Homeಮುಖಪುಟ'ಸಂಸತ್ ಅಧಿವೇಶನಕ್ಕೆ ಮುನ್ನ ಮಣಿಪುರಕ್ಕೆ ಭೇಟಿ ನೀಡಿ' - ಪ್ರಧಾನಿಗೆ ಕಾಂಗ್ರೆಸ್ ಒತ್ತಾಯ

‘ಸಂಸತ್ ಅಧಿವೇಶನಕ್ಕೆ ಮುನ್ನ ಮಣಿಪುರಕ್ಕೆ ಭೇಟಿ ನೀಡಿ’ – ಪ್ರಧಾನಿಗೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ಮಣಿಪುರದಲ್ಲಿ ಹಿಂಸಾಚಾರದ ಬಗ್ಗೆ ರಾಜಕೀಯ ವಾಗ್ವದದ ಮಧ್ಯೆ, ಸಂಸತ್ತಿನ ಅಧಿವೇಶನದ ಮೊದಲು ಹಿಂಸಾಚಾರ ಪೀಡಿತ ರಾಜ್ಯದಕ್ಕೆ ಭೇಟಿ ನೀಡುವಂತೆ ಕಾಂಗ್ರೆಸ್ ಪಕ್ಷವು ಸೋಮವಾರ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿಕೊಂಡಿದೆ. ಅಷ್ಟೆ ಅಲ್ಲದೆ, ಮಣಿಪುರದ “ಡಬಲ್ ಇಂಜಿನ್ ಸರ್ಕಾರದ ಸಂಪೂರ್ಣ ವೈಫಲ್ಯ” ಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಪಕ್ಷವು ಒತ್ತಾಯಿಸಿದೆ. ಅಧಿವೇಶನಕ್ಕೆ ಮುನ್ನ

ಮೋದಿ ಅವರು ಮೊದಲು ಮಣಿಪುರದ ಸರ್ವಪಕ್ಷ ನಿಯೋಗವನ್ನು ಭೇಟಿ ಮಾಡಬೇಕು ಮತ್ತು ನವೆಂಬರ್ 25 ರಿಂದ ಪ್ರಾರಂಭವಾಗುವ ಸಂಸತ್ತಿನ ಅಧಿವೇಶನಕ್ಕೂ ಮುನ್ನ ರಾಷ್ಟ್ರಮಟ್ಟದಲ್ಲಿ ಸರ್ವಪಕ್ಷ ಸಭೆಯನ್ನು ಕರೆಯಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂವಹನದ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಣಿಪುರ ಕಾಂಗ್ರೆಸ್ ಮುಖ್ಯಸ್ಥ ಕೆ. ಮೇಘಚಂದ್ರ ಸಿಂಗ್ ಮತ್ತು ಎಐಸಿಸಿ ರಾಜ್ಯ ಉಸ್ತುವಾರಿ ಗಿರೀಶ್ ಚೋಡಂಕರ್ ಅವರೊಂದಿಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜೈರಾಮ್ ರಮೇಶ್, ಅಮಿತ್ ಶಾ ಮತ್ತು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಧಿವೇಶನಕ್ಕೆ ಮುನ್ನ

2023ರ ಮೇ 3ರಿಂದ ಮಣಿಪುರ ಹೊತ್ತಿ ಉರಿಯುತ್ತಿದೆ ಮತ್ತು ಪ್ರಧಾನಿ ಮೋದಿ ಅವರು ವಿಶ್ವದ ವಿವಿಧ ದೇಶಗಳಿಗೆ ಭೇಟಿ ನೀಡುತ್ತಾರೆ, ಧರ್ಮೋಪದೇಶವನ್ನು ನೀಡುತ್ತಾರೆ, ಆದರೆ ಮಣಿಪುರಕ್ಕೆ ಭೇಟಿ ನೀಡಲು ಅವರಿಗೆ ಸಮಯ ಸಿಗುವುದಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. “ಆದ್ದರಿಂದ, ನಮ್ಮ ಮೊದಲ ಬೇಡಿಕೆ ಏನೆಂದರೆ, ಸಂಸತ್ತಿನ ಅಧಿವೇಶನಕ್ಕೆ ಮುಂಚಿತವಾಗಿ ಪ್ರಧಾನಿ ಸಮಯ ಹೊಂದಿಸಿಕೊಳ್ಳಬೇಕು. ಮಣಿಪುರಕ್ಕೆ ಭೇಟಿ ನೀಡಬೇಕು. ಜೊತೆಗೆ ಅಲ್ಲಿನ ರಾಜಕೀಯ ಪಕ್ಷಗಳು, ರಾಜಕಾರಣಿಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ಅಲ್ಲಿನ ಪರಿಹಾರ ಶಿಬಿರದಲ್ಲಿರುವ ಜನರನ್ನು ಭೇಟಿ ಮಾಡಬೇಕು” ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಪ್ರಧಾನಿಯವರು ಮಣಿಪುರದ ಸರ್ವಪಕ್ಷ ನಿಯೋಗವನ್ನು ಭೇಟಿ ಮಾಡಬೇಕು ಮತ್ತು ನಂತರ ರಾಷ್ಟ್ರಮಟ್ಟದಲ್ಲಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“2024ರ ಜುಲೈ 31ರಿಂದ ಅಲ್ಲಿ ಪೂರ್ಣಾವಧಿ ರಾಜ್ಯಪಾಲರಿಲ್ಲ. ಅದಕ್ಕೂ ಮೊದಲು ಎಸ್‌ಟಿ ವ್ಯಕ್ತಿಯೊಬ್ಬರು ರಾಜ್ಯಪಾಲರಾಗಿದ್ದರು. ಆದರೆ ಅವರನ್ನು 18 ತಿಂಗಳೊಳಗೆ ತೆಗೆದುಹಾಕಲಾಯಿತು. ತಕ್ಷಣವೇ ಪೂರ್ಣಾವಧಿಯ ರಾಜ್ಯಪಾಲರನ್ನು ನೇಮಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಕಾಂಗ್ರೆಸ್ ಹೇಳಿದೆ.

ಪ್ರಧಾನಿ ಮೋದಿ ಅವರು ಮಣಿಪುರವನ್ನು ಗೃಹ ಸಚಿವರಿಗೆ “ಹೊರಗುತ್ತಿಗೆ” ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. “ಗೃಹ ಸಚಿವರು ಮತ್ತು ವಿಫಲ ಸಿಎಂ ನಡುವೆ ವಿಚಿತ್ರವಾದ ‘ಜುಗಲ್ಬಂದಿ’ ಇದೆ. ಗೃಹ ಸಚಿವರು ಸಿಎಂ ವೈಫಲ್ಯಗಳ ಬಗ್ಗೆ ಏನಕ್ಕೆ ಗಮನ ಹರಿಸಿಲ್ಲ ಮತ್ತು ಅವರನ್ನು ಉಳಿಸಲು ಏನಕ್ಕೆ ಪ್ರಯತ್ನಿಸುತ್ತಿದ್ದಾರೆ?” ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಬಿಜೆಪಿ ಸರ್ಕಾರ, ಪ್ರಧಾನಿ ಮತ್ತು ಗೃಹ ಸಚಿವರು ಪ್ರಾಮಾಣಿಕವಾಗಿ ಡ್ರಗ್ಸ್ ಮಾಫಿಯಾ ವಿರುದ್ಧ ಹೋರಾಡಲು ಬಯಸಿದರೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ಏಕೆ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡುವುದು ತಕ್ಷಣದ ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. “ಮಣಿಪುರದ ನೋವು ದೇಶದ ನೋವು, 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 60,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಇದು ಡಬಲ್ ಎಂಜಿನ್ ಸರ್ಕಾರದ ಸಂಪೂರ್ಣ ವೈಫಲ್ಯದ ಕಥೆಯಾಗಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

2022 ರ ಚುನಾವಣೆಯಲ್ಲಿ ಬಿಜೆಪಿ 60 ರಲ್ಲಿ 32 ಸ್ಥಾನಗಳನ್ನು ಗಳಿಸಿತು. ಆದರೆ 15 ತಿಂಗಳೊಳಗೆ ಮಣಿಪುರ ಹೊತ್ತಿ ಉರಿಯಲಾರಂಭಿಸಿತು ಎಂದು ಅವರು ಹೇಳಿದ್ದಾರೆ. “ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ ಮತ್ತು ಹಳಿತಪ್ಪಿದೆ. ಇದಕ್ಕೆ ಗೃಹ ಸಚಿವರೇ ನೇರ ಹೊಣೆಯಾಗಿದ್ದು, ಗೃಹ ಸಚಿವರು ಇದಕ್ಕೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ನಾವು ಬಯಸುತ್ತೇವೆ” ಎಂದು ಜೈರಾಮ್ ಹೇಳಿದ್ದಾರೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...