Homeಮುಖಪುಟರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಪೊಲೀಸರು

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಪೊಲೀಸರು

- Advertisement -
- Advertisement -

ಗುರುವಾರ (ಡಿ.19) ಸಂಸತ್‌ ಭವನದ ಆವರಣದಲ್ಲಿ ಪ್ರತಿಭಟನೆ ವೇಳೆ ಇಂಡಿಯಾ ಮತ್ತು ಎನ್‌ಡಿಎ ಬಣದ ಸಂಸದರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸಂಸತ್ತಿನ ಆವರಣದಲ್ಲಿ ನಡೆದ ಘರ್ಷಣೆಯ ಸಂದರ್ಭದಲ್ಲಿ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ರಾಹುಲ್ ಗಾಂಧಿ ತಳ್ಳಿದ್ದರಿಂದ ಬಿಜೆಪಿ ಸಂಸದರಾದ ಪ್ರತಾಪ್ ಚಂದ್ರ ಸಾರಂಗಿ ಮತ್ತು ಮುಕೇಶ್ ರಜಪೂತ್ ಅವರು ನೆಲಕ್ಕೆ ಬಿದ್ದು ಗಾಯಗಳಾಗಿವೆ ಎಂದು ಬಿಜೆಪಿ ಸಂಸದರಾದ ಅನುರಾಗ್ ಠಾಕೂರ್, ಬಾನ್ಸುರಿ ಸ್ವರಾಜ್ ಮತ್ತು ಹೇಮಂಗ್ ಜೋಶಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಗುರುವಾರ ಸಂಜೆ ದೂರು ನೀಡಿದ್ದರು. ‘ಕೊಲೆಯತ್ನ’ ಮತ್ತು ಇತರ ಆರೋಪಗಳಡಿ ರಾಹುಲ್ ಗಾಂಧಿ ವಿರುದ್ದ ಪ್ರಕರಣ ದಾಖಲಿಸುವಂತೆ ಕೋರಿದ್ದರು.

ವಡೋದರಾ ಸಂಸದ ಹೇಮಂಗ್ ಜೋಶಿ ಅವರು ಸಲ್ಲಿಸಿರುವ ದೂರಿನಲ್ಲಿ ರಾಹುಲ್ ಗಾಂಧಿ ಅವರು ಬಿಜೆಪಿ ಸಂಸದರ ಕೊಲೆ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ವರದಿಗಳ ಪ್ರಕಾರ, ರಾಹುಲ್ ಗಾಂಧಿ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 117 (ಸ್ವಯಂ ಪ್ರೇರಿತವಾಗಿ ನೋವುಂಟು ಮಾಡುವುದು), 125 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕ್ರಿಯೆ), 131 (ಕ್ರಿಮಿನಲ್ ಬಲ ಪ್ರಯೋಗ), 351 (ಕ್ರಿಮಿನಲ್ ಬೆದರಿಕೆ) ಮತ್ತು 3(5) ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕಾಂಗ್ರೆಸ್‌ನಿಂದ ಪ್ರತಿದೂರು 

ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಬಿಜೆಪಿ ಸಂಸದರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರ ನಿಯೋಗ ಗುರುವಾರ ಪೊಲೀಸ್ ದೂರು ದಾಖಲಿಸಿದೆ. ಬಿಜೆಪಿ ನಿಯೋಗ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ ಬಳಿಕ, ಕಾಂಗ್ರೆಸ್ ಪ್ರತಿದೂರು ನೀಡಿದೆ.

ಬಿಜೆಪಿ ಸಂಸದರು ಸಂಸತ್ ಭವನದ ಬಾಗಿಲ ಬಳಿ ನನ್ನನ್ನು ತಳ್ಳಿ ಹಲ್ಲೆ ಮಾಡಿದ್ದಾರೆ. ಇದರಿಂದ ಮೊಣಕಾಲಿಗೆ ಗಾಯವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆರೋಪಿಸಿ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ.

ಇದನ್ನೂ ಓದಿ : ಉಪರಾಷ್ಟ್ರಪತಿ ಧನಕರ್ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...