Homeಮುಖಪುಟಮಾನ್ಸೂನ್ ಅಧಿವೇಶನ: ಪೆಗಾಸಸ್, ಕೃಷಿ ಕಾಯ್ದೆಗಳ ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆ

ಮಾನ್ಸೂನ್ ಅಧಿವೇಶನ: ಪೆಗಾಸಸ್, ಕೃಷಿ ಕಾಯ್ದೆಗಳ ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆ

- Advertisement -
- Advertisement -

ಪೆಗಾಸಸ್ ಗೂಢಚರ್ಯೆ ಮತ್ತು ವಿವಾದಿತ ಕೃಷಿ ಕಾನೂನುಗಳ ವಿಷಯದ ಬಗ್ಗೆ ಪ್ರತಿಪಕ್ಷಗಳು ಸದನದೊಳಗೆ ಮತ್ತು ಹೊರಗಡೆ ಪ್ರತಿಭಟನೆ ನಡೆಸಿದ್ದಾರೆ. ಪೆಗಾಸಸ್ ವಿಚಾರಕ್ಕೆ ಲೋಕಸಭೆಯನ್ನು ಗುರುವಾರ ಬೆಳಿಗ್ಗೆಯಿಂದ ಮಧ್ಯಾಹ್ನದ ಅವಧಿಯಲ್ಲೇ ಎರಡು ಬಾರಿ ಮುಂದೂಡಲಾಗಿತ್ತು.

ಅಧಿವೇಶನ ಆರಂಭಕ್ಕೂ ಮುನ್ನ ಕಾಂಗ್ರೆಸ್ ಸಂಸದರು ವಿವಾದಿತ ಕೃಷಿ ಕಾನೂನುಗಳ ವಿಷಯವಾಗಿ, ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನುಸೋಲಿಸಲು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕೆಲಸವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡುತ್ತಿದ್ದು, ದೆಹಲಿಯಲ್ಲಿರುವ ಅವರು ಎಲ್ಲಾ ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಹೀಗಾಗಿ ಅಧಿವೇಶನದಲ್ಲು ಪ್ರತಿಪಕ್ಷಗಳು ಒಂದಾಗಿ ಪ್ರತಿಭಟನೆ ನಡೆಸುತ್ತಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ಸೈಕಲ್‌ನಲ್ಲಿ ಸಂಸತ್ ಅಧಿವೇಶನಕ್ಕೆ ಬಂದ ಟಿಎಂಸಿ ಸಂಸದರು

ಜುಲೈ 19 ರಂದು ಆರಂಭವಾದ ಮಾನ್ಸೂನ್ ಅಧಿವೇಶನ ಪ್ರಾರಂಭವಾದ ನಂತರ ಮೊದಲ ಬಾರಿಗೆ ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳು ಸಂಘಟಿತ ರೀತಿಯಲ್ಲಿ ಪ್ರತಿಭಟನೆ ನಡೆಸಿ, ಒಕ್ಕೂಟ ಸರ್ಕಾರದ ವಿರುದ್ಧ ಭಿತ್ತಿಪತ್ರಗಳ ಪ್ರದರ್ಶನ ಮತ್ತು ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸಿದರು.

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಕಳೆದ 8 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

“ದೇಶದ ಅನ್ನದಾತರು ಅವರ ಹಕ್ಕುಗಳು, ಜೀವನ ಮತ್ತು ಜೀವನೋಪಾಯಕ್ಕಾಗಿ 246 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈ ನಿರ್ದಯ, ಮಮಕಾರವಿಲ್ಲದ ಸರ್ಕಾರಕ್ಕೆ ಯಾವುದೇ ಪರಿಣಾಮ ಬಿರುತ್ತಿಲ್ಲ. ಪ್ರಧಾನಿಯವರ ಬೇಜವಾಬ್ದಾರಿ ವರ್ತನೆ ಅನ್ನದಾತರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ.” ಎಂದು ಟ್ವೀಟ್ ಮಾಡಿದೆ.


ಇದನ್ನೂ ಓದಿ: ಸಂಸತ್‌‌ ಅಧಿವೇಶನ: ಖರ್ಗೆ ನೇತೃತ್ವದಲ್ಲಿ ವಿರೋಧ ಪಕ್ಷಗಳ ಮುಖಂಡರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...