Homeಮುಖಪುಟಸಂಸತ್‌ನಲ್ಲಿ ಪ್ರತಿಧ್ವನಿಸಿದ ಅದಾನಿ ಹಗರಣ, ಸಂಭಾಲ್ ಹಿಂಸಾಚಾರ : ಉಭಯ ಸದನಗಳ ಕಲಾಪ ಮುಂದೂಡಿಕೆ

ಸಂಸತ್‌ನಲ್ಲಿ ಪ್ರತಿಧ್ವನಿಸಿದ ಅದಾನಿ ಹಗರಣ, ಸಂಭಾಲ್ ಹಿಂಸಾಚಾರ : ಉಭಯ ಸದನಗಳ ಕಲಾಪ ಮುಂದೂಡಿಕೆ

- Advertisement -
- Advertisement -

ಅದಾನಿ ಲಂಚ-ವಂಚನೆ ಪ್ರಕರಣ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ವಿಷಯಗಳ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆ ಹಿನ್ನೆಲೆ, ಸಂಸತ್ತಿನ ಉಭಯ ಸದನಗಳ ಕಲಾಪಗಳು ಮುಂದೂಡಲಾಗಿದೆ.

ಇಂದು (ನ.27) ಲೋಕಸಭೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ವಿವಿಧ ವಿಷಯಗಳ ಚರ್ಚೆಗೆ ಒತ್ತಾಯಿಸಿದರು. ಸದನದ ಬಾವಿಗಿಳಿದು ಪ್ರತಿಭಟಿಸಿದರು. ಈ ಹಿನ್ನೆಲೆ ಸ್ಪೀಕರ್ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು. ಬಳಿಕ ಪುನರಾರಂಭಗೊಂಡಾಗ ಪ್ರತಿಪಕ್ಷ ಸದಸ್ಯರು ಪ್ರತಿಭಟನೆ ಮುಂದುವರೆಸಿದರು. ಈ ಹಿನ್ನೆಲೆ ಸ್ಪೀಕರ್ ಕಲಾಪವನ್ನು ನಾಳೆಗೆ ಮುಂದೂಡಿದರು.

ಪ್ರತಿ ಸದಸ್ಯರ ಪ್ರತಿಭಟನೆ ವೇಳೆ, ಸ್ಪೀಕರ್ ಓಂ ಬಿರ್ಲಾ ಅವರು ಪ್ರಶ್ನೋತ್ತರ ಅವಧಿಗೆ ಅವಕಾಶ ಕೊಡಿ. ನಂತರ ಪ್ರಸಕ್ತ ವಿಷಯಗಳ ಬಗ್ಗೆ ಚರ್ಚೆ ನಡೆಸಬಹುದು ಎಂದರು. ಆದರೆ, ಪ್ರತಿಪಕ್ಷ ಸದಸ್ಯರು ಮೊದಲು ಚರ್ಚೆಗೆ ಪಟ್ಟು ಹಿಡಿದರು. ಗದ್ದಲದ ನಡುವೆ ಒಂದು ಪ್ರಶ್ನೆಯನ್ನು ಕೇಳಲಾಯಿತು. ಸುಮಾರು 6 ನಿಮಿಷಗಳ ಕಲಾಪದ ಬಳಿಕ, ಸದನವನ್ನು ಮುಂದೂಡಲಾಯಿತು.

ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ

ಪ್ರತಿಪಕ್ಷಗಳ ಸದಸ್ಯರು ಲೋಕಸಭೆಯಲ್ಲಿ ಎತ್ತಿದ ಪ್ರಶ್ನೆಗಳನ್ನೇ ರಾಜ್ಯಸಭೆಯಲ್ಲೂ ಪ್ರಸ್ತಾಪಿಸಿ ಚರ್ಚೆಗೆ ಪಟ್ಟು ಹಿಡಿದವು. ಈ ಹಿನ್ನೆಲೆ ಆರಂಭದಲ್ಲಿ ಬೆಳಿಗ್ಗೆ 11.30ರವರೆಗೆ ಕಲಾಪ ಮುಂದೂಡಲಾಯಿತು. ಕಲಾಪ ಪುನರಾರಂಭಗೊಂಡಾಗ ಪ್ರತಿಪಕ್ಷ ಸದಸ್ಯರು ಮತ್ತೆ ಪ್ರತಿಭಟಿಸಿದರು. ಈ ಹಿನ್ನೆಲೆ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಕಲಾಪವನ್ನು ನಾಳೆಗೆ (ನ.28) ಮುಂದೂಡಿದರು.

ಕಲಾಪ ಆರಂಭಗೊಂಡಾಗ, ಪಟ್ಟಿ ಮಾಡಲಾದ ವಿಷಯಗಳನ್ನು ಸದನದಲ್ಲಿ ಮಂಡಿಸಿದ ಕೂಡಲೇ, ಅಧ್ಯಕ್ಷ ಜಗದೀಪ್ ಧನ್ಕರ್ ಅವರು, ನಿಗದಿತ ಚರ್ಚೆಗಳನ್ನು ನಿಲ್ಲಿಸಿ ಅದಾನಿ ಸಮೂಹ, ಸಂಭಾಲ್‌ ಹಿಂಸಾಚಾರ ಮತ್ತು ದೆಹಲಿಯಲ್ಲಿ ಹೆಚ್ಚುತ್ತಿರುವ ಅಪರಾಧ ಘಟನೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸುವಂತೆ ಕೋರಿ ನಿಯಮ 267 ರ ಅಡಿಯಲ್ಲಿ 18 ನೋಟಿಸ್‌ಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು.

ಆದರೆ, ಅವರು ನೋಟಿಸ್‌ಗಳನ್ನು ಸ್ವೀಕರಿಸಲಿಲ್ಲ. ಇದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಗೆ ಕಾರಣವಾಯಿತು. ನಂತರ ಸಭಾಪತಿ ಕಲಾಪವನ್ನು ಮುಂದೂಡಿದರು.

ಇದನ್ನೂ ಓದಿ | ಮಣಿಪುರ: ನ.16ರಿಂದ ಪ್ರಾರಂಭವಾಗದ ಶಾಲಾ-ಕಾಲೇಜುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...