ಪೆಗಾಸಸ್ ಗೂಢಚರ್ಯೆ ಮತ್ತು ವಿವಾದಿತ ಕೃಷಿ ಕಾನೂನುಗಳ ವಿಷಯದ ಬಗ್ಗೆ ಪ್ರತಿಪಕ್ಷಗಳು ಸದನದೊಳಗೆ ಮತ್ತು ಹೊರಗಡೆ ಪ್ರತಿಭಟನೆ ನಡೆಸಿದ್ದಾರೆ. ಪೆಗಾಸಸ್ ವಿಚಾರಕ್ಕೆ ಲೋಕಸಭೆಯನ್ನು ಗುರುವಾರ ಬೆಳಿಗ್ಗೆಯಿಂದ ಮಧ್ಯಾಹ್ನದ ಅವಧಿಯಲ್ಲೇ ಎರಡು ಬಾರಿ ಮುಂದೂಡಲಾಗಿತ್ತು.
ಅಧಿವೇಶನ ಆರಂಭಕ್ಕೂ ಮುನ್ನ ಕಾಂಗ್ರೆಸ್ ಸಂಸದರು ವಿವಾದಿತ ಕೃಷಿ ಕಾನೂನುಗಳ ವಿಷಯವಾಗಿ, ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನುಸೋಲಿಸಲು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕೆಲಸವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡುತ್ತಿದ್ದು, ದೆಹಲಿಯಲ್ಲಿರುವ ಅವರು ಎಲ್ಲಾ ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಹೀಗಾಗಿ ಅಧಿವೇಶನದಲ್ಲು ಪ್ರತಿಪಕ್ಷಗಳು ಒಂದಾಗಿ ಪ್ರತಿಭಟನೆ ನಡೆಸುತ್ತಿವೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ಸೈಕಲ್‌ನಲ್ಲಿ ಸಂಸತ್ ಅಧಿವೇಶನಕ್ಕೆ ಬಂದ ಟಿಎಂಸಿ ಸಂಸದರು
ಜುಲೈ 19 ರಂದು ಆರಂಭವಾದ ಮಾನ್ಸೂನ್ ಅಧಿವೇಶನ ಪ್ರಾರಂಭವಾದ ನಂತರ ಮೊದಲ ಬಾರಿಗೆ ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳು ಸಂಘಟಿತ ರೀತಿಯಲ್ಲಿ ಪ್ರತಿಭಟನೆ ನಡೆಸಿ, ಒಕ್ಕೂಟ ಸರ್ಕಾರದ ವಿರುದ್ಧ ಭಿತ್ತಿಪತ್ರಗಳ ಪ್ರದರ್ಶನ ಮತ್ತು ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸಿದರು.
ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಕಳೆದ 8 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
“ದೇಶದ ಅನ್ನದಾತರು ಅವರ ಹಕ್ಕುಗಳು, ಜೀವನ ಮತ್ತು ಜೀವನೋಪಾಯಕ್ಕಾಗಿ 246 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈ ನಿರ್ದಯ, ಮಮಕಾರವಿಲ್ಲದ ಸರ್ಕಾರಕ್ಕೆ ಯಾವುದೇ ಪರಿಣಾಮ ಬಿರುತ್ತಿಲ್ಲ. ಪ್ರಧಾನಿಯವರ ಬೇಜವಾಬ್ದಾರಿ ವರ್ತನೆ ಅನ್ನದಾತರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ.” ಎಂದು ಟ್ವೀಟ್ ಮಾಡಿದೆ.
देश का अन्नदाता अपने अधिकारों, जिंदगी और आजीविका के लिए 246 दिनों से विरोध प्रदर्शन कर रहा है। लेकिन एक निर्दयी, निर्मम सरकार को कोई फर्क नहीं पड़ रहा है।
प्रधानमंत्री का गैर-जिम्मेदार रवैया अन्नदाता की आवाज को कुचलने का प्रयास कर रहा है।#सवालों_से_डरती_मोदी_सरकार pic.twitter.com/aQ1yTmLTyP
— Congress (@INCIndia) July 29, 2021
ಇದನ್ನೂ ಓದಿ: ಸಂಸತ್ ಅಧಿವೇಶನ: ಖರ್ಗೆ ನೇತೃತ್ವದಲ್ಲಿ ವಿರೋಧ ಪಕ್ಷಗಳ ಮುಖಂಡರ ಸಭೆ


