Homeಮುಖಪುಟನ.29ಕ್ಕೆ ಆಯೋಜಿಸಿದ್ದ ಸಂಸತ್‌ ಚಲೋ ಮುಂದೂಡಿಕೆ: ರೈತರ ಘೋಷಣೆ

ನ.29ಕ್ಕೆ ಆಯೋಜಿಸಿದ್ದ ಸಂಸತ್‌ ಚಲೋ ಮುಂದೂಡಿಕೆ: ರೈತರ ಘೋಷಣೆ

- Advertisement -
- Advertisement -

ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ನವೆಂಬರ್ 29ರಂದು ನಡೆಯಬೇಕಿದ್ದ ಸಂಸತ್‌ ಚಲೋ ಅಥವಾ ಸಂಸತ್ತಿಗೆ ಮೆರವಣಿಗೆಯನ್ನು ಪ್ರತಿಭಟನಾ ನಿರತ ರೈತರು ಮುಂದೂಡಿದ್ದಾರೆ.

ಒಂದು ವರ್ಷದಿಂದ ನಡೆಯುತ್ತಿರುವ ಪ್ರತಿಭಟನೆಯ ಮುಂದಿನ ನಡೆಗಳನ್ನು ನಿರ್ಧರಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಅಡಿಯಲ್ಲಿ ರೈತ ಮುಖಂಡರು ನಡೆಸಿದ ಸಭೆಯ ನಂತರ ಸಂಸತ್‌ ಚಲೋ ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೈತ ನಾಯಕ ದರ್ಶನ್ ಪಾಲ್ ಸಿಂಗ್, “ನವೆಂಬರ್ 29ರಂದು ಆಯೋಜಿಸಲಾಗಿದ್ದ ಟ್ರ್ಯಾಕ್ಟರ್ ರ್‍ಯಾಲಿಯನ್ನು ಮುಂದೂಡಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದೆ” ಎಂದು ತಿಳಿಸಿದ್ದಾರೆ.

ಶಾಸನಬದ್ಧವಾಗಿ ಎಂಎಸ್‌ಪಿ ಜಾರಿ ಸೇರಿದಂತೆ ವಿವಿಧ ವಿಷಯಗಳ ಬೇಡಿಕೆಗಾಗಿ ಸಂಸತ್‌ ಚಲೋವನ್ನು ಆಯೋಜಿಸಲಾಗಿತ್ತು. ಇದಕ್ಕೂ ಮುನ್ನ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, “ರೈತರು ತಮ್ಮ ಪ್ರತಿಭಟನೆಯನ್ನು ಕೈಬಿಟ್ಟು ಮನೆಗೆ ಹೋಗಬೇಕು” ಎಂದು ಒತ್ತಾಯಿಸಿದ್ದರು.

26 ನವೆಂಬರ್, 2020ರಿಂದ ದೆಹಲಿಯ ವಿವಿಧ ಗಡಿಗಳಲ್ಲಿ ರೈತರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ವಾರ, ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಕೇಂದ್ರವು ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕ್ರಮ ಕೈಗೊಳ್ಳಲಿದೆ.

ಕನಿಷ್ಠ ಬೆಂಬಲ ಬೆಲೆ (MSP) ಫ್ರೇಮ್‌ವರ್ಕ್‌‌ಗಾಗಿ ಸರ್ಕಾರ ಸಮಿತಿಯನ್ನು ರಚಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ. ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲು ಸರ್ಕಾರ ಮುಂದಾಗಿದೆ. 26 ಹೊಸ ಮಸೂದೆಗಳು ಚಳಿಗಾಲದ ಅಧಿವೇಶದಲ್ಲಿ ಮಂಡನೆಯಾಗಲಿದ್ದು, ಅದರಲ್ಲಿ ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮಸೂದೆಯೂ ಒಂದಿದೆ.

ಎಂಎಸ್‌ಪಿ ಕಾಯ್ದೆಯ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಂಡ ನಂತರ ರೈತರು ಮನೆಗೆ ಹೋಗುತ್ತಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.


ಇದನ್ನೂ ಓದಿರಿ: ನೀಟ್‌ ವಿರುದ್ಧ ಎಚ್‌ಡಿಕೆ ಸರಣಿ ಟ್ವೀಟ್‌; ನಂತರ ಡಿಲೀಟ್‌- ಕಾರಣ ಸ್ವಾರಸ್ಯಕರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...