋರ್ಟ್ ಅನ್ನು ಏಕೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.

ಮಾರ್ಚ್ 6ರ ಮುಂಜಾನೆ ಕೊನಾಂಕಿ ಕಾಣೆಯಾದಾಗಿನಿಂದ, ಮಿನ್ನೇಸೋಟದ ಸೇಂಟ್ ಕ್ಲೌಡ್ ಸ್ಟೇಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾದ 22 ವರ್ಷದ ರೈಬೆ ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಪೊಲೀಸ್ ಕಣ್ಗಾವಲಿನಲ್ಲಿದ್ದಾರೆ. ಅವರನ್ನು ಹಲವು ಬಾರಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಆತನ ಪೋಷಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾರ್ಚ್ 6ರ ಮುಂಜಾನೆ ಪಂಟಾ ಕಾನಾ ಬೀಚ್‌ನಿಂದ ಸುದೀಕ್ಷಾ ಅವರು ನಾಪತ್ತೆಯಾದ ಬಳಿಕ ಅವರ ಶಂಕಿತ ಸಾವಿನ ವಿಚಾರದಲ್ಲಿ ಯಾರ ಮೇಲೆಯೂ ಅಥವಾ ಯಾವುದೇ ಅನುಮಾನ ಇಲ್ಲ ಎಂದಿರುವ ಸುದೀಕ್ಷಾ ಪೋಷಕರು, ಸೋಮವಾರ ಅಧಿಕಾರಿಗಳಿಗೆ ಔಪಚಾರಿಕ ಪತ್ರ ಬರೆದಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಕದನ ವಿರಾಮ ಮುರಿದ ಇಸ್ರೇಲ್, ಗಾಝಾ ಪಟ್ಟಿಯಾದ್ಯಂತ ವೈಮಾನಿಕ ದಾಳಿ; 200ಕ್ಕೂ ಅಧಿಕ ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...