ಸಂಸತ್ತಿನ ಮುಂಗಾರು ಅಧಿವೇಶನ: ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ ಕುರಿತು ಚರ್ಚೆಗೆ ಪ್ರತಿಪಕ್ಷಗಳ ಪಟ್ಟು

ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ (ಜುಲೈ 21) ಗದ್ದಲದೊಂದಿಗೆ ಆರಂಭಗೊಂಡಿತು. ಉಭಯ ಸದನಗಳಲ್ಲಿ ಕಲಾಪ ಆರಂಭಗೊಳ್ಳುತ್ತಿದ್ದಂತೆ ‘ಪಹಲ್ಗಾಮ್ ಭಯೋತ್ಪಾದಕ ದಾಳಿ’ ಮತ್ತು ‘ಅಪರೇಷನ್ ಸಿಂಧೂರ’ ಕುರಿತು ಚರ್ಚಿಸಲು ಪ್ರತಿಪಕ್ಷಗಳು ಪಟ್ಟು ಹಿಡಿದವು. ಗದ್ದಲ ಹೆಚ್ಚಾಗುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಲೋಕಸಭೆ ಕಲಾಪವನ್ನು 12 ಗಂಟೆಗೆ ಮುಂದೂಡಿದರು. 12 ಗಂಟೆಗೆ ಕಲಾಪ ಪುನರಾರಂಭಗೊಳ್ಳುತ್ತಿದ್ದಂತೆ ಗದ್ದಲ ಮುಂದುವರಿಯಿತು. ಹಾಗಾಗಿ, 2 ಗಂಟೆಗೆ ಸದನವನ್ನು ಮುಂದೂಡಿದರು. ರಾಜ್ಯಸಭೆಯಲ್ಲೂ ಗದ್ದಲದೊಂದಿಗೆ ಕಲಾಪ ಆರಂಭಗೊಂಡಿತು. ಆಪರೇಷನ್ ಸಿಂಧೂರ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿದ್ದಂತೆ ಸ್ಪೀಕರ್ … Continue reading ಸಂಸತ್ತಿನ ಮುಂಗಾರು ಅಧಿವೇಶನ: ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ ಕುರಿತು ಚರ್ಚೆಗೆ ಪ್ರತಿಪಕ್ಷಗಳ ಪಟ್ಟು