Homeಕರ್ನಾಟಕಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ...

ಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

- Advertisement -
- Advertisement -

14 ವರ್ಷದ ದಲಿತ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ  ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಲ್ಲಿ ನಡೆದಿದೆ.

ತಮ್ಮ ಮಾತಿನಂತೆ ಸಂಧಾನಕ್ಕೆ ಒಪ್ಪದೆ ದೂರು ನೀಡಿದರು ಎಂಬ ಕಾರಣಕ್ಕೆ ದಲಿತ ಕುಟುಂಬವನ್ನು ಬಹಿಷ್ಕರಿಸಿರುವ ಸವರ್ಣೀಯರು, ಗ್ರಾಮದ ಅಂಗಡಿಗಳಲ್ಲಿ ದಿನಸಿ ಸಾಮಗ್ರಿ ನೀಡದಂತೆ ಷರತ್ತು ವಿಧಿಸಿದ್ದಾರೆ. ಈ ಸಾಮಾಜಿಕ ಬಹಿಷ್ಕಾರದಿಂದಾಗಿ ಗ್ರಾಮದ ದಲಿತ ಸಮುದಾಯದ ಮಕ್ಕಳಿಗೆ ಅಗತ್ಯವಿರುವ ಪೆನ್ನು, ನೋಟುಬುಕ್ ಮತ್ತು ದೈನಂದಿನ ದಿನಸಿ ಸಾಮಗ್ರಿ ಸಿಗದೆ ಹಲವು ಕುಟುಂಬಗಳು ಪರದಾಡುತ್ತಿವೆ. ಗ್ರಾಮದಲ್ಲಿ ಕಡಿಮೆ ಸಂಖ್ಯೆಯಲ್ಲಿರುವ ದಲಿತರು, ಇದೀಗ ಸಾಮಾಜಿಕ ಬಹಿಷ್ಕಾರದಿಂದಾಗಿ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಬಹಿಷ್ಕಾರಕ್ಕೆ ಕಾರಣವೇನು?

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿ ಆಗಲು ಕಾರಣನಾಗಿದ್ದ ಯುವಕನ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲು ದೂರು ದಾಖಲಿಸಿದ್ದರು. ಆರೋಪಕ್ಕೆ ಸಂಬಂಧಿಸಿ ಸಂತ್ರಸ್ತೆ ಕುಟುಂಬಸ್ಥರು ಸಂಧಾನಕ್ಕೆ ಒಪ್ಪದೆ, ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದರಿಂದ ಕೋಪಗೊಂಡ ಗ್ರಾಮದ ಸವರ್ಣೀಯರು ಇಡೀ ಗ್ರಾಮದ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ಗ್ರಾಮದಲ್ಲಿ ದಲಿತರಿಗ್ಯಾರಿಗೂ ದಿನಸಿ ಹಾಗೂ ಮತ್ತಿತರೆ ದೈನಂದಿನ ಬಳಕೆ ವಸ್ತುಗಳನ್ನು ಮಾರಾಟ ಮಾಡದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ ಎನ್ನಲಾಗಿದೆ. ಉಪ್ಪು ಖರೀದಿಸಲು ಅಂಗಡಿಯೊಂದಕ್ಕೆ ತೆರಳಿದ್ದ ದಲಿತ ಮಹಿಳೆ ಮತ್ತು ಪೆನ್ನು ಖರೀದಿಸಲು ತೆರಳಿದ್ದ ಶಾಲಾ ಮಕ್ಕಳಿಗೆ ಅಂಗಡಿ ಮಾಲೀಕರು ಬಹಿಷ್ಕಾರ ಹಾಕಿರಯವ ವಿಚಾರವನ್ನು ಹೇಳಿದ್ದಾರೆ ಎನ್ನಲಾಗಿದೆ.

ಇಂಥ ಬಹಿಷ್ಕಾರ ಕುರಿತ ಧ್ವನಿಮುದ್ರಿಕೆ (ಆಡಿಯೋ ರೆಕಾರ್ಡಿಂಗ್) ಇದೀಗ ವೈರಲ್‌ ಆಗಿದ್ದು, ಅದರಲ್ಲಿ ಯಾವುದೇ ತರಹದ ವಸ್ತುಗಳು ನೀಡಬಾರದು ಎಂದು ತಮಗೆ ಗ್ರಾಮದ ಪ್ರಮುಖರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆಂದು ಅಂಗಡಿಯವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಶಾಲೆಗೆ ಹೊರಟಿರುವ ಮಕ್ಕಳಿಗಾದರೂ ಪೆನ್ನು ಪೆನ್ಸಿಲ್‌ ಆದರೂ ನೀಡಿ ಎಂದು ಯುವಕ ಕೇಳಿಕೊಂಡರೂ ಕೊಡಲೊಪ್ಪದ ಅಂಗಡಿ ಮಾಲೀಕರು, ಪೆನ್ನು, ಪುಸಕ್ತವಷ್ಟೇ ಅಲ್ಲ, ನಿಮ್ಮ ಮಂದಿಗೆ (ದಲಿತರು) ಯಾವುದನ್ನೂ ಕೊಡಬಾರದು ಎಂದು ಆಜ್ಞೆಯಾಗಿದೆ ಎಂದು ತಿಳಿಸುತ್ತಾರೆ. ಈ ಸಾಮಾಜಿಕ ಕ್ರೌರ್ಯದಿಂದಾಗಿ ಬೆರಳಣಿಕೆಯಷ್ಟಿರುವ ಬಪ್ಪರಗಾ ಗ್ರಾಮದ ದಲಿತ ವರ್ಗದಲ್ಲಿ ಆತಂಕ ಮನೆ ಮಾಡಿದೆ.

ಘಟನೆ ಹಿನ್ನಲೆ:

ಬಪ್ಪರಗಾ ಗ್ರಾಮದ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿದ್ದ ಪ್ರಬಲ ಜಾತಿ ಯುವಕನೊಬ್ಬ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಆಕೆ 5 ತಿಂಗಳ ಗರ್ಭಿಣಿಯಾಗಿದ್ದು, ಮದುವೆಗೆ ನಿರಾಕರಿಸಿದ್ದ. ಈ ಸಂಬಂಧ ಒಂದು ತಿಂಗಳ ಹಿಂದೆ ನಾರಾಯಣಪುರ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಬಾಲಕಿ ತಾಯಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ತಮ್ಮೆದುರು ಸಂಧಾನಕ್ಕೆ ಬರುವ ಬದಲು ನೇರವಾಗಿ ಠಾಣೆಗೆ ತೆರಳಿ ದೂರು ದಾಖಲಿಸಿದ್ದಕ್ಕೆ ಆಕ್ರೋಶಗೊಂಡ ಸವರ್ಣೀಯರು, ಇಡೀ ದಲಿತ ಸಮುದಾಯಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಾಗಿದೆ.

ಪರಿಶಿಷ್ಟ ಸಮುದಾಯದ ಜನರ ಜೊತೆಗೆ ಯಾವುದೇ ರೀತಿಯ ವ್ಯವಹಾರ ಮಾಡದಂತೆ ಎಲ್ಲ ಅಂಗಡಿಗಳಿಗೆ ತಾಕೀತು ಮಾಡಿ, ನಮಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ದಿನಸಿ ಪದಾರ್ಥವಷ್ಟೇ ಅಲ್ಲ, ಶಾಲಾ ಮಕ್ಕಳಿಗೆ ಪೆನ್ನು, ನೋಟ್‌ಬುಕ್ ಸೇರಿದಂತೆ ಯಾವುದೇ ಸಾಮಗ್ರಿಗಳನ್ನೂ ಮಾರಾಟ ಮಾಡುತ್ತಿಲ್ಲ ಎಂದು ಬಪ್ಪರಗಿ ಗ್ರಾಮದ ದಲಿತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ; ಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...