Homeಮುಖಪುಟಮಹಿಳಾ ಮೀಸಲಾತಿ ಮಸೂದೆ 'ನಮ್ಮದು, ಅಪ್ನಾ ಹೈ': ಸೋನಿಯಾ ಗಾಂಧಿ ಪ್ರತಿಕ್ರಿಯೆ

ಮಹಿಳಾ ಮೀಸಲಾತಿ ಮಸೂದೆ ‘ನಮ್ಮದು, ಅಪ್ನಾ ಹೈ’: ಸೋನಿಯಾ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಮಹಿಳಾ ಮೀಸಲಾತಿ ಮಸೂದೆಯನ್ನು ಕೇಂದ್ರ ಸಚಿವ ಸಂಪುಟವು ಅಂಗೀಕರಿಸಿದೆ ಎಂಬ ವರದಿಗಳ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ‘ಇದು ನಮ್ಮದು, ಅಪ್ನಾ ಹೈ’ ಎಂದು ಹೇಳಿದ್ದಾರೆ.

2010ರಲ್ಲಿ ರಾಜ್ಯಸಭೆಯಲ್ಲಿ ಅಂಗೀಕರಿಸಲ್ಪಟ್ಟ ಮಹಿಳಾ ಮೀಸಲಾತಿ ಮಸೂದೆಯನ್ನು ಸೋನಿಯಾ ಗಾಂಧಿ ಉಲ್ಲೇಖಿಸಿದ್ದಾರೆ. ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತದಷ್ಟು ಸ್ಥಾನಗಳನ್ನು ಮೀಸಲಿಡುವುದಾಗಿದೆ.

ಈ ಮಹಿಳಾ ಮೀಸಲಾತಿ ಮಸೂದೆಯು 2010ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿಯೇ ರಾಜ್ಯಸಭೆಯಲ್ಲಿ ಅಂಗೀಕಾರವಾಗಿತ್ತು. ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರು ಈ ಕ್ರಮವನ್ನು ಸ್ವಾಗತಿಸುತ್ತಾ, ಕೇಂದ್ರ ಸರ್ಕಾರವು ಮಂಗಳವಾರ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದರೆ, ಅದು “ಕಾಂಗ್ರೆಸ್ ಮತ್ತು ಯುಪಿಎ ಸರ್ಕಾರದಲ್ಲಿ ಅದರ ಮಿತ್ರಪಕ್ಷಗಳಿಗೆ ಗೆಲುವು” ಎಂದು  ಹೇಳಿದ್ದಾರೆ.

”ಮಸೂದೆಯ ಕೂಗು ಸಾಯುತ್ತದೆ ಎನ್ನುವ ಹಂತದಲ್ಲಿ ಸಮಾಧಿ ಮಾಡಿದ ಮಸೂದೆಯನ್ನು ಬಿಜೆಪಿ ತನ್ನ 10ನೇ ವರ್ಷದಲ್ಲಿ, ಪುನರುತ್ಥಾನಗೊಳಿಸುತ್ತಿದೆ” ಎಂದು ಚಿದಂಬರಂ ಹೇಳಿದರು.

ಸರ್ಕಾರವು ಮಸೂದೆಯನ್ನು ಅನುಮೋದಿಸಿದೆ ಎಂದು ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಸೋಮವಾರ ಹೇಳಿದ ನಂತರ ಮಸೂದೆಯ ಸುತ್ತ ಚರ್ಚೆಗಳು ಶುರುವಾದವು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ: ಕೇಂದ್ರದ ನಡೆಯಲ್ಲಿ ಪಾರದರ್ಶಕತೆ ಕಾಣೆಯಾಗಿದೆ ಎಂದ ಕೆ. ಕವಿತಾ

ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು, ”ಸಚಿವ ಸಂಪುಟದ ಅನುಮೋದನೆಯಿಂದ ಸಾಬೀತಾಗಿರುವ ಮಹಿಳಾ ಮೀಸಲಾತಿ ಬೇಡಿಕೆಯನ್ನು ಈಡೇರಿಸುವ ನೈತಿಕ ಸ್ಥೈರ್ಯ ಮೋದಿ ಸರಕಾರಕ್ಕಿದೆ. ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಮತ್ತು ಮೋದಿ ಸರಕಾರಕ್ಕೆ ಅಭಿನಂದನೆಗಳು” ಎಂದುಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, ಅದನ್ನು ನಂತರ ಅಳಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಕೇಂದ್ರ ಸಚಿವ ಸಂಪುಟದ ವರದಿ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಮತ್ತು ಮಸೂದೆಯ ವಿವರಗಳಿಗಾಗಿ ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

”ವಿಶೇಷ ಅಧಿವೇಶನಕ್ಕೂ ಮುನ್ನ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಇದನ್ನು ಚೆನ್ನಾಗಿ ಚರ್ಚಿಸಬಹುದಿತ್ತು ಮತ್ತು ಗೌಪ್ಯವಾಗಿಟ್ಟು ಕಾರ್ಯನಿರ್ವಹಿಸುವ ಬದಲು ಒಮ್ಮತವನ್ನು ನಿರ್ಮಿಸಬಹುದಿತ್ತು” ಎಂದು ಅವರು ಟೀಕಿಸಿದರು.

ವಿಶೇಷ ಅಧಿವೇಶನ ಪ್ರಾರಂಭವಾಗುವ ಮೊದಲು ರಮೇಶ್ ಅವರು ”ಪ್ರಧಾನಿಯಾಗಿ ಡಾ. ಮನಮೋಹನ್ ಸಿಂಗ್ ಅವರು ಸಂಸತ್ತಿನಲ್ಲಿ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿಗಾಗಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ತಂದರು. ಮಸೂದೆಯನ್ನು ಮಾರ್ಚ್ 9, 2010 ರಂದು ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಆದರೆ ಲೋಕಸಭೆಯಲ್ಲಿ ಅದನ್ನು ಕೈಗೆತ್ತಿಕೊಳ್ಳಲಾಗಿಲ್ಲ ಎಂದು ರಮೇಶ್ ದೂರಿದರು. ರಾಜ್ಯಸಭೆಯಲ್ಲಿ ಮಂಡಿಸಿದ/ಅಂಗೀಕಾರಗೊಂಡ ವಿಧೇಯಕಗಳು ಲೋಪವಾಗುವುದಿಲ್ಲ ಮತ್ತು ಮಹಿಳಾ ಮೀಸಲಾತಿ ಮಸೂದೆ ಇನ್ನೂ ಹೆಚ್ಚು ಕ್ರಿಯಾಶೀಲವಾಗಿದೆ” ಎಂದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳದಲ್ಲಿ ತೀವ್ರಗೊಳ್ಳಲಿರುವ ಮಳೆ; ಆರೇಂಜ್-ಯೆಲ್ಲೋ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

0
ಮುಂದಿನ ಕೆಲವು ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಗುರುವಾರ ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮೇ 18 ರಂದು ಪಾಲಕ್ಕಾಡ್ ಮತ್ತು ಮಲಪ್ಪುರಂ, ಮೇ 19 ರಂದು...