Homeಮುಖಪುಟಸಂಸತ್ತಿನ ಮಾನ್ಸೂನ್ ಅಧಿವೇಶನ: ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ !

ಸಂಸತ್ತಿನ ಮಾನ್ಸೂನ್ ಅಧಿವೇಶನ: ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ !

ಅಧಿವೇಶನಕ್ಕೆ ಹಾಜರಾಗುವ ಮಾಧ್ಯಮ ವ್ಯಕ್ತಿಗಳ ಕೊರೊನಾ ಪರೀಕ್ಷೆಗೆ ಸಂಬಂಧಿಸಿದಂತೆ ಕಾರ್ಯದರ್ಶಿಗಳು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಕೊರೊನಾ ಪರೀಕ್ಷೆಗೆ ಸಂಬಂಧಿಸಿದ ವೈದ್ಯಕೀಯ ವರದಿಗಳನ್ನು ತಾವಾಗಿಯೇ ನೀಡುವಂತೆ ಕೇಳಲಾಗಿದೆ

- Advertisement -
- Advertisement -

ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿ ದೇಶದಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕೇಂದ್ರ ಸರ್ಕಾರ ಈಗ ಅಧಿವೇಶನಕ್ಕೆ ಮಾಧ್ಯಮಗಳ ಪ್ರವೇಶವನ್ನು ನಿರ್ಬಂಧಿಸಿದೆ.

“ಲೋಕಸಭೆ ಮತ್ತು ರಾಜ್ಯಸಭೆಯ ಅಧಿವೇಶನದ ವರದಿ ಮಾಡಲು ಬೆರಳೆಣಿಕೆಯಷ್ಟು ಮಾಧ್ಯಮಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಒಂದು ದಿನಕ್ಕೆ ವರದಿ ಮಾಡಲು ಲೋಕಸಭೆಯ ಅಧಿವೇಶನದಲ್ಲಿ, ಗರಿಷ್ಠ 24 ಮಾಧ್ಯಮಗಳಿಗೆ ಅನುಮತಿಯಿದ್ದರೆ, ರಾಜ್ಯಸಭೆಯ ಅಧಿವೇಶನದಲ್ಲಿ ಕೇವಲ 15 ಮಾಧ್ಯಮದ ವ್ಯಕ್ತಿಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ” ಎಂದು ಲೋಕಸಭಾ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಒಂದು ದಿನ 39 ಮಾಧ್ಯಮ ವ್ಯಕ್ತಿಗಳನ್ನು ಹೊರತುಪಡಿಸಿ, ಯಾರನ್ನೂ ಸಂಸತ್ತಿನ ಆವರಣದಲ್ಲಿ ಎಲ್ಲಿಯೂ ಅನುಮತಿಸಲಾಗುವುದಿಲ್ಲ. ಸಂಸತ್ತಿನ ಮುಖ್ಯ ಪ್ರವೇಶ ಕೇಂದ್ರಗಳು ಮತ್ತು ಉಭಯ ಸದನಗಳಿಗೆ ಅನುಮತಿ ಪಡೆದ ಪತ್ರಕರ್ತರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಅಧಿವೇಶನಕ್ಕೆ ಹಾಜರಾಗುವ ಮಾಧ್ಯಮ ವ್ಯಕ್ತಿಗಳ ಕೊರೊನಾ ಪರೀಕ್ಷೆಗೆ ಸಂಬಂಧಿಸಿದಂತೆ ಕಾರ್ಯದರ್ಶಿಗಳು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಕೊರೊನಾ ಪರೀಕ್ಷೆಗೆ ಸಂಬಂಧಿಸಿದ ವೈದ್ಯಕೀಯ ವರದಿಗಳನ್ನು ತಾವಾಗಿಯೇ ನೀಡುವಂತೆ ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

“ಒಂದು ಮಾಧ್ಯಮ ಸಂಸ್ಥೆಯು ಏಳು ದಿನಗಳಿಗೊಮ್ಮೆ ಲೋಕಸಭೆಯ ವಿಚಾರಣೆಯನ್ನು ಮಾಡಲು ಪುನರಾವರ್ತನೆಯಾಗುತ್ತದೆ ಎಂದು ಅಧಿಕಾರಿ ಹೇಳಿದರು.

ಒಂದು ಮಾಧ್ಯಮ 7 ದಿನಗಳಿಗೊಮ್ಮೆ ಲೋಕಸಭೆಗೆ ಪುನರಾವರ್ತನೆಯಾಗಿ ಹಾಜರಾಗಬುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊರೊನಾ ಸಂಬಂಧಿತ ಪ್ರೋಟೋಕಾಲ್ ಗಳು ಜಾರಿಯಲ್ಲಿರುವುದರಿಂದ ಕೇವಲ ಒಂದು ಡಝನ್ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಸಂಸತ್ ಅಧಿವೇಶನ: ಪ್ರಶ್ನೆಯ ಸಮಯ ರದ್ದುಗೊಳಿಸಿದ ಕೇಂದ್ರದ ವಿರುದ್ಧ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...