Homeಕರ್ನಾಟಕವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

ವಿಶೇಷ ಅಧಿವೇಶನ; ಜನಸಾಮಾನ್ಯರ ಸಮಸ್ಯೆ ಬಗ್ಗೆ ಚರ್ಚಿಸಲು ಬಹುತ್ವ ಕರ್ನಾಟಕ ಸಂಘಟನೆಯಿಂದ ಹಕ್ಕೊತ್ತಾಯ

- Advertisement -
- Advertisement -

ಕೇಂದ್ರ ಸರ್ಕಾರವು 2023ರ ಸೆಪ್ಟೆಂಬರ್ 18ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಘೋಷಿಸಿದೆ. ಈ ಅಧಿವೇಶನದ ಕಾರ್ಯಸೂಚಿಯನ್ನು ಬಹಿರಂಗಪಡಿಸಲು ಪ್ರತಿಪಕ್ಷಗಳು ಆಗ್ರಹಿಸಿದ್ದರೂ, ಕೇಂದ್ರ ಸರ್ಕಾರವು ಕಾರ್ಯಸೂಚಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆ ಬಹುತ್ವ ಕರ್ನಾಟಕ ಸಂಘಟನೆ ‘ಸಂಸತ್ತಿನ ವಿಶೇಷ ಅಧಿವೇಶನ- ಜನಸಾಮಾನ್ಯರ ಹಕ್ಕೊತ್ತಾಯ” ಬಿಡುಗಡೆ ಮಾಡಲು ಮುಂದಾಗಿದ್ದು, ಇದಕ್ಕೆ ಜನ ಸಾಮಾನ್ಯರಿಂದ ಅಭಿಪ್ರಾಯವನ್ನು ಕೇಳಿಕೊಂಡಿದೆ.

ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ನಿಮ್ಮ ಅನಿಸಿಕೆ, ಆಸೆಗಳನ್ನು ಕೆಳಗಿನ ಪ್ರಶ್ನಾವಳಿಗೆ ಉತ್ತರಿಸುವ ಮೂಲಕ ಅಭಿಪ್ರಾಯ ಕಳುಹಿಸಿಕೊಡಬೇಕೆಂದು ಈ ಸಂಘಟನೆ ಕೋರಿದೆ.

ಸಂಸತ್ತಿನ ಅಧಿವೇಶನಗಳು ಚುನಾಯಿತ ಸರ್ಕಾರದ ಅತ್ಯಂತ ನಿರ್ಣಾಯಕ ಸಾಂವಿಧಾನಿಕ ಪ್ರಕ್ರಿಯೆಗಳಲ್ಲಿ ಒಂದು. ಸಂಸತ್ತಿನ ಅಧಿವೇಶನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಂಸದರು, ಮಂತ್ರಿಗಳ ಕಾರ್ಯಕ್ಷಮತೆ ಬಗ್ಗೆ ಅಥವಾ ಪ್ರಮುಖ ವಿಷಯಗಳಲ್ಲಿ ಸರ್ಕಾರದ  ವೈಫಲ್ಯತೆ ಬಗ್ಗೆ ಪ್ರಶ್ನೆಗಳನ್ನು ಕೇಳಲು ಸಾಂವಿಧಾನಿಕ ಅವಕಾಶವಿದೆ.

ಆದರೆ ಸೆ.18ರ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಗೌಪ್ಯವಾಗಿರಿಸಿರುವುದು ಮಾತ್ರವಲ್ಲದೆ, ಪ್ರಶ್ನೋತ್ತರ ಅವಧಿ ಮತ್ತು ಶೂನ್ಯ ವೇಳೆಯಂತಹ ಪ್ರಮುಖ ಕಾರ್ಯವಿಧಾನಗಳನ್ನು ಕೂಡ ಸರ್ಕಾರ ಸ್ಥಗಿತಗೊಳಿಸಿದೆ. ಚುನಾಯಿತ ಸರ್ಕಾರದ ಹೊಣೆಗಾರಿಕೆಯನ್ನು ಪಡೆಯಲು ಸ್ಥಾಪಿಸಲಾದ ಸಂಸದೀಯ ಕಾರ್ಯವಿಧಾನಗಳನ್ನು ಈ ಸರ್ಕಾರವು ಅಮಾನತುಗೊಳಿಸಿರುವುದು ಆತಂಕದ ವಿಷಯ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ.

ಈ ವಿಶೇಷ ಅಧಿವೇಶನದಲ್ಲಿ ಜನಸಾಮಾನ್ಯರು ಎದುರಿಸುವ ಮುಖ್ಯ ಸಮಸ್ಯೆಗಳ ಬಗ್ಗೆ ಚರ್ಚಿಸುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸಕ್ರೀಯ ನಾಗರಿಕರಾದ ನಿಮ್ಮಿಂದ, ಈ ವಿಶೇಷ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂದು ಅನಿಸಿಕೆ, ಆಸೆಗಳನ್ನು ನಮ್ಮೊಂದಿಗೆ ಕೆಳಗಿನ ಪ್ರಶ್ನಾವಳಿಯ ಮೂಲಕ ಹಂಚಿಕೊಳ್ಳಲು ಕೋರುತ್ತೇವೆ ಎಂದು ಬಹುತ್ವ ಕರ್ನಾಟಕ ಸಂಘಟನೆ ಹೇಳಿದೆ ಅಲ್ಲದೆ ಈ ಪ್ರಶ್ನಾವಳಿಗೆ ಉತ್ತರಿಸುವವರ ಹೆಸರು, ಇ-ಮೇಲ್, ವಿಳಾಸ, ಯಾವ ಮಾಹಿತಿಯನ್ನೂ ನಾವು ಸಂಗ್ರಹಿಸುವುದಿಲ್ಲ ಎಂದು ಸಂಘಟನೆ ಹೇಳಿದೆ.

ಪ್ರಶ್ನಾವಳಿಗಳು ಈ ಕೆಳಗಿನ ರೀತಿ ಇರಲಿದೆ..

ಈ ವಿಶೇಷ ಅಧಿವೇಶನದಲ್ಲಿ ಚರ್ಚಿಸಬೇಕೆಂದು ನೀವು ಭಾವಿಸುವ ಪ್ರಮುಖ 3 ವಿಷಯಗಳನ್ನು ಆಯ್ಕೆ ಮಾಡಿ  

ಮಣಿಪುರದಲ್ಲಿ 5 ತಿಂಗಳಿಗಿಂತಲೂ ಹೆಚ್ಚು ಕಾಲ ನಡೆಯುತ್ತಿರುವ ಹಿಂಸಾಚಾರ

ಭಾರತದ ವಿವಿಧ ಭಾಗಗಳಲ್ಲಿ ಪ್ರವಾಹ, ಬರ, ಹೀಟ್ ವೇವ್, ಇತರ ಹವಾಮಾನ ವೈಪರಿತ್ಯದಿಂದಾಗುತ್ತಿರುವ ಅಪಾಯಗಳು

ಮಹಿಳೆಯರ ವಿರುದ್ಧ ನಿರಂತರ ಅಪರಾಧಗಳು

ಹೆಚ್ಚುತ್ತಿರುವ ಅನೈತಿಕ ಪೊಲೀಸ್ ಗಿರಿ, ಗೂಂಡಾಗಿರಿ ಹಾಗೂ ಸರ್ಕಾರದಿಂದ ಜನರ ಮನೆ ಮೇಲೆ ಕಾನೂನು ಬಾಹಿರವಾಗಿ ಬುಲ್ಡೋಜರ್ ಬಳಕೆ

ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು

ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಹೆಚ್ಚುತ್ತಿರುವ ಬೆಲೆಗಳು

ನಿರುದ್ಯೋಗ ಮತ್ತು ಉದ್ಯೋಗ ಅಭದ್ರತೆಯ ಮುಂದುವರಿಯುತ್ತಿರುವ ಬಿಕ್ಕಟ್ಟು

ಅದಾನಿ ಕಂಪನಿಗಳ ಮೇಲಿನ ಭ್ರಷ್ಟಾಚಾರ, ಹಣಕಾಸಿನ ಅಕ್ರಮಗಳ ಆರೋಪಗಳು

ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು

ಈ ಪ್ರಶ್ನೆಗಳಿಗೆ ಉತ್ತರಿಸಿ

ನೀವು ಯಾವ ರಾಜ್ಯದಲ್ಲಿ ವಾಸಿಸುತ್ತೀರಿ?

ನಿಮ್ಮ ಸಂಸದೀಯ ಕ್ಷೇತ್ರ ಯಾವುದು?

ಇದನ್ನು ಓದಿ: ಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...